IPL ಪ್ಲೇ ಆಫ್‌ಗೂ ಮೊದಲೇ ಆರ್‌ಸಿಬಿಗೆ ಗುಡ್ ನ್ಯೂಸ್! ರಣಬೇಟೆಗಾರನ ಸ್ವಾಗತಕ್ಕೆ ಸಜ್ಜಾದ ಬೆಂಗಳೂರು ಫ್ರಾಂಚೈಸಿ

Published : May 21, 2026, 06:05 PM IST

ಬೆಂಗಳೂರು: 2026ರ ಐಪಿಎಲ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ತಂಡವಾಗಿ ಪ್ಲೇ ಆಫ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಇದರ ಬೆನ್ನಲ್ಲೇ ಬೆಂಗಳೂರು ತಂಡಕ್ಕೆ ಮತ್ತೊಂದು ಗುಡ್‌ ನ್ಯೂಸ್ ಸಿಕ್ಕಿದ್ದು, ಫ್ರಾಂಚೈಸಿಯು ರಣಬೇಟೆಗಾರನ ಸ್ವಾಗತಕ್ಕೆ ಸಜ್ಜಾಗಿದೆ. 

PREV
16
ಪ್ಲೇ ಆಫ್‌ಗೆ ಮೊದಲ ತಂಡವಾಗಿ ಆರ್‌ಸಿಬಿ ಲಗ್ಗೆ

ರಜತ್ ಪಾಟೀದಾರ್ ನೇತೃತ್ವದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಪಂಜಾಬ್ ಕಿಂಗ್ಸ್ ತಂಡವನ್ನು ಬಗ್ಗುಬಡಿದು ಮೊದಲ ತಂಡವಾಗಿ ಈ ಸೀಸನ್‌ ಐಪಿಎಲ್‌ ಟೂರ್ನಿಯಲ್ಲಿ ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದೆ.

26
ಆರ್‌ಸಿಬಿ ಪಾಲಿಗೆ ಸಿಹಿ ಸುದ್ದಿ

ಲೀಗ್‌ ಹಂತದಲ್ಲಿ ಆರ್‌ಸಿಬಿ ಇನ್ನೂ ಒಂದು ಪಂದ್ಯ ಆಡುವುದು ಬಾಕಿ ಇರುವಾಗಲೇ ಬಹುತೇಕ ಕ್ವಾಲಿಫೈಯರ್-1 ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ. ಹೀಗಿರುವಾಗಲೇ ಬೆಂಗಳೂರು ತಂಡದ ಪಾಲಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ವಿಸ್ಪೋಟಕ ಆರಂಭಿಕ ಬ್ಯಾಟರ್ ಫಿಲ್ ಸಾಲ್ಟ್, ತಂಡ ಕೂಡಿಕೊಳ್ಳುವ ಬಗ್ಗೆ ಮಹತ್ವದ ಅಪ್‌ಡೇಟ್ಸ್ ಹೊರಬಿದ್ದಿದೆ.

36
ಕಳೆದ ಏಪ್ರಿಲ್ 18ರಂದು ಗಾಯಗೊಂಡಿದ್ದ ಸಾಲ್ಟ್

ಕಳೆದ ಏಪ್ರಿಲ್ 18ರಂದು ಡೆಲ್ಲಿ ಕ್ಯಾಪಿಟಲ್ಸ್ ಎದುರಿನ ಪಂದ್ಯದ ವೇಳೆಯಲ್ಲಿ ಬೌಂಡರಿ ತಡೆಯುವ ಯತ್ನದಲ್ಲಿ ಫಿಲ್ ಸಾಲ್ಟ್ ಕೈಬೆರಳಿನ ಗಾಯಕ್ಕೆ ಒಳಗಾಗಿ ತಂಡದಿಂದ ಹೊರಗುಳಿದಿದ್ದರು. ಕಳೆದೊಂದು ತಿಂಗಳಿನಿಂದ ಫಿಲ್ ಸಾಲ್ಟ್ ಆರ್‌ಸಿಬಿ ಆಡುವ ಹನ್ನೊಂದರ ಬಳಗದಿಂದ ಹೊರಗುಳಿದಿದ್ದು ಮಾತ್ರವಲ್ಲದೇ, ಇಂಗ್ಲೆಂಡ್‌ಗೆ ವಾಪಾಸ್ಸಾಗಿದ್ದರು. ಸಾಲ್ಟ್ ಬದಲಿಗೆ ಆರ್‌ಸಿಬಿ ಜೇಕಬ್ ಬೆಥೆಲ್ ಆರಂಭಿಕರಾಗಿ ಕಾಣಿಸಿಕೊಂಡಿದ್ದರು.

46
ಈ ವಾರಾಂತ್ಯಕ್ಕೆ ತಂಡ ಕೂಡಿಕೊಳ್ಳಲಿರುವ ಸಾಲ್ಟ್

ಇದೀಗ ಫಿಲ್ ಸಾಲ್ಟ್ ಈ ವಾರಂತಕ್ಕೆ ಭಾರತಕ್ಕೆ ವಾಪಾಸ್ಸಾಗಲಿದ್ದಾರೆ ಎಂದು ESPNcricinfo ವರದಿ ಮಾಡಿದೆ. ಫಿಲ್ ಸಾಲ್ಟ್ ಶುಕ್ರವಾರ ನಡೆಯಲಿರುವ ಸನ್‌ರೈಸರ್ಸ್ ಹೈದರಾಬಾದ್ ಎದುರಿನ ಪಂದ್ಯಕ್ಕೆ ತಂಡ ಕೂಡಿಕೊಳ್ಳುತ್ತಾರೆಯೇ ಅಥವಾ ಇಲ್ಲವೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.

56
ಆರ್‌ಸಿಬಿ ಪರ ಅದ್ಭುತ ಆರಂಭ ಒದಗಿಸಿಕೊಟ್ಟಿರುವ ಫಿಲ್ ಸಾಲ್ಟ್

ಫಿಲ್ ಸಾಲ್ಟ್ ಗಾಯಗೊಳ್ಳುವ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆರು ಪಂದ್ಯಗಳನ್ನಾಡಿ ಎರಡು ಅರ್ಧಶತಕ ಹಾಗೂ ಒಮ್ಮೆ 46 ರನ್ ಸಿಡಿಸಿದ್ದರು. ಇದೀಗ ಪ್ಲೇ ಆಫ್‌ ಪಂದ್ಯಕ್ಕೂ ಮುನ್ನ ಸಾಲ್ಟ್ ವಾಪಾಸ್ಸಾತಿ ಬೆಂಗಳೂರು ತಂಡಕ್ಕೆ ಆನೆ ಬಲ ತಂದುಕೊಟ್ಟಿದೆ.

66
ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಆರ್‌ಸಿಬಿ

ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆಡಿದ 13 ಪಂದ್ಯಗಳಲ್ಲಿ 9 ಗೆಲುವು ಹಾಗೂ 4 ಸೋಲು ಸಹಿತ 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಭದ್ರವಾಗಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories