2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ಭಾರತ ವಿರುದ್ದ 6 ವಿಕೆಟ್ ಭರ್ಜರಿ ಗೆಲುವು ಸಾಧಿಸಿದ ಆಸ್ಟ್ರೇಲಿಯಾ ತಂಡವು 6 ವಿಕೆಟ್ ಭರ್ಜರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.
ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಭಾರತ ವಿರುದ್ದ ಸೋಲು ಕಂಡಿದ್ದ ಆಸ್ಟ್ರೇಲಿಯಾ ತಂಡವು, ಫೈನಲ್‌ನಲ್ಲಿ ಭಾರತಕ್ಕೆ ತಿರುಗೇಟು ನೀಡುವಲ್ಲಿ ಯಶಸ್ವಿಯಾಗಿದೆ. ಆಸೀಸ್ ತಂಡವು ಆಲ್ರೌಂಡ್ ಪ್ರದರ್ಶನದ ಮೂಲಕ ಕಪ್ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ಇನ್ನು ವಿಶ್ವಕಪ್ ಗೆದ್ದ ಕೆಲವೇ ಗಂಟೆಗಳ ಬಳಿಕ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ನವೆಂಬರ್ 15ರಂದೇ ಮಾಡಿದ ಮಹತ್ವದ ತೀರ್ಮಾನ ಈಗ ವೈರಲ್ ಅಗುತ್ತಿದೆ. ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಘೋಷಿಸಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ.
ಮುಂಬರುವ ಆಷಸ್ ಟೆಸ್ಟ್ ಸರಣಿ ಹಾಗೂ 2024ರಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಸೂಕ್ತ ಅಭ್ಯಾಸ ನಡೆಸುವ ಉದ್ದೇಶದಿಂದ ತಾವು ಮುಂಬರುವ ಐಪಿಎಲ್‌ನಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಕಮಿನ್ಸ್ ಘೋಷಿಸಿದ್ದಾರೆ.
ಈ ಕುರಿತಂತೆ ನವೆಂಬರ್ 15ರಂದು ಟ್ವೀಟ್ ಮಾಡಿದ್ದ ಕಮಿನ್ಸ್, "ನಾನು ಮುಂದಿನ ವರ್ಷದ ಐಪಿಎಲ್‌ನಲ್ಲಿ ಪಾಲ್ಗೊಳ್ಳದೇ ಇರುವ ಕಠಿಣ ತೀರ್ಮಾನವನ್ನು ತೆಗೆದುಕೊಂಡಿದ್ದೇನೆ. ಮುಂದಿನ 12 ತಿಂಗಳುಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸಾಕಷ್ಟು ಟೆಸ್ಟ್ ಹಾಗೂ ಏಕದಿನ ಪಂದ್ಯಗಳ ವೇಳಾಪಟ್ಟಿ ಫಿಕ್ಸ್ ಆಗಿದೆ. ಹೀಗಾಗಿ ಆಷಸ್ ಹಾಗೂ ಏಕದಿನ ವಿಶ್ವಕಪ್‌ಗೂ ಮುನ್ನ ಕೊಂಚ ವಿಶ್ರಾಂತಿಯ ಅಗತ್ಯವಿದೆ ಎಂದು ಕಮಿನ್ಸ್ ಟ್ವೀಟ್ ಮಾಡಿದ್ದಾರೆ.
ಇದೀಗ ವಿಶ್ವಕಪ್ ಫೈನಲ್ ಪಂದ್ಯವನ್ನು ಗೆಲ್ಲುತ್ತಿದ್ದಂತೆ ಟ್ವೀಟ್ ಮಾಡಿರುವ ESPNcricinfo, ಪ್ಯಾಟ್ ಕಮಿನ್ಸ್ ಮುಂಬರುವ ಐಪಿಎಲ್‌ನಿಂದ ಹಿಂದೆ ಸರಿಯುವ ತ್ಯಾಗದ ನಿರ್ಧಾರಕ್ಕೆ ಬೆಲೆ ಸಿಕ್ಕಿದೆ. ಕಮಿನ್ಸ್ ನೇತೃತ್ವದಲ್ಲಿ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್, ಆಷಸ್ ಹಾಗೂ ವಿಶ್ವಕಪ್ ಏಕದಿನ ಜಯಿಸಿದೆ ಎಂದು ಟ್ವೀಟ್ ಮಾಡಿದೆ.
ಪ್ಯಾಟ್ ಕಮಿನ್ಸ್ 2022ರಲ್ಲಿ ಕೊನೆಯ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ಪರ ಕಣಕ್ಕಿಳಿದಿದ್ದರು. ಆದರೆ 2023ರ ಐಪಿಎಲ್‌ನಿಂದ ಹಿಂದೆ ಸರಿದಿದ್ದರು. ಇದೀಗ 2024ರ ಐಪಿಎಲ್‌ನಲ್ಲೂ ಕಮಿನ್ಸ್ ಪಾಲ್ಗೊಳ್ಳುತ್ತಿಲ್ಲ.