ಲಖನೌ ಎದುರಿನ ಪಂದ್ಯಕ್ಕೆ RCB ಸಂಭಾವ್ಯ ತಂಡ ಪ್ರಕಟ..! ಎರಡು ಮಹತ್ವದ ಬದಲಾವಣೆ?

First Published | Apr 2, 2024, 2:19 PM IST

ಬೆಂಗಳೂರು: 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಕಳೆದ ಪಂದ್ಯದಲ್ಲಿ ಸೋಲಿನ ಬೆನ್ನಲ್ಲೇ ಆರ್‌ಸಿಬಿ ಇಂದು ತವರಿನಲ್ಲಿ ನಡೆಯಲಿರುವ ಪಂದ್ಯಕ್ಕೆ ಎರಡು ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಆರ್‌ಸಿಬಿ ಸಂಭಾವ್ಯ ತಂಡ ಹೀಗಿದೆ ನೋಡಿ. 

1.ಫಾಫ್ ಡು ಪ್ಲೆಸಿಸ್:

ಆರ್‌ಸಿಬಿ ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಕಳೆದ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದ್ದರು. ಇದೀಗ ಮಹತ್ವದ ಪಂದ್ಯದಲ್ಲಿ ದೊಡ್ಡ ಮೊತ್ತ ಕಲೆಹಾಕುವ ನಿರೀಕ್ಷೆಯಲ್ಲಿದ್ದಾರೆ.
 

2. ವಿರಾಟ್ ಕೊಹ್ಲಿ:

ಕಳೆದೆರಡು ಪಂದ್ಯಗಳಲ್ಲಿ ಭರ್ಜರಿ ಅರ್ಧಶತಕ ಸಿಡಿಸಿ ಮಿಂಚಿರುವ ವಿರಾಟ್ ಕೊಹ್ಲಿ, ಇದೀಗ ಮತ್ತೊಂದು ಸೊಗಸಾದ ಇನಿಂಗ್ಸ್ ಕಟ್ಟಲು ಸಜ್ಜಾಗಿದ್ದಾರೆ. ವಿರಾಟ್ ಅಬ್ಬರಿಸಿದರೆ ಆರ್‌ಸಿಬಿ ಗೆಲುವು ಕಷ್ಟವೇನಲ್ಲ.
 

Latest Videos


3. ಕ್ಯಾಮರೋನ್ ಗ್ರೀನ್:

ಸ್ಟಾರ್ ಆಲ್ರೌಂಡರ್ ಕ್ಯಾಮರೋನ್ ಗ್ರೀನ್ ಅವರ ಮೇಲೆ ಆರ್‌ಸಿಬಿ ಫ್ರಾಂಚೈಸಿ ಸಾಕಷ್ಟು ನಿರೀಕ್ಷೆಯಿಟ್ಟಿದೆ. ಇಂದು ಗ್ರೀನ್ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ನೆರವಾಗಬೇಕಿದೆ.
 

4. ಗ್ಲೆನ್ ಮ್ಯಾಕ್ಸ್‌ವೆಲ್:

ಆಸೀಸ್ ಮೂಲದ ಮತ್ತೋರ್ವ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡಾ ಕಳೆದ ಮೂರು ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ತೋರಿಲ್ಲ. ಇಂದು ಮ್ಯಾಕ್ಸಿ ಅಬ್ಬರಿಸುವ ಸಾಧ್ಯತೆಯಿದೆ.
 

5. ದಿನೇಶ್ ಕಾರ್ತಿಕ್:

ಅನುಭವಿ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಭರ್ಜರಿ ಫಾರ್ಮ್‌ನಲ್ಲಿದ್ದು, ಅದೇ ಲಯವನ್ನು ಮುಂದುವರೆಸಿಕೊಂಡು ಹೋಗುವ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಡಿಕೆ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದರೂ ಅಚ್ಚರಿಯಿಲ್ಲ.
 

