ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ದಿಟ್ಟ ಹೋರಾಟದ ಹೊರತಾಗಿಯೂ ಟೀಂ ಇಂಡಿಯಾ ವಿರೋಚಿತ ಸೋಲು ಕಂಡಿದೆ. ಇದರ ನಡುವೆ ಆಲ್ರೌಂಡರ್ ಜಡೇಜಾ ಅಪರೂಪದ ದಾಖಲೆ ಬರೆದಿದ್ದಾರೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 22 ರನ್ ಅಂತರದ ಸೋಲು ಅನುಭವಿಸಿದೆ. ಆದರೆ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ ದಿಟ್ಟ ಬ್ಯಾಟಿಂಗ್ ನಡೆಸುವ ಮೂಲಕ ಕ್ರಿಕೆಟ್ ಅಣಿಮಾನಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
29
ಒಂದು ಕಡೆ ನಿರಂತರವಾಗಿ ವಿಕೆಟ್ ಬೀಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ದಿಟ್ಟವಾಗಿ ಬ್ಯಾಟಿಂಗ್ ನಡೆಸಿದ ರವೀಂದ್ರ ಜಡೇಜಾ ಅಜೇಯ 61 ರನ್ ಸಿಡಿಸಿ ಮಿಂಚಿದರು. ಅದರಲ್ಲೂ ಬುಮ್ರಾ ಹಾಗೂ ಸಿರಾಜ್ ಜತೆಗೂಡಿ ಮಹತ್ವದ ಜತೆಯಾಟವಾಡಿದ್ದು ಟೀಂ ಇಂಡಿಯಾ ಪಾಳಯದಲ್ಲಿ ಗೆಲುವಿನ ಆಸೆ ಮೂಡಿಸಿತ್ತು.
39
ಈ ಸೋಲಿನ ಹೊರತಾಗಿಯೂ ಜಡೇಜಾ ಕ್ರಿಕೆಟ್ ಅಭಿಮಾನಿಗಳ ಮನಗೆದ್ದಿದ್ದಾರೆ. ಇದರ ಜತೆಗೆ ಅಪರೂಪದ ದಾಖಲೆ ಬರೆಯುವ ಮೂಲಕ ಕ್ರಿಕೆಟ್ ದಿಗ್ಗಜರ ಸಾಲಿಗೆ ರವೀಂದ್ರ ಜಡೇಜಾ ಸೇರ್ಪಡೆಯಾಗಿದ್ದಾರೆ.
ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಯ ಮೊದಲ ಮೂರು ಪಂದ್ಯಗಳಲ್ಲಿ ಜಡೇಜಾ ಅತ್ಯಂತ ಸ್ಥಿರ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ. ಜಡ್ಡು ಕಳೆದೆರಡು ಟೆಸ್ಟ್ ಪಂದ್ಯ 4 ಇನ್ನಿಂಗ್ಸ್‌ನಲ್ಲೂ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.
59
ಲಾರ್ಡ್ಸ್ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ನಲ್ಲಿ ಅರ್ಧಶತಕ ಸಿಡಿಸುವ ಮೂಲಕ ಜಡೇಜಾ 93 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ್ದಾರೆ. ಈ ಮೊದಲು ಭಾರತದ ವಿನೂ ಮಂಕಡ್ 1932ರಲ್ಲಿ ಲಾರ್ಡ್ಸ್ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ನಲ್ಲಿ 50+ ರನ್ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು.
69
ಇನ್ನು ಇದಷ್ಟೇ ಅಲ್ಲದೇ ರವೀಂದ್ರ ಜಡೇಜಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 7000+ ರನ್ ಹಾಗೂ 600+ ವಿಕೆಟ್ ಕಬಳಿಸಿದ ಜಗತ್ತಿನ ನಾಲ್ಕನೇ ಆಲ್ರೌಂಡರ್ ಎನ್ನುವ ಹಿರಿಮೆಗೂ ಜಡ್ಡು ಪಾತ್ರರಾಗಿದ್ದಾರೆ.
79
ಇದಕ್ಕೂ ಮೊದಲು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಆಲ್ರೌಂಡ್ ಲೆಜೆಂಡ್ ಕಪಿಲ್ ದೇವ್, ದಕ್ಷಿಣ ಆಫ್ರಿಕಾದ ಶಾನ್ ಪೊಲ್ಲಾಕ್ ಹಾಗೂ ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಮಾತ್ರ ಈ ಸಾಧನೆ ಮಾಡಿದ್ದಾರೆ.
89
ಸದ್ಯ ರವೀಂದ್ರ ಜಡೇಜಾ ಟೆಸ್ಟ್ ಕ್ರಿಕೆಟ್‌ನಲ್ಲಿ 3697, ಏಕದಿನ ಕ್ರಿಕೆಟ್‌ನಲ್ಲಿ 2806 ಹಾಗೂ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 515 ರನ್ ಸಹಿತ ಒಟ್ಟಾರೆ 7018 ರನ್ ಸಿಡಿಸಿದ್ದಾರೆ.
99
ಇನ್ನು ಜಡ್ಡು ಟೆಸ್ಟ್ ಕ್ರಿಕೆಟ್‌ನಲ್ಲಿ 326, ಏಕದಿನ ಕ್ರಿಕೆಟ್‌ನಲ್ಲಿ 231 ಹಾಗೂ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 54 ವಿಕೆಟ್ ಸೇರಿದಂತೆ ಒಟ್ಟಾರೆ 611 ವಿಕೆಟ್ ಕಬಳಿಸಿದ್ದಾರೆ.