ಈ 4 ತಂಡಗಳು ಪ್ಲೇ ಆಫ್‌ಗೇರಲಿವೆ: ಅಚ್ಚರಿಯ ಭವಿಷ್ಯ ನುಡಿದ ನಟ ಅಕ್ಷಯ್ ಕುಮಾರ್

First Published | Apr 8, 2024, 2:41 PM IST

ಬೆಂಗಳೂರು: 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಭರ್ಜರಿಯಾಗಿಯೇ ಸಾಗುತ್ತಿದೆ. ಹೀಗಿರುವಾಗಲೇ ಬಾಲಿವುಡ್ ನಟರಾದ ಅಕ್ಷಯ್ ಕುಮಾರ್ ಹಾಗೂ ಟೈಗರ್‌ ಶ್ರಾಫ್ ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ಪ್ಲೇ ಆಫ್‌ಗೇರುವ 4 ತಂಡಗಳನ್ನು ಹೆಸರಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

2024ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಮೊದಲಾರ್ಧದ ಹೊಸ್ತಿಲಲ್ಲಿದ್ದು, ಐಪಿಎಲ್ ಅಭಿಮಾನಿಗಳಿಗೆ ಭರಪೂರ ಮನರಂಜನೆ ಸಿಗುತ್ತಿದೆ. ಹೀಗಿರುವಾಗಲೇ ಕೆಲವು ತಂಡಗಳು ಅಜೇಯ ನಾಗಾಲೋಟ ಮುಂದುವರೆಸಿದಿದ್ದರೆ, ಮತ್ತೆ ಕೆಲ ತಂಡಗಳು ಗೆಲುವಿನ ಲಯಕ್ಕೆ ಮರಳಲು ಪರದಾಡುತ್ತಿವೆ.
 

ರಾಜಸ್ಥಾನ ರಾಯಲ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಅಜೇಯ ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಹ್ಯಾಟ್ರಿಕ್ ಸೋಲು ಅನುಭವಿಸುವ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಎರಡು ಸ್ಥಾನದಲ್ಲಿವೆ.
 

Latest Videos


ಹೀಗಿರುವಾಗಲೇ ಬಾಲಿವುಡ್ ಸ್ಟಾರ್ ನಟರಾಗಿರುವ ಅಕ್ಷಯ್ ಕುಮಾರ್ ಹಾಗೂ ಟೈಗರ್‌ ಶ್ರಾಫ್, ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಪ್ಲೇ ಆಫ್ ಪ್ರವೇಶಿಸಬಲ್ಲ 4 ತಂಡಗಳು ಯಾವುವು ಎನ್ನುವುದರ ಬಗ್ಗೆ ಅಚ್ಚರಿಯ ಭವಿಷ್ಯ ನುಡಿದಿದ್ದಾರೆ.

ಅಲಿ ಅಬ್ಬಾಸ್ ಝಫರ್ ನಿರ್ದೇಶನದ ಬಡೆ "ಮಿಯಾನ್, ಚೋಟೇ ಮಿಯಾನ್" ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾವು ಏಪ್ರಿಲ್ 10ರಂದು ತೆರೆಗೆ ಅಪ್ಪಳಿಸಲಿದೆ.

ಈ ಸಿನಿಮಾ ಪ್ರಮೋಷನ್‌ನಲ್ಲಿ ಪಾಲ್ಗೊಂಡಿದ್ದ ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್, 2024ರ ಐಪಿಎಲ್ ಟೂರ್ನಿಯಲ್ಲಿ ಪ್ಲೇ ಆಫ್ ಪ್ರವೇಶಿಸಬಲ್ಲ ತಂಡಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಪ್ರಸ್ತುತ ಟೂರ್ನಿಯಲ್ಲಿ ಗೆಲುವಿಗಾಗಿ ಸಾಕಷ್ಟು ಪರದಾಡುತ್ತಿರುವ ರಾಯಲ್‌ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಪ್ಲೇ ಆಫ್ ಪ್ರವೇಶಿಸಲಿವೆ ಎಂದು ಅಕ್ಷಯ್ ಕುಮಾರ್ ಭವಿಷ್ಯ ನುಡಿದಿದ್ದಾರೆ.

ಇನ್ನೊಂದೆಡೆ ಟೈಗರ್ ಶ್ರಾಫ್‌, ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಈ ಬಾರಿಯ ಐಪಿಎಲ್‌ನಲ್ಲಿ ಪ್ಲೇ ಆಫ್ ಪ್ರವೇಶಿಸಲಿವೆ ಎಂದು ಭವಿಷ್ಯ ನುಡಿದಿದ್ದಾರೆ.

5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಹ್ಯಾಟ್ರಿಕ್ ಸೋಲು ಅನುಭವಿಸಿತ್ತು. ಆದರೆ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಎದುರು ಭರ್ಜರಿ ಗೆಲುವು ಸಾಧಿಸುವ ಮೂಲಕ ಗೆಲುವಿನ ಖಾತೆ ತೆರೆದಿದೆ. ಇನ್ನೊಂದೆಡೆ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆಡಿದ 5 ಪಂದ್ಯಗಳ ಪೈಕಿ 4 ಸೋಲು ಹಾಗೂ ಒಂದು ಗೆಲುವು ಕಂಡಿದೆ.

ಅಕ್ಷಯ್ ಕುಮಾರ್ ಹಾಗೂ ಟೈಗರ್‌ ಶ್ರಾಫ್ ಭವಿಷ್ಯ ನಿಜವಾಗುತ್ತಾ ಅಥವಾ ಈ ಬಾರಿ ಪ್ಲೇ ಆಫ್ ಪ್ರವೇಶಿಸಬಲ್ಲ ನಾಲ್ಕು ಐಪಿಎಲ್ ತಂಡಗಳು ಯಾವುವು ಎನ್ನುವುದನ್ನು ಕಾಮೆಂಟ್ ಮಾಡಿ.

click me!