6. ಅನೂಜ್ ರಾವತ್:

ಮೊದಲ ಪಂದ್ಯದಲ್ಲೇ ಸ್ಪೋಟಕ ಬ್ಯಾಟಿಂಗ್ ನಡೆಸಿ ಮಿಂಚಿದ್ದ ಅನೂಜ್ ರಾವತ್, ಇದೀಗ ತಮ್ಮ ಪ್ರತಿಭೆ ಮತ್ತೊಮ್ಮೆ ಅನಾವರಣ ಮಾಡಲು ಎದುರು ನೋಡುತ್ತಿದ್ದಾರೆ. ಅನೂಜ್ ಅಬ್ಬರದ ಬ್ಯಾಟಿಂಗ್ ಜತೆಗೆ ವಿಕೆಟ್ ಕೀಪರ್ ಜವಾಬ್ದಾರಿ ನಿಭಾಯಿಸಬೇಕಿದೆ.
 

7. ಮಹಿಪಾಲ್ ಲೋಮ್ರರ್:

ರಜತ್ ಪಾಟೀದಾರ್ ಕಳೆದ ಮೂರು ಪಂದ್ಯಗಳಲ್ಲೂ ವಿಫಲರಾಗಿರುವ ಹಿನ್ನೆಲೆಯಲ್ಲಿ ಬ್ಯಾಟಿಂಗ್ ಆಲ್ರೌಂಡರ್ ಮಹಿಪಾಲ್ ಲೋಮ್ರರ್‌ಗೆ ಇಂದಿನ ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡುವ ಸಾಧ್ಯತೆಯಿದೆ.
 

8. ಯಶ್ ದಯಾಳ್

ಎಡಗೈ ವೇಗಿ ಯಶ್ ದಯಾಳ್ ಕೊಂಚ ದುಬಾರಿಯಾಗುತ್ತಿದ್ದರೂ ಅಗತ್ಯ ಸಂದರ್ಭದಲ್ಲಿ ವಿಕೆಟ್ ಕಬಳಿಸುವ ಸಾಮರ್ಥ್ಯ ಹೊಂದಿದ್ದಾರೆ, ಹೀಗಾಗಿ ಯಶ್ ದಯಾಳ್‌ಗೆ ಮತ್ತೊಮ್ಮೆ ಅವಕಾಶ ಸಿಗುವ ಸಾಧ್ಯತೆಯಿದೆ.

09 . ವೈಶಾಕ್ ವಿಜಯ್‌ಕುಮಾರ್:

ಸ್ಥಳೀಯ ಪ್ರತಿಭೆ ವೈಶಾಕ್ ವಿಜಯ್ ಕುಮಾರ್ ಕಳೆದ ಪಂದ್ಯದಲ್ಲಿ ಶಿಸ್ತುಬದ್ಧ ದಾಳಿಯ ಮೂಲಕ ಗಮನ ಸೆಳೆದಿದ್ದರು. ಹೀಗಾಗಿ ವೈಶಾಕ್‌ಗೆ ತವರು ಮೈದಾನದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ.
 

10. ಲಾಕಿ ಫರ್ಗ್ಯೂಸನ್:

ಕಿವೀಸ್ ವೇಗಿ ಲಾಕಿ ಫರ್ಗ್ಯೂಸನ್, ಮೊದಲ ಮೂರು ಪಂದ್ಯಗಳಲ್ಲಿ ಬೆಂಚ್ ಕಾಯಿಸಿದ್ದಾರೆ. ಅಲ್ಜಾರಿ ಜೋಸೆಫ್ ಪದೇ ಪದೇ ದುಬಾರಿಯಾಗುತ್ತಿರುವ ಹಿನ್ನೆಲೆಯಲ್ಲಿ ಫರ್ಗ್ಯೂಸನ್‌ಗೆ ಇಂದು ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ.

11. ಮೊಹಮ್ಮದ್ ಸಿರಾಜ್:

ಆರ್ಸಿಬಿ ಅನುಭವಿ ವೇಗಿ ಮೊಹಮ್ಮದ್ ಸಿರಾಜ್ ಕಳೆದ ಪಂದ್ಯದಲ್ಲಿ ಸಾಕಷ್ಟು ದುಬಾರಿಯಾಗಿದ್ದರು. ಆದರೆ ಇಂದು ಸಿರಾಜ್ ತಮ್ಮ ಹಳೆಯ ಲಯಕ್ಕೆ ಮರಳಲು ಎದುರು ನೋಡುತ್ತಿದ್ದಾರೆ.
 

click me!