ರಾಯಲ್ ಚಾಲೆಂಜರ್ಸ್ ಬೆಂಗಳೂರ ತಂಡದ ಸ್ಟಾರ್ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ತಮ್ಮ ಕನಸಿನ ಸಾರ್ವಕಾಲಿಕ ಶ್ರೇಷ್ಠ ಐಪಿಎಲ್ ತಂಡವನ್ನು ಪ್ರಕಟಿಸಿದ್ದಾರೆ. ಐಪಿಎಲ್ ಆರಂಭದಿಂದಲೂ ರನ್ ಮಳೆ ಹರಿಸುತ್ತಿರುವ ಎಬಿಡಿ ಸಮತೋಲಿತವಾದ ತಂಡವನ್ನು ಆಯ್ಕೆ ಮಾಡಿದ್ದಾರೆ.
ಎಬಿಡಿ ಆಯ್ಕೆ ಹಲವು ಅಚ್ಚರಿಗಳಿಗೂ ಸಾಕ್ಷಿಯಾಗಿದೆ. ಐಪಿಎಲ್‌ನಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಕ್ರಿಸ್ ಗೇಲ್. ಸುರೇಶ್ ರೈನಾ, ಡೇವಿಡ್ ವಾರ್ನರ್, ಡ್ವೇನ್ ಬ್ರಾವೋ, ಅಂಡ್ರೆ ರಸೆಲ್ ಸ್ಥಾನ ಗಿಟ್ಟಿಸಲು ವಿಫಲವಾಗಿದ್ದಾರೆ. ಎಬಿಡಿ ತಂಡದಲ್ಲಿ ಕೊಹ್ಲಿ ಸ್ಥಾನ ಪಡೆದಿದ್ದಾರೆಯಾದರೂ ನಾಯಕನ ಪಟ್ಟ ಮಹೇಂದ್ರ ಸಿಂಗ್ ಧೋನಿಗೆ ನೀಡಿದ್ದಾರೆ. ಆರಂಭಿಕನಾಗಿ ಸ್ಫೋಟಕ ಬ್ಯಾಟ್ಸ್‌ಮನ್ ವಿರೇಂದ್ರ ಸೆಹ್ವಾಗ್ ಸ್ಥಾನಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಎಬಿಡಿ ಕನಸಿನ ತಂಡ ಹೇಗಿದೆ? ಯಾರೆಲ್ಲಾ ಸ್ಥಾನ ಪಡೆದಿದ್ದಾರೆ. ಆರಂಭಿಕರು ಯಾರು? ಮಧ್ಯಮ ಕ್ರಮಾಂಕ ಹೇಗಿದೆ? ಆಲ್ರೌಂಡರ್‌ಗಳು ಯಾರು? ಬೌಲರ್‌ಗಳು ಯಾರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.