ಗಾಯದಿಂದಾಗಿ ಇಂಗ್ಲೆಂಡ್ ಟೆಸ್ಟ್ ಸರಣಿಯಿಂದ ಹೊರಬಿದ್ದ ರಿಷಭ್‌ ಪಂತ್‌ಗೆ ಬಿಸಿಸಿಐನಿಂದ ಸಿಗುವ ಸಂಬಳ ಎಷ್ಟು?

Published : Jul 24, 2025, 02:52 PM IST

ಮ್ಯಾಂಚೆಸ್ಟರ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದ ವೇಳೆಗೆ ಕಾಲ್ಬೆರಳಿನ ಗಾಯಕ್ಕೆ ತುತ್ತಾಗಿರುವ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಇಂಗ್ಲೆಂಡ್ ಸರಣಿಯಿಂದ ಹೊರಬಿದ್ದಿದ್ದಾರೆ. ಪಂತ್‌ಗೆ ಬಿಸಿಸಿಐನಿಂದ ಸಿಗುವ ಸಂಬಳ ಎಷ್ಟು ಎನ್ನುವುದನ್ನು ನೋಡೋಣ ಬನ್ನಿ. 

PREV
17

ಶುಭ್‌ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ, ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಂಡಿದೆ. ಸದ್ಯ ಮೊದಲ 3 ಪಂದ್ಯಗಳು ಮುಕ್ತಾಯವಾಗಿದ್ದು ಇಂಗ್ಲೆಂಡ್ ಸರಣಿಯಲ್ಲಿ 2-1ರ ಮುನ್ನಡೆ ಸಾಧಿಸಿದೆ.

27

ಇದೀಗ ನಾಲ್ಕನೇ ಟೆಸ್ಟ್ ಪಂದ್ಯವು ಮ್ಯಾಂಚೆಸ್ಟರ್‌ನ ಓಲ್ಡ್‌ ಟ್ರಾಫರ್ಡ್ ಮೈದಾನದಲ್ಲಿ ನಡೆಯುತ್ತಿದ್ದು, ಮೊದಲ ದಿನ ಟೀಂ ಇಂಡಿಯಾ 4 ವಿಕೆಟ್ ಕಳೆದುಕೊಂಡು 264 ರನ್ ಕಲೆಹಾಕಿದೆ.

37

ಇನ್ನು ಇದೆಲ್ಲದರ ನಡುವೆ 37 ರನ್ ಗಳಿಸಿ ಅರ್ಧಶತಕದತ್ತ ದಾಪುಗಾಲಿಡುತ್ತಿದ್ದ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಕ್ರಿಸ್ ವೋಕ್ಸ್ ಬೌಲಿಂಗ್‌ನಲ್ಲಿ ರಿವರ್ಸ್‌ ಸ್ವೀಪ್ ಮಾಡುವ ಯತ್ನದಲ್ಲಿ ಚೆಂಡು ಕಾಲಿಗೆ ಅಪ್ಪಳಿಸಿದ್ದು ರಿಟೈರ್ಡ್ ಹರ್ಟ್ ಆಗಿ ಪೆವಿಲಿಯನ್ ಸೇರಿದರು.

47

ಗಾಯದ ತೀವ್ರತೆಯ ಕುರಿತಂತೆ ರಿಷಭ್ ಪಂತ್‌ ಸ್ಕ್ಯಾನ್‌ಗೆ ಒಳಗಾಗಿದ್ದರು. ಇದೀಗ ರಿಷಭ್ ಪಂತ್ ಮುಂದಿನ ಆರು ವಾರಗಳ ಕಾಲ ಕ್ರಿಕೆಟ್‌ನಿಂದ ಹೊರಬಿದ್ದಿದ್ದಾರೆ. ಇದು ಟೀಂ ಇಂಡಿಯಾ ಪಾಲಿಗೆ ಗಾಯದ ಮೇಲೆ ಬರೆ ಎಳೆದಂತೆ ಮಾಡಿದೆ.

57

ಇನ್ನು ಭಾರತ ಟೆಸ್ಟ್ ತಂಡದ ಉಪನಾಯಕ, ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್‌ಗೆ ಬಿಸಿಸಿಐನಿಂದ ಎಷ್ಟು ಸಂಬಳ ಸಿಗುತ್ತೆ ಎನ್ನುವುದನ್ನು ನೋಡೋಣ ಬನ್ನಿ.

67

ರಿಷಭ್ ಪಂತ್ ಬಿಸಿಸಿಐನಿಂದ A+ ಕಾಂಟ್ರ್ಯಾಕ್ಟ್ ಪಡೆದುಕೊಂಡಿದ್ದಾರೆ. A+ ಕಾಂಟ್ರ್ಯಾಕ್ಟ್ ಹೊಂದಿದ ಭಾರತೀಯ ಆಟಗಾರರಿಗೆ 7 ಕೋಟಿ ರುಪಾಯಿ ಸಂಭಾವನೆಯನ್ನು ಪಡೆದುಕೊಳ್ಳುತ್ತಾರೆ.

77

ರಿಷಭ್ ಪಂತ್ ಮಾತ್ರವಲ್ಲದೇ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಹಾಗೂ ರವೀಂದ್ರ ಜಡೇಜಾ ಕೂಡಾ A+ ಕಾಂಟ್ರ್ಯಾಕ್ಟ್ ಪಡೆದುಕೊಂಡಿದ್ದು, ವಾರ್ಷಿಕ 7 ಕೋಟಿ ರುಪಾಯಿ ಸಂಬಳ ಪಡೆಯುತ್ತಿದ್ದಾರೆ.

Read more Photos on
click me!

Recommended Stories