ಬೆಂಗಳೂರು: ರಾಜಸ್ಥಾನ ರಾಯಲ್ಸ್ ತಂಡದ ಹೆಡ್‌ಕೋಚ್ ರಾಹುಲ್ ದ್ರಾವಿಡ್ ತಮ್ಮ ಸ್ಥಾನಕ್ಕೆ ದಿಢೀರ್ ಎನ್ನುವಂತೆ ರಾಜೀನಾಮೆ ಸಲ್ಲಿಸಿದ್ದಾರೆ. ಅಷ್ಟಕ್ಕೂ ದ್ರಾವಿಡ್ ಕೇವಲ ಒಂದೇ ಸೀಸನ್ ಹೆಡ್‌ಕೋಚ್ ಬಳಿಕ ರಾಜೀನಾಮೆ ನೀಡಿದ್ದೇಕೆ? ತೆರೆಮರೆಯ ಸತ್ಯ ಏನು ನೋಡೋಣ ಬನ್ನಿ.
2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆದರೆ ಮರು ವರ್ಷದಲ್ಲೇ ದ್ರಾವಿಡ್‌ಗೆ ನಿರಾಸೆ ಕೂಡಾ ಎದುರಾಯಿತು.
28
ಭಾರತಕ್ಕೆ ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟ ಮರು ವರ್ಷವೇ ರಾಹುಲ್ ದ್ರಾವಿಡ್, ರಾಜಸ್ಥಾನ ರಾಯಲ್ಸ್ ತಂಡದ ಹೆಡ್‌ಕೋಚ್ ಆಗಿ ನೇಮಕವಾದರು.
38
ಆದರೆ ದ್ರಾವಿಡ್ ಮಾರ್ಗದರ್ಶನದಲ್ಲಿ 18ನೇ ಆವೃತ್ತಿಯ ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ತಂಡವು 14 ಪಂದ್ಯಗಳನ್ನಾಡಿ 10 ಸೋಲು 4 ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನ ಪಡೆದು ತನ್ನ ಅಭಿಯಾನ ಮುಗಿಸಿ ನಿರಾಸೆ ಅನುಭವಿಸಿತ್ತು.
ಇದೀಗ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು 2026ರ ಐಪಿಎಲ್ ಟೂರ್ನಿಗೆ ಸಿದ್ದತೆ ಆರಂಭಿಸಿರುವ ಬೆನ್ನಲ್ಲೇ, ರಾಹುಲ್ ದ್ರಾವಿಡ್ ಅಚ್ಚರಿಯ ರೀತಿಯಲ್ಲಿ ತಮ್ಮ ಹೆಡ್‌ಕೋಚ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
58
ರಾಜಸ್ಥಾನ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಹಾಗೂ ರಾಹುಲ್ ದ್ರಾವಿಡ್ ನಡುವೆ ಮನಸ್ತಾಪ ಏರ್ಪಟ್ಟಿದೆ ಎನ್ನುವಂತಹ ಮಾತುಗಳು ಕೇಳಿಬಂದಿದ್ದವು. ಆದರೆ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಒಂದು ಪೋಸ್ಟ್ ಎಲ್ಲಾ ಗಾಳಿಸುದ್ದಿಗಳಿಗೆ ತೆರೆ ಎಳೆದಿದೆ.
68
ಹೌದು, ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು, ದ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್‌ಗೆ ಒಂದು ದೊಡ್ಡ ಪೋಸ್ಟ್ ನೀಡುವ ಆಫರ್ ಕೊಟ್ಟಿತ್ತು. ಆದರೆ ದ್ರಾವಿಡ್ ಆ ಆಫರ್ ಅನ್ನು ಸಾರಾಸಗಟಾಗಿ ನಿರಾಕರಿಸಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ.
78
ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕಾಲು ನೋವಿನ ಸಮಸ್ಯೆಯ ಹೊರತಾಗಿಯೂ ದ್ರಾವಿಡ್ ವೀಲ್ ಚೇರ್‌ನಲ್ಲಿ ಕುಳಿತುಕೊಂಡು ಆಟಗಾರರಿಗೆ ಕೋಚಿಂಗ್ ಮಾಡಿದ್ದರು. ಹೀಗಿದ್ದೂ ಇದೀಗ ದ್ರಾವಿಡ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ
88
ಇನ್ನು ಸಂಜು ಸ್ಯಾಮ್ಸನ್ ಕೂಡಾ ರಾಜಸ್ಥಾನ ರಾಯಲ್ಸ್ ತಂಡವನ್ನು ತೊರೆಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಕಳೆದ ಬಾರಿ ಟೀಂ ಮ್ಯಾನೇಜ್‌ಮೆಂಟ್ ಜೋಸ್ ಬಟ್ಲರ್ ಅವರನ್ನು ರಿಲೀಸ್ ಮಾಡಿದ್ದು ಕ್ಯಾಪ್ಟನ್ ಸ್ಯಾಮ್ಸನ್ ಅಸಮಾಧಾನಕ್ಕೆ ಕಾರಣವಾಗಿತ್ತು ಎನ್ನಲಾಗಿದೆ.