ಮುಂಬೈ ಇಂಡಿಯನ್ಸ್ ವಿರುದ್ದದ ಪಂದ್ಯದಲ್ಲಿ ಆರ್‌ಸಿಬಿ ತಂಡ ಜೇಕಬ್ ಬೆತೆಲ್ ಬದಲಾವಣೆ ಮಾಡುತ್ತಾ? ಪ್ಲೇಯಿಂಗ್ 11ನಲ್ಲಿ ಯಾರಿಗಿದೆ ಚಾನ್ಸ್, ಮುಂಬೈ ತಂಡದಲ್ಲಿ ಇಂಜರು ಸಮಸ್ಯೆಯಿಂದ ಆತಂಕ ಎದುರಾಗಿದೆ.
ಸತತ 2 ಪಂದ್ಯ ಸೋತ ಆರ್‌ಸಿಬಿ ಇದೀಗ ಮುಂಬೈ ಇಂಡಿಯನ್ಸ್ ವಿರುದ್ದ ಹೋರಾಟಕ್ಕೆ ಸಜ್ಜಾಗಿದೆ. ಇಂದು ರಾಯಪುರದಲ್ಲಿ ನಡೆಯಲಿರುವ ಪಂದ್ಯ ಆರ್‌ಸಿಬಿ ಪ್ಲೇ ಆಫ್ ಪ್ರವೇಶಕ್ಕೆ ಪ್ರಮುಖ ಪಂದ್ಯವಾಗಿದೆ. ಇತ್ತ ಸೋತು ಸೋತು ಸುಣ್ಣವಾಗಿರುವ ಮುಂಬೈಗೆ ಗೆಲುವ ಅನಿವಾರ್ಯವಾಗಿದೆ.
25
ಆರ್‌ಸಿಬಿ ಪ್ಲೇಯಿಂಗ್ 11ನಲ್ಲಿ 2 ಬದಲಾವಣೆ?
2 ಸೋಲಿನ ಬಳಿಕ ಆರ್‌ಸಿಬಿ ತಂಡದಲ್ಲಿ ಕೆಲ ಬದಲಾವಣೆ ಮಾತುಗಳು ಕೇಳಿಬರುತ್ತಿದೆ. ಜೇಕಬ್ ಬೆತೆಲ್ ಹಾಗೂ ಜಿತೇಶ್ ಶರ್ಮಾ ಪ್ಲೇಯಿಂಗ್ 11ನಿಂದ ಕೈಬಿಡುವ ಸಾಧ್ಯತೆಗಳಿವೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ವೆಂಕಟೇಶ್ ಅಯ್ಯರ್ ತಂಡ ಸೇರಿಕೊಳ್ಳಲಿದ್ದಾರೆ ಅನ್ನೋ ಮಾತುಗಳಿವೆ.
ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ ಇಂದಿನ ಪಂದ್ಯಕ್ಕೆ ಲಭ್ಯತೆ ಕುರಿತು ಸ್ಪಷ್ಟತೆ ಇಲ್ಲ. 10 ಪಂದ್ಯದಲ್ಲಿ ಕೇವಲ 3 ಗೆಲುವು ದಾಖಲಿಸಿದ ಮುಂಬೈ ಇಂಡಿಯನ್ಸ್ ಇನ್ನುಳಿದ ಎಲ್ಲಾ ಪಂದ್ಯ ಗೆದ್ದು ಅದೃಷ್ಠ ಪರೀಕ್ಷೆ ನಡೆಸಲು ಸಜ್ಜಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.