ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ಮೈದಾನಕ್ಕಿಳಿಯೋದು ಯಾವಾಗ? ಕೊನೆಗೂ ಫ್ಯಾನ್ಸ್‌ಗೆ ಸಿಕ್ತು ಗುಡ್‌ ನ್ಯೂಸ್!

Published : Aug 07, 2025, 05:33 PM IST

ಬೆಂಗಳೂರು: ಭಾರತ ಇಬ್ಬರು ಕ್ರಿಕೆಟ್ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಸದ್ಯ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ಹೊರಗುಳಿದಿದ್ದಾರೆ. ಇದೀಗ ಈ ಇಬ್ಬರು ಮೈದಾನಕ್ಕಿಳಿಯುವುದು ಯಾವಾಗ ಎಂದು ಕಾಯುತ್ತಿರುವ ಕ್ರಿಕೆಟ್ ಅಭಿಮಾನಿಗಳಿಗೆ ಇದೀಗ ಗುಡ್‌ ನ್ಯೂಸ್ ಸಿಕ್ಕಿದೆ.

PREV
17

ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಈಗಾಗಲೇ ಅಂತಾರಾಷ್ಟ್ರೀಯ ಟಿ20 ಹಾಗೂ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಹೀಗಾಗಿ ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಯಲ್ಲಿ ಈ ಇಬ್ಬರು ಆಟಗಾರರು ಕಾಣಿಸಿಕೊಂಡಿರಲಿಲ್ಲ.

27

ಇನ್ನು ಇದೇ ಆಗಸ್ಟ್ ತಿಂಗಳಿನಲ್ಲಿ ಟೀಂ ಇಂಡಿಯಾ, ಬಾಂಗ್ಲಾದೇಶ ಪ್ರವಾಸದಲ್ಲಿ ಏಕದಿನ ಹಾಗೂ ಟಿ20 ಸರಣಿ ಆಡಬೇಕಿತ್ತು. ಈ ಸರಣಿಯು ತಾಂತ್ರಿಕ ಕಾರಣಗಳಿಂದ ಮುಂದಿನ ವರ್ಷಕ್ಕೆ ಮುಂದೂಡಲ್ಪಟ್ಟಿದೆ.

37

ಹೀಗಾಗಿ ಭಾರತ ತಂಡವು 2025ರ ಸೆಪ್ಟೆಂಬರ್ ತಿಂಗಳಿನಿಂದ ಆರಂಭವಾಗಲಿರುವ ಏಷ್ಯಾಕಪ್ ಟೂರ್ನಿಯಲ್ಲಿ ಕಣಕ್ಕಿಳಿಯಲಿದೆ. ಆದರೆ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಗಮನದಲ್ಲಿಟ್ಟುಕೊಂಡು ಈ ಬಾರಿಯ ಏಷ್ಯಾಕಪ್ ಟೂರ್ನಿಯು ಟಿ20 ಮಾದರಿಯಲ್ಲಿ ನಡೆಯಲಿದೆ.

47

ಆದರೆ ಕಳೆದ ವರ್ಷವೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಈ ಇಬ್ಬರು ದಿಗ್ಗಜ ಕ್ರಿಕೆಟಿಗರು ನಿವೃತ್ತಿ ಘೋಷಿಸಿರುವುದರಿಂದ, ಏಷ್ಯಾಕಪ್‌ನಿಂದಲೂ ರೋಹಿತ್-ಕೊಹ್ಲಿ ಹೊರಗುಳಿಯಲ್ಲಿದ್ದಾರೆ. ಈ ಇಬ್ಬರು ಇನ್ನು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ.

57

2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕೊನೆಯ ಬಾರಿಗೆ ಭಾರತದ ಜೆರ್ಸಿ ತೊಟ್ಟು ಮೈದಾನದಲ್ಲಿ ಕಾಣಿಸಿಕೊಂಡಿದ್ದರು.

67

ಇದೀಗ ರೋಹಿತ್-ಕೊಹ್ಲಿ ಜೋಡಿ ಮುಂಬರುವ ಅಕ್ಟೋಬರ್‌ನಲ್ಲಿ ಟೀಂ ಇಂಡಿಯಾ ಪರ ಬ್ಲೂಜೆರ್ಸಿ ತೊಟ್ಟು ಮೈದಾನಕ್ಕಿಳಿಯುವುದು ಖಚಿತವಾಗಿದೆ. ಅಕ್ಟೋಬರ್‌ನಲ್ಲಿ ಟೀಂ ಇಂಡಿಯಾ, ಆಸ್ಟ್ರೇಲಿಯಾ ಎದುರು ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ.

77

ಇನ್ನು 2025ರ ಐಪಿಎಲ್‌ನಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ತಮ್ಮ ತಮ್ಮ ಫ್ರಾಂಚೈಸಿ ಪರ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಈ ಇಬ್ಬರು ಕ್ರಿಕೆಟಿಗರು ತಮ್ಮ ಕುಟುಂಬದ ಜತೆ ಬಿಡುವಿನ ಸಮಯವನ್ನು ಎಂಜಾಯ್ ಮಾಡುತ್ತಿದ್ದಾರೆ.

Read more Photos on
click me!

Recommended Stories