ಬೆಂಗಳೂರು: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಭಾಗವಾಗಿರುವ ರಿಂಕು ಸಿಂಗ್, ಇದೀಗ ದಿಢೀರ್ ಎನ್ನುವಂತೆ ಭಾರತ ತಂಡ ತೊರೆದು ಮನೆಗೆ ವಾಪಾಸ್ಸಾಗಿದ್ದಾರೆ. ಅವರ ತಂದೆ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಈ ಕುರಿತಾದ ಮಹತ್ವದ ಅಪ್‌ಡೇಟ್ಸ್ ಇಲ್ಲಿದೆ ನೋಡಿ.
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್-8 ಹಂತದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎದುರು ಹೀನಾಯ ಸೋಲು ಅನುಭವಿಸಿದೆ. ಹೀಗಾಗಿ ಸೆಮಿಫೈನಲ್ ಪ್ರವೇಶಿಸುವ ಕನಸು ಜೀವಂತವಾಗಿಟ್ಟುಕೊಳ್ಳಬೇಕಿದ್ದರೇ ಇನ್ನುಳಿದ ಎರಡು ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಟೀಂ ಇಂಡಿಯಾ ಸಿಲುಕಿದೆ.
26
ಮಹತ್ವದ ಪಂದ್ಯಕ್ಕೂ ಮುನ್ನ ತಂಡ ತೊರೆದ ರಿಂಕು ಸಿಂಗ್
ಟೀಂ ಇಂಡಿಯಾ ಸೂಪರ್-8 ಹಂತದಲ್ಲಿ ಜಿಂಬಾಬ್ವೆ ಹಾಗೂ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದೆ. ಈ ಎರಡು ಪಂದ್ಯಗಳನ್ನು ಜಯಿಸಿದರಷ್ಟೇ ಸೆಮೀಸ್ ಪ್ರವೇಶಿಸಲು ಸಾಧ್ಯ. ಇದರ ಜತೆಗೆ ಅದೃಷ್ಟ ಕೂಡಾ ಕೈ ಹಿಡಿಯಬೇಕಷ್ಟೆ. ಹೀಗಿರುವಾಗಲೇ ರಿಂಕು ಸಿಂಗ್ ಕೂಡಾ ದಿಢೀರ್ ಎನ್ನುವಂತೆ ತಂಡ ತೊರೆದಿದ್ದಾರೆ.
36
ರಿಂಕು ಸಿಂಗ್ ತಂದೆಗೆ ಲಿವರ್ ಕ್ಯಾನ್ಸರ್
ಹೌದು, ಮಾಧ್ಯಮಗಳ ವರದಿಗಳ ಪ್ರಕಾರ, ರಿಂಕು ಸಿಂಗ್ ಅವರ ತಂದೆ ನಾಲ್ಕನೇ ಹಂತದ ಲಿವರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಸದ್ಯ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ ಎನ್ನಲಾಗುತ್ತದೆ. ಇದೇ ಕಾರಣಕ್ಕಾಗಿ ರಿಂಕು ಭಾರತ ತಂಡವನ್ನು ತೊರೆದು ಆಸ್ಪತ್ರೆಗೆ ದೌಡಾಯಿಸಿದ್ದಾರೆ ಎನ್ನಲಾಗಿದೆ.
ನಿನ್ನೆಯಷ್ಟೇ ಮೈದಾನದಲ್ಲಿ ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್, ಅರ್ಶದೀಪ್ ಸಿಂಗ್, ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಇನ್ನಿತರ ಆಟಗಾರರು ಭರ್ಜರಿ ನೆಟ್ ಪ್ರಾಕ್ಟೀಸ್ ನಡೆಸಿದ್ದರು. ಆದರೆ ಈ ವೇಳೆ ರಿಂಕು ಸಿಂಗ್ ಕಾಣಿಸಿಕೊಂಡಿರಲಿಲ್ಲ.
56
ನಿರೀಕ್ಷಿತ ಪ್ರದರ್ಶನ ತೋರಲು ರಿಂಕು ವಿಫಲ
ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ರಿಂಕು ಸಿಂಗ್ ಪರಿಣಾಮಕಾರಿ ಪ್ರದರ್ಶನ ತೋರಲು ವಿಫಲವಾಗಿದ್ದಾರೆ. ಐದು ಇನ್ನಿಂಗ್ಸ್‌ಗಳಿಂದ ರಿಂಕು ಕೇವಲ 24 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ವರ್ಷ 10 ಟಿ20 ಪಂದ್ಯಗಳನ್ನಾಡಿರುವ ರಿಂಕು ಸಿಂಗ್, 28.75ರ ಸರಾಸರಿಯಲ್ಲಿ ಕೇವಲ 115 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ.
66
ರಿಂಕು ಸಿಂಗ್ ಅಲಭ್ಯರಾದರೇ?
ಒಂದು ವೇಳೆ ರಿಂಕು ಸಿಂಗ್ ಅಲಭ್ಯರಾದರೇ, ಅವರ ಸ್ಥಾನಕ್ಕೆ ಸಂಜು ಸ್ಯಾಮ್ಸನ್ ಆಡುವ ಹನ್ನೊಂದರ ಬಳಗ ಕೂಡಿಕೊಳ್ಳುವ ಸಾಧ್ಯತೆಯಿದೆ. ಭಾರತ ತಂಡವು ಸೂಪರ್-8 ಹಂತದ ಮುಂದಿನ ಪಂದ್ಯದಲ್ಲಿ ಜಿಂಬಾವ್ವೆ ತಂಡವನ್ನು ಎದುರಿಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.