RCB ಪಡೆಗೆ ಬಿಗ್ ಶಾಕ್; ದೇವದತ್ ಪಡಿಕ್ಕಲ್ ಐಪಿಎಲ್‌ನಿಂದಲೇ ಔಟ್! ಮತ್ತೋರ್ವ ಕನ್ನಡಿಗ ಸೇರ್ಪಡೆ

Published : May 07, 2025, 11:01 PM IST

ಬೆಂಗಳೂರು: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಭರ್ಜರಿಯಾಗಿಯೇ ಸಾಗುತ್ತಿದೆ. ಐಪಿಎಲ್‌ ಪ್ಲೇ ಆಫ್‌ಗೆ ದಾಪುಗಾಲಿಡುತ್ತಿರುವ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ.

PREV
17
RCB ಪಡೆಗೆ ಬಿಗ್ ಶಾಕ್; ದೇವದತ್ ಪಡಿಕ್ಕಲ್ ಐಪಿಎಲ್‌ನಿಂದಲೇ ಔಟ್! ಮತ್ತೋರ್ವ ಕನ್ನಡಿಗ ಸೇರ್ಪಡೆ

2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ನಿರ್ಣಾಯಕ ಘಟ್ಟದತ್ತ ದಾಪುಗಾಲಿಡುತ್ತಿದೆ. ಈಗಾಗಲೇ ಮೂರು ತಂಡಗಳು ಪ್ಲೇ ಆಫ್‌ ರೇಸ್‌ನಿಂದ ಹೊರಬಿದ್ದಿದ್ದು, ಇನ್ನುಳಿದ 7 ತಂಡಗಳು ಪ್ಲೇ ಆಫ್‌ ರೇಸ್‌ನಲ್ಲಿ ಉಳಿದುಕೊಂಡಿವೆ.
 

27

ಇನ್ನು ಪ್ರಸಕ್ತ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅದ್ಭುತ ಪ್ರದರ್ಶನದ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ.
 

37

ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 11 ಪಂದ್ಯಗಳನ್ನಾಡಿದ್ದು 8 ಗೆಲುವು ಹಾಗೂ 3 ಸೋಲು ಸಹಿತ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಪ್ಲೇ ಆಫ್ ಹೊಸ್ತಿಲಲ್ಲಿದೆ.
 

47
Devdutt Padikkal (Photo: @ipl/X)

ಹೀಗಿರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಸ್ಟಾರ್ ಬ್ಯಾಟರ್ ದೇವದತ್ ಪಡಿಕ್ಕಲ್ ಸ್ನಾಯುಸೆಳೆತಕ್ಕೆ ಒಳಗಾಗಿ 18ನೇ ಆವೃತ್ತಿಯ ಐಪಿಎಲ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.
 

57

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಪರ ಇಂಪ್ಯಾಕ್ಟ್ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದ ದೇವದತ್ ಪಡಿಕ್ಕಲ್ 10 ಇನ್ನಿಂಗ್ಸ್‌ಗಳನ್ನಾಡಿ 150.6ರ ಸ್ಟ್ರೈಕ್‌ರೇಟ್‌ನಲ್ಲಿ 247 ರನ್ ಸಿಡಿಸಿ ಆರ್‌ಸಿಬಿ ತಂಡಕ್ಕೆ ಆಸರೆಯಾಗಿದ್ದರು. ಇದರಲ್ಲಿ ಎರಡು ಅರ್ಧಶತಕಗಳು ಸೇರಿವೆ

67

ಇದೀಗ ದೇವದತ್ ಪಡಿಕ್ಕಲ್ ಅವರಿಂದ ತೆರವಾದ ಸ್ಥಾನಕ್ಕೆ ಮತ್ತೋರ್ವ ಕನ್ನಡಿಗ ಮಯಾಂಕ್ ಅಗರ್‌ವಾಲ್ ಸೇರ್ಪಡೆಯಾಗಿದ್ದಾರೆ. ಇದೀಗ ಪಡಿಕ್ಕಲ್ ಸ್ಥಾನವನ್ನು ಅಗರ್‌ವಾಲ್ ಯಾವ ರೀತಿ ತುಂಬಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.
 

77

ಒಂದು ಕೋಟಿ ರುಪಾಯಿ ಮೂಲ ಬೆಲೆ ಹೊಂದಿದ್ದ ಮಯಾಂಕ್‌ ಅಗರ್‌ವಾಲ್ ಅನ್‌ಸೋಲ್ಡ್‌ ಆಗಿದ್ದರು. ಮಯಾಂಕ್‌ ಅಗರ್‌ವಾಲ್‌ 127 ಐಪಿಎಲ್ ಪಂದ್ಯಗಳನ್ನಾಡಿ ಒಂದು ಶತಕ, 13 ಅರ್ಧಶತಕ ಸಹಿತ 2661 ರನ್ ಸಿಡಿಸಿದ್ದಾರೆ. 

Read more Photos on
click me!

Recommended Stories