ಬೆಂಗಳೂರು: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಪಂದ್ಯದಲ್ಲಿ ಆರ್‌ಸಿಬಿ ತಂಡವು ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ರಿಪೋರ್ಟ್ ಇಲ್ಲಿದೆ ನೋಡಿ.
ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ಲೀಗ್ ಹಂತದಲ್ಲಿ ತವರಿನಲ್ಲಿ ಕೊನೆಯ ಬಾರಿಯ ಮ್ಯಾಚ್ ಆಡಲು ರೆಡಿಯಾಗಿದೆ. ಚಿನ್ನಸ್ವಾಮಿ ಮೈದಾನದಲ್ಲಿಂದು ಆರ್‌ಸಿಬಿಗೆ ಗುಜರಾತ್ ಟೈಟಾನ್ಸ್ ಸವಾಲೊಡ್ಡಲಿದೆ.
26
ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಆರ್‌ಸಿಬಿ
ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆಡಿದ ಆರು ಪಂದ್ಯಗಳಲ್ಲಿ ನಾಲ್ಕು ಗೆಲುವು ಹಾಗೂ ಎರಡು ಸೋಲುಗಳೊಂದಿಗೆ ಎಂಟು ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿ ಗೆದ್ದರೇ ಮತ್ತೆ ಆರ್‌ಸಿಬಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಲಿದೆ.
36
ಡೆಲ್ಲಿ ಎದುರಿನ ಸೋಲಿನ ಬಳಿಕ ತಂಡದಲ್ಲಿ ಬದಲಾವಣೆ
ಕಳೆದ ಪಂದ್ಯದಲ್ಲಿ ಆರ್‌ಸಿಬಿ ತಂಡವು ತವರಿನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ಎದುರು ಆರು ವಿಕೆಟ್ ಅಂತರದ ಸೋಲು ಅನುಭವಿಸಿತ್ತು. ಇದೀಗ ತವರಿನಲ್ಲಿ ಗೆಲುವಿನ ಹಳಿಗೆ ಮರಳಲು ಎದುರು ನೋಡುತ್ತಿದೆ. ಹೀಗಾಗಿ ತಂಡದಲ್ಲಿ ಕೆಲವು ಬದಲಾವಣೆಗಳಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಕೆಲವು ಮಾಧ್ಯಮಗಳ ವರದಿಯ ಪ್ರಕಾರ, ಡೆಲ್ಲಿ ಎದುರಿನ ಸೋಲಿನ ಬಳಿಕ ಆರ್‌ಸಿಬಿ ತಂಡದ ವೆಂಕಟೇಶ್ ಅಯ್ಯರ್ ಹಾಗೂ ಜೇಕಬ್ ಬೆಥಲ್ ನೆಟ್ಸ್‌ನಲ್ಲಿ ಸಾಕಷ್ಟು ಅಭ್ಯಾಸ ನಡೆಸುತ್ತಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಈ ಇಬ್ಬರು ಆಟಗಾರರು ಆಡುವ ಹನ್ನೊಂದರ ಬಳಗ ಕೂಡಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
56
ಪಡಿಕ್ಕಲ್, ಶಫರ್ಡ್ ಔಟ್
ವೆಂಕಟೇಶ್ ಅಯ್ಯರ್ ಆಲ್ರೌಂಡರ್ ಆಗಿ ಗುರುತಿಸಿಕೊಂಡಿದ್ದಾರೆ. ಇನ್ನು ಬೆಥೆಲ್ ಕೂಡಾ ರೆಡ್ ಹಾಟ್ ಫಾರ್ಮ್‌ನಲ್ಲಿದ್ದು, ಇವರಿಬ್ಬರ ಸೇರ್ಪಡೆ ತಂಡಕ್ಕೆ ಮತ್ತಷ್ಟು ಬಲ ತಂದುಕೊಡುವ ನಿರೀಕ್ಷೆಯಿದೆ. ಹೀಗಾದಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ ಹಾಗೂ ರೊಮ್ಯಾರಿಯೋ ಶೆಫರ್ಡ್ ತಮ್ಮ ಸ್ಥಾನ ಬಿಟ್ಟುಕೊಡಬೇಕಾಗಿ ಬರಬಹುದು.
66
ಗುಜರಾತ್ ಎದುರಿನ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ತಂಡ ಹೀಗಿದೆ:
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.