ಟೆಸ್ಟ್ ಕ್ರಿಕೆಟ್‌ನಲ್ಲಿ ಧೋನಿ ಹೆಸರಲ್ಲಿದ್ದ ಅಪರೂಪದ ದಾಖಲೆ ಮುರಿದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್!

First Published | Oct 19, 2024, 5:49 PM IST

ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ನ್ಯೂಜಿಲೆಂಡ್ ಎದುರಿನ ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ, ಕ್ರಿಕೆಟ್ ದಂತಕಥೆ ಧೋನಿ ಹೆಸರಿನಲ್ಲಿದ್ದ ಅಪರೂಪದ ದಾಖಲೆ ಬ್ರೇಕ್ ಮಾಡಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ

ಪಂತ್ 2500 ರನ್

ಬೆಂಗಳೂರು ಟೆಸ್ಟ್​ನಲ್ಲಿ ಭಾರತ ತಂಡ ಮೊದಲ ಇನ್ನಿಂಗ್ಸ್​ನಲ್ಲಿ ಕಳಪೆ ಪ್ರದರ್ಶನ ನೀಡಿತು. ಆದರೆ, ಎರಡನೇ ಇನ್ನಿಂಗ್ಸ್​ನಲ್ಲಿ ಅದ್ಭುತವಾಗಿ ಕಮ್‌ಬ್ಯಾಕ್. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅರ್ಧಶತಕ ಬಾರಿಸಿದರು. ಇನ್ನು ಸರ್ಫರಾಜ್ ಖಾನ್ 150 ರನ್ ಗಳಿಸಿದರೆ, ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಶತಕದಿಂದ ಕೇವಲ ಒಂದು ರನ್​ನಿಂದ ವಂಚಿತರಾದರು. 

ಭಾರತ vs ನ್ಯೂಜಿಲೆಂಡ್

ನ್ಯೂಜಿಲೆಂಡ್ ವಿರುದ್ಧದ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಅದ್ಭುತವಾಗಿ ಚೇತರಿಸಿಕೊಂಡಿದೆ. ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 46 ರನ್​ಗಳಿಗೆ ಆಲೌಟ್ ಆದ ಭಾರತ ತಂಡ ಎರಡನೇ ಇನ್ನಿಂಗ್ಸ್​ನಲ್ಲಿ ಭರ್ಜರಿಯಾಗಿಯೇ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದೆ.

Tap to resize

ನ್ಯೂಜಿಲೆಂಡ್ 402 ರನ್ ಗಳಿಸುವ ಮೂಲಕ ಮೊದಲ ಇನ್ನಿಂಗ್ಸ್​ನಲ್ಲಿ 356 ರನ್​ಗಳ ಮುನ್ನಡೆ ಸಾಧಿಸಿತು. ಮೂರನೇ ದಿನ ಭಾರತ ಎರಡನೇ ಇನ್ನಿಂಗ್ಸ್​ನಲ್ಲಿ ಆಕ್ರಮಣಕಾರಿಯಾಗಿ ಆಡಿತು. ಪಂದ್ಯದ ನಾಲ್ಕನೇ ದಿನವಾದ ಶನಿವಾರ (ಅಕ್ಟೋಬರ್ 19) ರಂದು ಇದು ಮುಂದುವರೆಯಿತು. ಎರಡನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ 462 ರನ್ ಬಾರಿಸಿ ಸರ್ವಪತನ ಕಂಡಿದೆ.

