ನವದೆಹಲಿ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಾಡಲು ಭಾರತ ಬರಲು ಬಾಂಗ್ಲಾದೇಶ ಹಿಂದೇಟು ಹಾಕುತ್ತಿರುವ ಬೆನ್ನಲ್ಲೇ ನೆರೆಯ ಪಾಕಿಸ್ತಾನ ಎಂಟ್ರಿಕೊಟ್ಟಿದ್ದು, ಬಾಂಗ್ಲಾದೇಶದ ಟಿ20 ವಿಶ್ವಕಪ್ ಪಂದ್ಯಗಳಿಗೆ ಆತಿಥ್ಯ ವಹಿಸಲು ನಾವು ಎಂದು ಮುಂದೆ ಬಂದಿದೆ. ಈ ಕುರಿತಾದ ಅಪ್‌ಡೇಟ್ಸ್ ಇಲ್ಲಿದೆ.
ಮುಂದಿನ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್‌ನ ಪಂದ್ಯಗಳನ್ನು ಭಾರತದಲ್ಲಿ ಆಡಲು ಬಾಂಗ್ಲಾದೇಶ ಹಿಂದೇಟು ಹಾಕುತ್ತಿದೆ. ಇದರ ಬೆನ್ನಲ್ಲೇ ಬಾಂಗ್ಲಾದೇಶದ ಪಂದ್ಯಗಳಿಗೆ ಆತಿಥ್ಯ ವಹಿಸಲು ಪಾಕಿಸ್ತಾನ ಒಲವು ತೋರಿದೆ.
27
ಮುಸ್ತಾಫಿಜುರ್‌ಗೆ ಐಪಿಎಲ್‌ನಿಂದ ಗೇಟ್‌ಪಾಸ್
ಐಪಿಎಲ್‌ನಲ್ಲಿ ಕೋಲ್ಕತಾ ನೈಟ್‌ರೈಡರ್ಸ್ ತಂಡದ ಭಾಗವಾಗಿದ್ದ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ್ ರಹ್ಮಾನ್‌ರನ್ನು ಬಿಸಿಸಿಐ ಲೀಗ್‌ನಿಂದ ಹೊರ ಕಳುಹಿಸಿತ್ತು.
37
ಭದ್ರತೆ ನೆಪವೊಡ್ಡಿ ಭಾರತಕ್ಕೆ ಬರಲು ಬಾಂಗ್ಲಾದೇಶ ಹಿಂದೇಟು
ಇದಕ್ಕೆ ಪ್ರತೀಕಾರ ಎಂಬಂತೆ ಬಾಂಗ್ಲಾ ಕ್ರಿಕೆಟ್ ಮಂಡಳಿಯು ಭದ್ರತೆಯ ಕಾರಣ ನೀಡಿ ಭಾರತದಲ್ಲಿ ವಿಶ್ವಕಪ್ ಆಡಲು ನಿರಾಕರಿಸಿದೆ.
ಇದರ ಲಾಭ ಪಡೆಯಲು ಮುಂದಾಗಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು, ಮತ್ತೊಂದು ಆತಿಥ್ಯ ದೇಶವಾಗಿರುವ ಶ್ರೀಲಂಕಾದಲ್ಲಿ ಕ್ರೀಡಾಂಗಣ ಲಭ್ಯವಿಲ್ಲದಿದ್ದರೆ ಬಾಂಗ್ಲಾದೇಶದ ಪಂದ್ಯಗಳನ್ನು ತನ್ನಲ್ಲಿಯೇ ಆಯೋಜಿಸಲು ಕೋರಿದೆ ಎಂದು ವರದಿಯಾಗಿದೆ. ಆದರೆ ಐಸಿಸಿ ಈ ಆಫರ್ ಒಪ್ಪೋದು ಬಹುತೇಕ ಅನುಮಾನ.
57
ಬಾಂಗ್ಲಾದೇಶ ವೇಳಾಪಟ್ಟಿ
ಬಾಂಗ್ಲಾದೇಶ ಆಡುವ ಗ್ರೂಪ್ ಹಂತದ ಎಲ್ಲಾ ಪಂದ್ಯಗಳು ಭಾರತದಲ್ಲೇ ನಿಗದಿಯಾಗಿದ್ದು, ಮೊದಲ ನಾಲ್ಕು ಪಂದ್ಯಗಳಿಗೆ ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನ ಆತಿಥ್ಯ ವಹಿಸಿದ್ದರೇ, ಕೊನೆಯ ಲೀಗ್ ಪಂದ್ಯಕ್ಕೆ ಮುಂಬೈನ ವಾಂಖೆಡೆ ಮೈದಾನ ಆತಿಥ್ಯ ವಹಿಸಿದೆ.
67
ಮೊದಲ ಮೂರು ಪಂದ್ಯಗಳಿಗೆ ಈಡನ್ ಗಾರ್ಡನ್ಸ್ ಆತಿಥ್ಯ
ಫೆಬ್ರವರಿ 07ರಂದು ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದ ನಂತರ, ಬಾಂಗ್ಲಾದೇಶ ಫೆಬ್ರವರಿ 9 ರಂದು ಇಟಲಿ ಮತ್ತು ಫೆಬ್ರವರಿ 14 ರಂದು ಇಂಗ್ಲೆಂಡ್ ಅನ್ನು ಎದುರಿಸಲಿದೆ. ಈ ಎಲ್ಲಾ ಪಂದ್ಯಗಳು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿವೆ.
77
ಕೊನೆಯ ಲೀಗ್ ಪಂದ್ಯಕ್ಕೆ ವಾಂಖೆಡೆ ಸ್ಟೇಡಿಯಂ ಆತಿಥ್ಯ
ಫೆಬ್ರವರಿ 17 ರಂದು ನೇಪಾಳ ವಿರುದ್ಧದ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ನಿರ್ದೇಶನದ ಮೇರೆಗೆ ಬಾಂಗ್ಲಾದೇಶ ತಂಡವು ಒಂದು ವೇಳೆ ಭಾರತಕ್ಕೆ ಬರಲು ನಿರಾಕರಿಸಿದರೆ, ಈ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕಾಗಬಹುದು ಎನ್ನಲಾಗುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.