ಬೆಂಗಳೂರು: 2026ರ ಐಪಿಎಲ್ ಟೂರ್ನಿಯಲ್ಲಿ ಇದೀಗ ಎಲಿಮಿನೇಟರ್ ಪಂದ್ಯ ಮುಕ್ತಾಯವಾಗಿದ್ದು, ಕ್ವಾಲಿಫೈಯರ್-2 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇದೀಗ ಕ್ವಾಲಿಫೈಯರ್-2 ಮ್ಯಾಚ್ ಎಲ್ಲಿ? ಯಾವಾಗ? ನೇರ ಪ್ರಸಾರ ಎಲ್ಲಿ? ಎಷ್ಟು ಗಂಟೆಗೆ ಆರಂಭ ನೋಡೋಣ ಬನ್ನಿ.
19ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಎದುರು ಆಘಾತಕಾರಿ ಸೋಲು ಕಾಣುವ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ತನ್ನ ಅಭಿಯಾನ ಮುಗಿಸಿದೆ. ಇದೀಗ ಕ್ವಾಲಿಫೈಯರ್-2 ಪಂದ್ಯದಲ್ಲಿ ಮಾಜಿ ಚಾಂಪಿಯನ್ನರಾದ ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಕಾದಾಡಲಿವೆ.
26
ಗುಜರಾತ್ ಟೈಟಾನ್ಸ್-ರಾಜಸ್ಥಾನ ರಾಯಲ್ಸ್ ನಡುವೆ ಹೈವೋಲ್ಟೇಜ್ ಮ್ಯಾಚ್
ಲೀಗ್ ಹಂತ ಮುಕ್ತಾಯದ ವೇಳೆಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದ ಗುಜರಾತ್ ಟೈಟಾನ್ಸ್ ತಂಡವು ಕ್ವಾಲಿಫೈಯರ್-1 ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ ಎದುರು ಸೋಲು ಅನುಭವಿಸಿತ್ತು. ಇದೀಗ ಕ್ವಾಲಿಫೈಯರ್-2 ಪಂದ್ಯದಲ್ಲಿ ಆರೆಂಜ್ ಆರ್ಮಿ ಎದುರು ಗೆದ್ದು ಫೈನಲ್ ಪ್ರವೇಶಿಸುವ ಕನಸು ಕಾಣುತ್ತಿದೆ ಶುಭ್‌ಮನ್ ಗಿಲ್ ಪಡೆ.
36
ಕ್ವಾಲಿಫೈಯರ್-2 ನಾಕೌಟ್ ಮಾದರಿಯ ಪಂದ್ಯ
ಕ್ವಾಲಿಫೈಯರ್-2 ಕೂಡಾ ನಾಕೌಟ್ ಮಾದರಿಯ ಪಂದ್ಯವಾಗಿದ್ದು, ಗೆದ್ದ ತಂಡ ಫೈನಲ್‌ಗೆ ಲಗ್ಗೆಯಿಟ್ಟರೇ, ಸೋಲುವ ತಂಡ ಐಪಿಎಲ್ ಟೂರ್ನಿಯಿಂದ ಅಧಿಕೃತವಾಗಿ ಹೊರಬೀಳಲಿದೆ. ಗುಜರಾತ್-ಸನ್‌ರೈಸರ್ಸ್ ನಡುವಿನ ಎರಡನೇ ಕ್ವಾಲಿಫೈಯರ್ ಪಂದ್ಯವು ಮೇ 29ರಂದು ಚಂಡೀಗಢದ ಮುಲ್ಲಾನ್‌ಪುರ ಇಂಟರ್‌ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಉಭಯ ತಂಡಗಳಿಗೆ ಫೈನಲ್ ಪ್ರವೇಶಿಸಲು ಕೊನೆಯ ಅವಕಾಶ ಇದಾಗಿರುವುದರಿಂದ ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ. ಗುಜರಾತ್-ಹೈದರಾಬಾದ್ ನಡುವಿನ ಹೈವೋಲ್ಟೇಜ್ ಮ್ಯಾಚ್ ಭಾರತೀಯ ಕಾಲಮಾನ ಸಂಜೆ 7.30ರಿಂದ ಆರಂಭವಾಗಲಿದೆ. ಈ ಮ್ಯಾಚ್ ಸ್ಟಾರ್ ಸ್ಪೋರ್ಟ್ಸ್ ಹಾಗೂ ಜಿಯೋ ಹಾಟ್‌ಸ್ಟಾರ್‌ನಲ್ಲಿ ನೇರ ಪ್ರಸಾರದಲ್ಲಿ ವೀಕ್ಷಿಸಬಹುದಾಗಿದೆ.
56
ಕ್ವಾಲಿಫೈಯರ್-2 ಗೆದ್ದ ತಂಡ ಫೈನಲ್‌ಗೆ ಲಗ್ಗೆ
ರಾಜಸ್ಥಾನ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಕ್ವಾಲಿಫೈಯರ್-2 ಮ್ಯಾಚ್ ಗೆದ್ದ ತಂಡವು ಮೇ.31ರಂದು ನಡೆಯಲಿರುವ ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಈ ಮ್ಯಾಚ್‌ಗೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯ ವಹಿಸಿದೆ.
66
ಕ್ವಾಲಿಫೈಯರ್-2 ಮ್ಯಾಚ್ ಗೆಲ್ಲೋರು ಯಾರು?
ರಾಜಸ್ಥಾನ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಕ್ವಾಲಿಫೈಯರ್-2 ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ? ಯಾವ ತಂಡ ಗೆದ್ದರೆ ಆರ್‌ಸಿಬಿ ಅನುಕೂಲವಾಗಬಹುದು ಎನ್ನುವುದನ್ನು ಕಮೆಂಟ್ ಮಾಡಿ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.