ಸರ್ಫರಾಜ್ ಖಾನ್, ರಿಷಭ್ ಪಂತ್ 177 ರನ್​ಗಳ ಜೊತೆಯಾಟ

ಎರಡನೇ ಇನ್ನಿಂಗ್ಸ್​ನಲ್ಲಿ ರೋಹಿತ್ ಶರ್ಮಾ (52), ವಿರಾಟ್ ಕೊಹ್ಲಿ (70) ಉತ್ತಮ ಇನ್ನಿಂಗ್ಸ್​ಗಳನ್ನು ಆಡಿ ಭಾರತ ತಂಡಕ್ಕೆ ಬಲವಾದ ಅಡಿಪಾಯ ಹಾಕಿದರು. ಸರ್ಫರಾಜ್ ಖಾನ್, ರಿಷಭ್ ಪಂತ್ ಭಾರತದ ಇನ್ನಿಂಗ್ಸ್ ಅನ್ನು ಮುಂದಕ್ಕೆ ಕೊಂಡೊಯ್ದರು. ನಾಲ್ಕನೇ ವಿಕೆಟ್​ಗೆ ಈ ಜೋಡಿ 177 ರನ್​ಗಳ ಜೊತೆಯಾಟವಾಡುವ ಮೂಲಕ ಇನ್ನಿಂಗ್ಸ್‌ ಮುನ್ನಡೆ ಸಾಧಿಸಲು ನೆರವಾದರು.

ಪಂತ್, ಭಾರತ vs ನ್ಯೂಜಿಲೆಂಡ್

ನಾಲ್ಕನೇ ದಿನ ಸರ್ಫರಾಜ್ ಖಾನ್ 150 ರನ್ ಗಳಿಸಿ ಔಟಾದರು. ತಮ್ಮ ಇನ್ನಿಂಗ್ಸ್​ನಲ್ಲಿ ಸರ್ಫರಾಜ್ ಖಾನ್ 18 ಬೌಂಡರಿ, 3 ಸಿಕ್ಸರ್ ಬಾರಿಸಿದರು. ರಿಷಭ್ ಪಂತ್ ಊಟದ ವಿರಾಮದೊಳಗೆ ಅರ್ಧಶತಕ ಬಾರಿಸಿದರು. ಪಂತ್ ತಮ್ಮ ಅರ್ಧಶತಕದ ಇನ್ನಿಂಗ್ಸ್​ನೊಂದಿಗೆ ಹಲವು ದಾಖಲೆಗಳನ್ನು ನಿರ್ಮಿಸಿದರು.  ನಂತರ ಅವರು ತಮ್ಮ ಅರ್ಧಶತಕವನ್ನು ಶತಕವನ್ನಾಗಿ ಪರಿವರ್ತಿಸಲು ಪ್ರಯತ್ನಿಸಿದರು. ಆದರೆ ಕೇವಲ ಒಂದು ರನ್​ನಿಂದ ಶತಕ ವಂಚಿತರಾದರು. 

ಧೋನಿ ದಾಖಲೆ ಮುರಿದ ರಿಷಭ್ ಪಂತ್

ಬೆಂಗಳೂರಿನಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ರಿಷಭ್ ಪಂತ್ 50 ರನ್ ಗಳಿಸಿದ ನಂತರ ಮತ್ತೊಂದು ಕ್ರಿಕೆಟ್ ದಾಖಲೆ ನಿರ್ಮಿಸಿದರು. ಟೆಸ್ಟ್ ಕ್ರಿಕೆಟ್​ನಲ್ಲಿ ಅತಿ ವೇಗವಾಗಿ 2,500 ರನ್ ಗಳಿಸಿದ ಭಾರತದ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡರು. ಕೇವಲ 62 ಇನ್ನಿಂಗ್ಸ್​ಗಳಲ್ಲಿ ಅವರು ಈ ಸಾಧನೆ ಮಾಡಿದರು. ಇದಕ್ಕೂ ಮೊದಲು ಈ ದಾಖಲೆ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು.

ಕ್ಯಾಪ್ಟನ್ ಕೂಲ್ ಖ್ಯಾತಿಯ ಧೋನಿ 69 ಇನ್ನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದ್ದರು. ಅದೇ ಸಮಯದಲ್ಲಿ, ಫಾರೂಕ್ ಇಂಜಿನಿಯರ್ 82 ಇನ್ನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದ್ದರು. ಮೊಣಕಾಲು ಗಾಯದಿಂದಾಗಿ ಪಂತ್ ಮೂರನೇ ದಿನ ಫೀಲ್ಡಿಂಗ್ ಮಾಡಲಿಲ್ಲ. ಒಂದು ದಿನ ವಿಶ್ರಾಂತಿ ಪಡೆದ ಅವರು ನಾಲ್ಕನೇ ದಿನ ಬ್ಯಾಟಿಂಗ್​ನಲ್ಲಿ ಮಿಂಚಿದರು.

Latest Videos

click me!