Published : Apr 02, 2025, 02:48 PM ISTUpdated : Apr 02, 2025, 02:51 PM IST
ಬೆಂಗಳೂರು: ಹೊಡಿಬಡಿಯಾಟಕ್ಕೆ ಹೆಸರುವಾಸಿಯಾದ ಐಪಿಎಲ್ ಟೂರ್ನಿಯಲ್ಲಿ ಬ್ಯಾಟರ್‌ಗಳದ್ದೇ ಕಾರುಬಾರು. ಬನ್ನಿ ನಾವಿಂದು ಐಪಿಎಲ್ ಇತಿಹಾಸದಲ್ಲಿ ಮೊದಲ ಓವರ್‌ನಲ್ಲೇ ಗರಿಷ್ಠ ರನ್ ಬಾರಿಸಿದ ತಂಡ ಯಾವುದು ನೋಡೋಣ .
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಮೊದಲ ಓವರ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಕ್ಕನ್ ಚಾರ್ಜಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮೊದಲ ಓವರ್‌ನಲ್ಲೇ 20 ರನ್ ಸಿಡಿಸಿದ ಸಾಧನೆ ಮಾಡಿವೆ.
25
21 ರನ್: ರಾಜಸ್ಥಾನ ರಾಯಲ್ಸ್:
2009ರ ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಕೋಲ್ಕತಾ ನೈಟ್ ರೈಡರ್ಸ್ ವಿರುದ್ದ ಮೊದಲ ಓವರ್‌ನಲ್ಲೇ 21 ರನ್ ಸಿಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿತ್ತು.
35
21 ರನ್: ಕೋಲ್ಕತಾ ನೈಟ್ ರೈಡರ್ಸ್:
2018ರಲ್ಲಿ ನಡೆದ ಐಪಿಎಲ್ ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವು ರಾಜಸ್ಥಾನ ರಾಯಲ್ಸ್ ಎದುರು 21 ರನ್ ಸಿಡಿಸುವ ಮೂಲಕ ಆರ್ ಆರ್ ದಾಖಲೆಯನ್ನು ಸರಿಗಟ್ಟುವಲ್ಲಿ ಯಶಸ್ವಿಯಾಗಿದೆ.
45
24 ರನ್: ಡೆಲ್ಲಿ ಕ್ಯಾಪಿಟಲ್ಸ್
ಕೋಲ್ಕತಾ ನೈಟ್ ರೈಡರ್ಸ್ ತಂಡವು 2021ರ ಐಪಿಎಲ್ ಟೂರ್ನಿಯಲ್ಲಿ ಅಹಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲ ಓವರ್‌ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್‌ನಿಂದ 24 ರನ್ ಚಚ್ಚಿಸಿಕೊಂಡಿತ್ತು.
55
26 ರನ್: ರಾಜಸ್ಥಾನ ರಾಯಲ್ಸ್
ರಾಜಸ್ಥಾನ ರಾಯಲ್ಸ್ ತಂಡವು ಐಪಿಎಲ್ ಇತಿಹಾಸದಲ್ಲೇ ಮೊದಲ ಓವರ್‌ನಲ್ಲಿ ಗರಿಷ್ಠ ರನ್ ಬಾರಿಸಿದ ತಂಡ ಎನಿಸಿಕೊಂಡಿದೆ. 2023ರ ಐಪಿಎಲ್ ಟೂರ್ನಿಯಲ್ಲಿ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು 26 ರನ್ ಚಚ್ಚಿತ್ತು.