ಇಂಗ್ಲೆಂಡ್ ಎದುರಿನ ಸರಣಿ ಸೋಲಿನ ಬೆನ್ನಲ್ಲೇ 2027ರ ಏಕದಿನ ವಿಶ್ವಕಪ್‌ಗೆ 15 ಆಟಗಾರರ ಭಾರತ ತಂಡ ಆಯ್ಕೆ ಮಾಡಿದ ರವಿಶಾಸ್ತ್ರಿ!

Published : Jul 20, 2026, 07:09 PM IST

ಬೆಂಗಳೂರು: ಇಂಗ್ಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶುಭ್‌ಮನ್ ಗಿಲ್‌ ನೇತೃತ್ವದ ಟೀಂ ಇಂಡಿಯಾ ಸರಣಿ ಕೈಚೆಲ್ಲಿದೆ. ಇದರ ನಡುವೆ ಮುಂಬರುವ 2027ರ ಏಕದಿನ ವಿಶ್ವಕಪ್ ಟೂರ್ನಿಗೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ 15 ಆಟಗಾರರ ಭಾರತ ತಂಡವನ್ನು ಆಯ್ಕೆ ಮಾಡಿದ್ದಾರೆ.

PREV
16
2027ರ ಏಕದಿನ ವಿಶ್ವಕಪ್‌ಗೆ ತಯಾರಿ ಆರಂಭಿಸಿದ ಟೀಂ ಇಂಡಿಯಾ

2011ರ ಏಕದಿನ ವಿಶ್ವಕಪ್ ಬಳಿಕ ಏಕದಿನ ಮಾದರಿಯಲ್ಲಿ ಕಪ್ ಗೆಲ್ಲಲು ಟೀಂ ಇಂಡಿಯಾ ಸಾಕಷ್ಟು ಪ್ರಯತ್ನ ನಡೆಸುತ್ತಿದೆಯಾದರೂ ಇದುವರೆಗೂ ಯಶಸ್ವಿಯಾಗಿಲ್ಲ. ಕಳೆದ ಬಾರಿ ಅಂದರೆ 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಜೇಯವಾಗಿ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿತ್ತಾದರೂ, ಪ್ರಶಸ್ತಿ ಸುತ್ತಿನಲ್ಲಿ ಮುಗ್ಗರಿಸುವ ಮೂಲಕ ನಿರಾಸೆ ಅನುಭವಿಸಿತ್ತು.

26
2027ರ ಏಕದಿನ ವಿಶ್ವಕಪ್‌ಗೆ ಭಾರತ ತಂಡ ಆಯ್ಕೆ ಮಾಡಿದ ರವಿಶಾಸ್ತ್ರಿ

ಇದೀಗ ಮುಂಬರುವ 2027ರ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ತಂಡವು ಈಗಾಗಲೇ ತಯಾರಿ ಆರಂಭಿಸಿದೆ. ಹೀಗಿರುವಾಗಲೇ ಇಂಗ್ಲೆಂಡ್‌ನಲ್ಲಿ ಟೀಂ ಇಂಡಿಯಾ ಏಕದಿನ ಸರಣಿ ಸೋತಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಸಾಕಷ್ಟು ಅಳೆದು ತೂಗಿ 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಭಾರತ ತಂಡವನ್ನು ಪ್ರಕಟಿಸಿದ್ದಾರೆ. ರವಿಶಾಸ್ತ್ರಿ ಆಯ್ಕೆ ಮಾಡಿದ ತಂಡದಲ್ಲಿ ಗಂಭೀರ್-ಅಗರ್ಕರ್ ಜೋಡಿ ಕೈಬಿಟ್ಟಿರುವ ಕೆಲವು ಹೆಸರುಗಳು ಇವೆ.

