ಏಕದಿನ ಸರಣಿಯಿಂದ ಪಂತ್ ಔಟ್; ಸಂಜು, ಇಶಾನ್ ಕಿಶನ್ ಬದಲಿಗೆ ಈ ವಿಕೆಟ್ ಕೀಪರ್‌ಗೆ ಬಿಸಿಸಿಐ ಬುಲಾವ್!

Published : Jan 11, 2026, 12:21 PM IST

ವಡೋದರಾ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಲಿದೆ. ಹೀಗಿರುವಾಗಲೇ ಭಾರತ ತಂಡದಿಂದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಗಾಯದ ಸಮಸ್ಯೆಯಿಂದಾಗಿ ಹೊರಬಿದ್ದಿದ್ದಾರೆ. ಹೀಗಾಗಿ ಮತ್ತೊಬ್ಬ ವಿಕೆಟ್ ಕೀಪರ್ ತಂಡ ಕೂಡಿಕೊಂಡಿದ್ದಾರೆ. 

PREV
19
ಏಕದಿನ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಶಾಕ್

ಜನವರಿ 11ರಿಂದ ಆರಂಭವಾಗಲಿರುವ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯಕ್ಕೆ ವಡೋದರಾ ಆತಿಥ್ಯ ವಹಿಸಿದೆ. ಹೀಗಿರುವಾಗಲೇ ಭಾರತ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಬಿದ್ದಿದ್ದಾರೆ.

29
ರಿಷಭ್ ಪಂತ್ ಕಿಬ್ಬೊಟ್ಟೆಗೆ ನೋವು

ಹೌದು, ಕಿವೀಸ್ ಎದುರಿನ ಪಂದ್ಯಕ್ಕೂ ಮುನ್ನ ದಿನ ನೆಟ್ ಪ್ರಾಕ್ಟೀಸ್ ಮಾಡುವ ವೇಳೆ ಚೆಂಡು ರಿಷಭ್ ಪಂತ್ ಅವರ ಕಿಬ್ಬೊಟ್ಟೆಗೆ ಬಡಿದಿದ್ದು, ತೀವ್ರ ನೋವಿನಿಂದ ಮೈದಾನ ತೊರೆದರು. ಹೆಚ್ಚಿನ ಪರೀಕ್ಷೆ ಬಳಿಕ ವೈದ್ಯರು ರಿಷಭ್ ಪಂತ್‌ಗೆ ವಿಶ್ರಾಂತಿಗೆ ಸೂಚಿಸಿದ್ದು, ಇದೀಗ ಕಿವೀಸ್ ಎದುರಿನ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ.

39
2024ರ ಆಗಸ್ಟ್‌ನಲ್ಲಿ ಕೊನೆಯ ಬಾರಿಗೆ ಭಾರತ ಏಕದಿನ ತಂಡ ಪ್ರತಿನಿಧಿಸಿದ್ದ ಪಂತ್

2024ರ ಆಗಸ್ಟ್‌ ಬಳಿಕ ಭಾರತ ಏಕದಿನ ತಂಡ ಕೂಡಿಕೊಂಡಿದ್ದ ರಿಷಭ್ ಪಂತ್‌ಗೆ ಇದೀಗ ಮತ್ತೊಮ್ಮೆ ನಿರಾಸೆ ಎದುರಾಗಿದ್ದು, ಏಕದಿನ ಕ್ರಿಕೆಟ್‌ ಆಡಲು ಮತ್ತಷ್ಟು ಸಮಯ ಕಾಯಬೇಕಾದ ಪರಿಸ್ಥಿತಿ ಬಂದೊದಗಿದೆ.

49
ಚಾಂಪಿಯನ್ಸ್ ಟ್ರೋಫಿಯಲ್ಲಿ ಒಂದೇ ಒಂದು ಪಂದ್ಯವಾಡದ ಪಂತ್

ರಿಷಭ್ ಪಂತ್ ಇಂಗ್ಲೆಂಡ್ ಸರಣಿ ಹಾಗೂ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲೂ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದರು. ಆದರೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿರಲಿಲ್ಲ

59
ಇಶಾನ್ ಕಿಶನ್-ಸಂಜುಗೆ ನಿರಾಸೆ

ಇನ್ನು ರಿಷಭ್ ಪಂತ್ ತಂಡದಿಂದ ಹೊರಬಿದ್ದಿದ್ದರಿಂದ ಮುಂಬರುವ ಟಿ20 ಸರಣಿ ಹಾಗೂ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿರುವ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಏಕದಿನ ಸರಣಿ ಕೂಡಿಕೊಳ್ಳಬಹುದು ಎನ್ನುವ ನಿರೀಕ್ಷೆ ಕೂಡಾ ಹುಸಿಯಾಗಿದೆ.

69
ಧ್ರುವ್ ಜುರೆಲ್‌ಗೆ ಬುಲಾವ್

ಇದೀಗ ಬಿಸಿಸಿಐ ಆಯ್ಕೆ ಸಮಿತಿಯು ರಿಷಭ್ ಪಂತ್ ಸ್ಥಾನಕ್ಕೆ ಉತ್ತರ ಪ್ರದೇಶ ಮೂಲದ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೆಲ್ ಅವರನ್ನು ಭಾರತ ಏಕದಿನ ಸರಣಿಗೆ ಆಯ್ಕೆ ಮಾಡಿದೆ.

79
ವಿಜಯ್ ಹಜಾರೆ ಟೂರ್ನಿಯಲ್ಲಿ ಜುರೆಲ್ ಝಲಕ್

ಧ್ರುವ್ ಜುರೆಲ್ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಉತ್ತರ ಪ್ರದೇಶ ಪರ 7 ಪಂದ್ಯಗಳನ್ನಾಡಿ ಎರಡು ಶತಕ ಸಹಿತ 558 ರನ್ ಸಿಡಿಸಿ ಆಯ್ಕೆ ಸಮಿತಿ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು.

89
ಕಿವೀಸ್ ಎದುರಿನ ಸರಣಿಗೆ ಪರಿಷ್ಕೃತ ಭಾರತ ತಂಡ ಹೀಗಿದೆ ನೋಡಿ:

ಶುಭ್‌ಮನ್ ಗಿಲ್(ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್(ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್(ಉಪನಾಯಕ), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿರ್ ರಾಣಾ, ಪ್ರಸಿದ್ದ್ ಕೃಷ್ಣ, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಅರ್ಶದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್(ವಿಕೆಟ್ ಕೀಪರ್).

99
ಇಂದು ಮಧ್ಯಾಹ್ನ 1.30ಕ್ಕೆ ಪಂದ್ಯ ಆರಂಭ

ಭಾರತ-ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಇಂದು ಮಧ್ಯಾಹ್ನ 1.30ರಿಂದ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್‌ ಹಾಗೂ ಜಿಯೋ ಹಾಟ್‌ಸ್ಟಾರ್‌ನಲ್ಲಿ ನೇರ ಪ್ರಸಾರವನ್ನು ವೀಕ್ಷಿಸಬಹುದು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories