ಮ್ಯಾಂಚೆಸ್ಟರ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಆಂಡರ್‌ಸನ್-ತೆಂಡುಲ್ಕರ್ ಟ್ರೋಫಿ ಟೂರ್ನಿಯ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲೇ ರಿಷಭ್ ಪಂತ್ ಗಾಯಕ್ಕೆ ಒಳಗಾಗಿದ್ದಾರೆ. ಈ ಕುರಿತಂತೆ ಬಿಸಿಸಿಐ ಮಹತ್ವದ ಅಪ್‌ಡೇಟ್ ನೀಡಿದೆ. ಏನದು?
ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯವು ಇಲ್ಲಿನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಆರಂಭವಾಗಿದ್ದು ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ.
29
ಮೊದಲ ದಿನದಾಟದಂತ್ಯಕ್ಕೆ ಟೀಂ ಇಂಡಿಯಾ 4 ವಿಕೆಟ್ ಕಳೆದುಕೊಂಡು 264 ರನ್ ಬಾರಿಸಿದೆ. ಸದ್ಯ ಆಲ್ರೌಂಡರ್‌ಗಳಾದ ರವೀಂದ್ರ ಜಡೇಜಾ ಹಾಗೂ ಶಾರ್ದೂಲ್ ಠಾಕೂರ್ ತಲಾ 19 ರನ್ ಬಾರಿಸಿದ್ದು ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
39
ಇನ್ನು ಮೊದಲ ದಿನದಾಟದಲ್ಲಿ ಟೀಂ ಇಂಡಿಯಾ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, 48 ಎಸೆತಗಳಲ್ಲಿ ಆಕರ್ಷಕ 37 ರನ್ ಗಳಿಸಿದ್ದಾಗ ರಿಟೈರ್ಡ್ ಹರ್ಟ್ ಆಗಿ ಕಾರ್ಟ್‌ನಲ್ಲಿ ಕರೆದೊಯ್ಯಲಾಯಿತು.
ಇದು ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ನಲ್ಲಿ ಭಾರತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಫಾರ್ಮ್‌ನಲ್ಲಿರುವ ವಿಕೆಟ್ ಕೀಪರ್ ರಿಷಭ್ ಪಂತ್ ಗಾಯಗೊಂಡು ಹೊರ ನಡೆದಿದ್ದಾರೆ.
59
37 ರನ್ ಗಳಿಸಿದ್ದಾಗ ಕ್ರಿಸ್ ವೋಕ್ಸ್ ಎಸೆತದಲ್ಲಿ ರಿವರ್ಸ್ ಸ್ವೀಪ್ ಮಾಡಲು ಯತ್ನಿಸುವಾಗ ರಿಷಭ್ ಪಂತ್ ಕಾಲಿಗೆ ಪೆಟ್ಟಾಯಿತು. ಪಂತ್ ಕಾಲಿನ ಬೆರಳಿಗೆ ಪೆಟ್ಟಾಗಿದ್ದು, ಊದಿಕೊಂಡು ರಕ್ತ ಸೋರಿತು. ನಡೆಯಲು ಕಷ್ಟಪಟ್ಟ ಪಂತ್‌ರನ್ನು ಕಾರ್ಟ್‌ನಲ್ಲಿ ಕರೆದೊಯ್ಯಲಾಯಿತು.
69
ಇದೀಗ ಈ ಕುರಿತಂತೆ ಬಿಸಿಸಿಐ ಮಹತ್ವದ ಅಪ್‌ಡೇಟ್ ನೀಡಿದೆ. ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದ ಮೊದಲ ದಿನ ರಿಷಭ್ ಪಂತ್ ಅವರ ಬಲಗಾಲಿನ ಪಾದಕ್ಕೆ ಚೆಂಡು ಬಡಿದಿದ್ದು, ಗಾಯವಾಗಿದೆ.
79
ಅವರನ್ನು ಸ್ಟೇಡಿಯಂನಿಂದ ಸ್ಕ್ಯಾನ್‌ಗಾಗಿ ಕರೆದೊಯ್ಯಲಾಗಿದೆ. ಬಿಸಿಸಿಐ ವೈದ್ಯಕೀಯ ಸಿಬ್ಬಂದಿಯು ಅವರ ಆರೋಗ್ಯದ ಮೇಲೆ ನಿಗಾಯಿಟ್ಟಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.
89
ಇನ್ನು ರಿಷಭ್ ಪಂತ್ ಅವರ ಗಾಯದ ತೀವ್ರತೆಯ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ. ಸದ್ಯ ರಿಟೈರ್ಡ್ ಹರ್ಟ್ ಆಗಿರುವ ರಿಷಭ್ ಪಂತ್ ಮೊದಲ ಇನ್ನಿಂಗ್ಸ್‌ನಲ್ಲಿ ಮತ್ತೆ ಬ್ಯಾಟಿಂಗ್ ಮಾಡಲು ಇಳಿಯುತ್ತಾರೆಯೇ ಅಥವಾ ಇಲ್ಲವೇ ಎನ್ನುವುದನ್ನು ಕಾದು ನೋಡಬೇಕಿದೆ.
99
ಲಾರ್ಡ್ ಟೆಸ್ಟ್ ಪಂದ್ಯದ ವೇಳೆಯಲ್ಲಿಯೇ ರಿಷಭ್ ಪಂತ್ ಕೈಬೆರಳಿನ ಗಾಯಕ್ಕೆ ಒಳಗಾಗಿದ್ದರು. ಹೀಗಾಗಿ ಕೇವಲ ಬ್ಯಾಟರ್ ಆಗಿ ಮಾತ್ರ ಕಾಣಿಸಿಕೊಂಡಿದ್ದರು. ಧೃವ್ ಜುರೆಲ್ ವಿಕೆಟ್ ಕೀಪರ್ ಆಗಿ ಕಾರ್ಯ ನಿರ್ವಹಿಸಿದ್ದರು.