36
ಗಿಲ್ ನಾಯಕ, ಬ್ಯಾಕ್‌ಅಪ್ ಓಪನ್ನರ್ ಆಗಿ ಜೈಸ್ವಾಲ್

2027ರ ಏಕದಿನ ವಿಶ್ವಕಪ್ ಟೂರ್ನಿಗೆ ರವಿಶಾಸ್ತ್ರಿ ಆಯ್ಕೆ ಮಾಡಿದ ತಂಡದಲ್ಲಿ ಶುಭ್‌ಮನ್ ಗಿಲ್ ನಾಯಕರಾಗಿದ್ದಾರೆ. ಸ್ಪೆಷಲಿಸ್ಟ್‌ ಬ್ಯಾಟರ್‌ಗಳಾಗಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಯಶಸ್ವಿ ಜೈಸ್ವಾಲ್ ಅವರಿಗೆ ಸ್ಥಾನ ನೀಡಿದ್ದಾರೆ. ಈ ಪೈಕಿ ಗಿಲ್ ಹಾಗೂ ರೋಹಿತ್ ಶರ್ಮಾ ಆರಂಭಿಕರಾದರೇ, ಯಶಸ್ವಿ ಜೈಸ್ವಾಲ್ ಬ್ಯಾಕ್‌ ಅಪ್ ಓಪನ್ನರ್ ಆಗಿ ಸ್ಥಾನ ಪಡೆದಿದ್ದಾರೆ.

46
ಬಲಾಢ್ಯವಾಗಿದೆ ಭಾರತದ ಮಧ್ಯಮ ಕ್ರಮಾಂಕ

ಇನ್ನು ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್ ಹಾಗೂ ರಿಷಭ್ ಪಂತ್ ಸ್ಥಾನ ಪಡೆದುಕೊಂಡಿದ್ದಾರೆ. ರಾಹುಲ್ ಅಥವಾ ರಿಷಭ್ ಪಂತ್ ಪೈಕಿ ಒಬ್ಬರು ವಿಕೆಟ್ ಕೀಪರ್ ಬ್ಯಾಟರ್ ಆಗಿ ಸ್ಥಾನ ಪಡೆದುಕೊಳ್ಳಲಿದ್ದಾರೆ. ಇನ್ನು ಆಲ್ರೌಂಡರ್‌ಗಳಾಗಿ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಸ್ಥಾನ ಪಡೆದುಕೊಂಡಿದ್ದಾರೆ.

56
ಬಲಿಷ್ಠವಾಗಿದೆ ಬೌಲಿಂಗ್ ವಿಭಾಗ

ಇನ್ನು ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ ಜತೆಗೆ ಗಂಭೀರ್ ಕಡೆಗಣಿಸಿರುವ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್ ಹಾಗೂ ಭುವನೇಶ್ವರ್ ಕುಮಾರ್‌ಗೆ ಸ್ಥಾನ ನೀಡಿದ್ದಾರೆ. ಐಸಿಸಿ ಟೂರ್ನಿಯಲ್ಲಿ ಅತಿಹೆಚ್ಚು ವಿಕೆಟ್ ಕಬಳಿಸಿದ ಬೌಲರ್ ಆಗಿ ಹೊರಹೊಮ್ಮಿರುವ ಶಮಿ, ಐಪಿಎಲ್‌ನಲ್ಲಿ ಮಿಂಚಿದ ಭುವನೇಶ್ವರ್ ಕುಮಾರ್‌ಗೆ ವಿಶ್ವಕಪ್ ತಂಡದಲ್ಲಿ ರವಿಶಾಸ್ತ್ರಿ ಸ್ಥಾನ ನೀಡಿದ್ದಾರೆ.

66
2027ರ ಏಕದಿನ ವಿಶ್ವಕಪ್ ಟೂರ್ನಿಗೆ ರವಿಶಾಸ್ತ್ರಿ ಆಯ್ಕೆ ಮಾಡಿದ ಭಾರತ ತಂಡ ಹೀಗಿದೆ:

ಶುಭ್‌ಮನ್ ಗಿಲ್(ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್(ವಿಕೆಟ್ ಕೀಪರ್), ರಿಷಭ್ ಪಂತ್(ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಭುವನೇಶ್ವರ್ ಕುಮಾರ್.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories