ಸಾರ್ವಕಾಲಿಕ ಶ್ರೇಷ್ಠ ಭಾರತ ಏಕದಿನ ತಂಡವನ್ನು ಆಯ್ಕೆ ಮಾಡಿದ ರಾಬಿನ್ ಉತ್ತಪ್ಪ! ಇಬ್ಬರು ಪ್ರಮುಖ ಆಟಗಾರರಿಗೆ ಇಲ್ಲ ಸ್ಥಾನ

Published : Jul 16, 2026, 12:01 PM IST

ಬೆಂಗಳೂರು: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಸಾರ್ವಕಾಲಿಕ ಶ್ರೇಷ್ಠ ಭಾರತ ಏಕದಿನ ಕ್ರಿಕೆಟ್‌ ತಂಡವನ್ನು ಆಯ್ಕೆ ಮಾಡಿದ್ದಾರೆ. ಆದರೆ ಉತ್ತಪ್ಪ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಹಾಗೂ ಮಾರಕ ವೇಗಿ ಮೊಹಮ್ಮದ್ ಶಮಿಯನ್ನು ಕೈಬಿಟ್ಟಿದ್ದು ಚರ್ಚೆಗೆ ಗ್ರಾಸವಾಗಿದೆ.

PREV
16
ಸಾರ್ವಕಾಲಿಕ ಶ್ರೇಷ್ಠ ಭಾರತ ಏಕದಿನ ತಂಡದ ಆರಂಭಿಕರಾಗಿ ದಾದಾ- ಸಚಿನ್

ಕನ್ನಡದ ಕುವರ, ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ, ಸಾರ್ವಕಾಲಿಕ ಶ್ರೇಷ್ಠ ಭಾರತ ಏಕದಿನ ತಂಡವನ್ನು ಆಯ್ಕೆ ಮಾಡಿದ್ದಾರೆ. ಆದರೆ ಉತ್ತಪ್ಪ ಆಯ್ಕೆ ಮಾಡಿದ ತಂಡದಲ್ಲಿ ಇಬ್ಬರು ಪ್ರಮುಖ ಆಟಗಾರರನ್ನು ಕೈಬಿಟ್ಟಿದ್ದು ಚರ್ಚೆಗೆ ಗ್ರಾಸವಾಗಿದೆ. ಹೌದು, ರಾಬಿನ್ ಉತ್ತಪ್ಪ ಇನ್‌ಸ್ಟಾಗ್ರಾಂನಲ್ಲಿ 'ಇದು ಅಥವಾ ಅದು' ಚಾಲೆಂಜ್‌ನಲ್ಲಿ ಪಾಲ್ಗೊಂಡು, ಭಾರತ ಸಾರ್ವಕಾಲಿಕ ಶ್ರೇಷ್ಠ ಭಾರತ ಏಕದಿನ ತಂಡವನ್ನು ಆಯ್ಕೆ ಮಾಡಿದ್ದಾರೆ. ಈ ಪೈಕಿ ಏಕದಿನ ಕ್ರಿಕೆಟ್‌ನಲ್ಲಿ ಮೂರು ದ್ವಿಶತಕ ಸಿಡಿಸಿರುವ ಏಕೈಕ ಬ್ಯಾಟರ್ ರೋಹಿತ್ ಶರ್ಮಾ ಅವರನ್ನು ಕೈಬಿಟ್ಟು, ಆರಂಭಿಕರಾಗಿ ಸಚಿನ್ ತೆಂಡೂಲ್ಕರ್ ಹಾಗೂ ಸೌರವ್ ಗಂಗೂಲಿ ಅವರನ್ನು ಆಯ್ಕೆ ಮಾಡಿದ್ದಾರೆ. ಸಚಿನ್ ಏಕದಿನ ಕ್ರಿಕೆಟ್‌ನಲ್ಲಿ 18,426 ರನ್ ಸಿಡಿಸಿದ್ದರೇ, ದಾದಾ 308 ಪಂದ್ಯಗಳನ್ನಾಡಿ 11,221 ರನ್ ಬಾರಿಸಿದ್ದಾರೆ.

26
ಮೂರನೇ ಕ್ರಮಾಂಕಕ್ಕೆ ಕೊಹ್ಲಿ ಫಿಕ್ಸ್

ಇನ್ನು ಮೂರನೇ ಕ್ರಮಾಂಕದಲ್ಲಿ ಭಾರತದ ರನ್ ಮಷೀನ್ ವಿರಾಟ್‌ ಕೊಹ್ಲಿಗೆ ಮಣೆ ಹಾಕಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಅತಿಹೆಚ್ಚ ಶತಕ(54) ಸಿಡಿಸಿದ ದಾಖಲೆ ಕೊಹ್ಲಿ ಹೆಸರಿನಲ್ಲಿದೆ. ಏಕದಿನ ಕ್ರಿಕೆಟ್‌ನಲ್ಲಿ ಭಾರತ ಪರ ಎರಡನೇ ಗರಿಷ್ಠ ರನ್ ಸರದಾರರಾಗಿ ವಿರಾಟ್ ಕೊಹ್ಲಿ ಹೊರಹೊಮ್ಮಿದ್ದಾರೆ.

36
ಧೋನಿಗೆ ನಾಯಕ ಪಟ್ಟ

ಇನ್ನು ಮಧ್ಯಮ ಕ್ರಮಾಂಕದಲ್ಲಿ ಯುವರಾಜ್ ಸಿಂಗ್, ಮಹೇಂದ್ರ ಸಿಂಗ್ ಧೋನಿ ಹಾಗೂ ಸುರೇಶ್ ರೈನಾಗೆ ಕ್ರಮವಾಗಿ 4-5-6ನೇ ಸ್ಥಾನ ನೀಡಿದ್ದಾರೆ. ಇನ್ನು ತಮ್ಮ ಸಾರ್ವಕಾಲಿಕ ಶ್ರೇಷ್ಠ ತಂಡದ ನಾಯಕರಾಗಿ ಧೋನಿಗೆ ಪಟ್ಟ ಕಟ್ಟಿದ್ದಾರೆ. ಧೋನಿ ನಾಯಕತ್ವದಲ್ಲೇ ಭಾರತ 2011ರ ಏಕದಿನ ವಿಶ್ವಕಪ್ ಗೆದ್ದು ಬೀಗಿತ್ತು.

46
ಬೌಲಿಂಗ್ ವಿಭಾಗ

ಆಲ್ರೌಂಡರ್ ವಿಭಾಗದಲ್ಲಿ ಹಾರ್ದಿಕ್ ಪಾಂಡ್ಯ ಅವರನ್ನು ಕೈಬಿಟ್ಟು ಕಪಿಲ್ ದೇವ್ ಹಾಗೂ ರವೀಂದ್ರ ಜಡೇಜಾಗೆ ಮಣೆ ಹಾಕಿದ್ದಾರೆ. ಇನ್ನು ತಜ್ಞ ಸ್ಪಿನ್ನರ್‌ ಆಗಿ ದಿಗ್ಗಜ ಲೆಗ್‌ಸ್ಪಿನ್ನರ್ ಅನಿಲ್ ಕುಂಬ್ಳೆಗೆ ಸ್ಥಾನ ನೀಡಿದ್ದಾರೆ. ಇನ್ನು ಸ್ಪೆಷಲಿಸ್ಟ್ ವೇಗಿಗಳಾಗಿ ಜಹೀರ್ ಖಾನ್ ಹಾಗೂ ಜಸ್ಪ್ರೀತ್ ಬುಮ್ರಾಗೆ ತಂಡದಲ್ಲಿ ಮಣೆ ಹಾಕಿದ್ದಾರೆ.

56
ಉತ್ತಪ್ಪ ಕನಸಿನ ತಂಡದಲ್ಲಿ ರೋಹಿತ್-ಶಮಿಗಿಲ್ಲ ಸ್ಥಾನ

ರಾಬಿನ್ ಉತ್ತಪ್ಪ ಆಯ್ಕೆ ಮಾಡಿದ ತಂಡದ ಪೈಕಿ ರೋಹಿತ್ ಶರ್ಮಾ ಹಾಗೂ ಮೊಹಮ್ಮದ್ ಶಮಿ ಅವರನ್ನು ಕೈಬಿಟ್ಟಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ ಭಾರತ ಪರ ಮೂರನೇ ಗರಿಷ್ಠ ರನ್ ಸ್ಕೋರರ್ ಎನಿಸಿಕೊಂಡಿದ್ದಾರೆ. ಇದಷ್ಟೇ ಅಲ್ಲದೇ ಭಾರತ ಕಂಡ ಅತ್ಯಂತ ಯಶಸ್ವಿ ಆರಂಭಿಕ ಬ್ಯಾಟರ್‌ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ಇನ್ನು ಮೊಹಮ್ಮದ್ ಶಮಿ ಏಕದಿನ ಕ್ರಿಕೆಟ್‌ನಲ್ಲಿ ಇದುವರೆಗೂ 206 ವಿಕೆಟ್ ಕಬಳಿಸಿದ್ದು, ಸಕ್ರಿಯ ವೇಗದ ಬೌಲರ್‌ಗಳ ಪೈಕಿ ಭಾರತದ ಗರಿಷ್ಠ ವಿಕೆಟ್ ಸರದಾರ ಎನಿಸಿಕೊಂಡಿದ್ದಾರೆ. ಇದಷ್ಟೇ ಅಲ್ಲದೇ ಐಸಿಸಿ ಟೂರ್ನಿಯಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಭಾರತದ ವೇಗಿ ಎನ್ನುವ ಹೆಗ್ಗಳಿಕೆ ಶಮಿಗಿದೆ. ಹೀಗಿದ್ದೂ ಉತ್ತಪ್ಪ ಈ ಇಬ್ಬರನ್ನು ಕಡೆಗಣಿಸಿದ್ದು ಚರ್ಚೆಗೆ ಗ್ರಾಸವಾಗಿದೆ.

66
ರಾಬಿನ್ ಉತ್ತಪ್ಪ ಆಯ್ಕೆ ಮಾಡಿದ ಸಾರ್ವಕಾಲಿಕ ಶ್ರೇಷ್ಠ ಭಾರತ ಏಕದಿನ ತಂಡ ಹೀಗಿದೆ:

ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ, ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್, ಮಹೇಂದ್ರ ಸಿಂಗ್ ಧೋನಿ(ನಾಯಕ), ಸುರೇಶ್ ರೈನಾ, ಕಪಿಲ್ ದೇವ್, ರವೀಂದ್ರ ಜಡೇಜಾ, ಅನಿಲ್ ಕುಂಬ್ಳೆ, ಜಹೀರ್ ಖಾನ್, ಜಸ್ಪ್ರೀತ್ ಬುಮ್ರಾ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories