ಹೊಸ ವರ್ಷಾರಂಭದಲ್ಲೇ ರೋಹಿತ್ ಶರ್ಮಾ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌..!

First Published | Jan 2, 2024, 6:05 PM IST

ಮುಂಬೈ(ಜ.02): ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಅಭಿಮಾನಿಗಳಿಗೆ ವರ್ಷಾರಂಭದಲ್ಲೇ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಹಿಟ್‌ಮ್ಯಾನ್ ಖ್ಯಾತಿಯ ಮುಂಬರುವ ಟಿ20 ವಿಶ್ವಕಪ್ ವಿಶ್ವಕಪ್ ಆಡುವುದು ಬಹುತೇಕ ಖಚಿತ ಎನಿಸಿದೆ. ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ 2024ರಲ್ಲಿ ಬಹುನಿರೀಕ್ಷಿತ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದ್ದು, ಈ ಟೂರ್ನಿಯಲ್ಲಿ 20 ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ. 

ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ 2024ರಲ್ಲಿ ಬಹುನಿರೀಕ್ಷಿತ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದ್ದು, ಈ ಟೂರ್ನಿಯಲ್ಲಿ 20 ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ.

2024ರ ಟಿ20 ವಿಶ್ವಕಪ್ ಟೂರ್ನಿಗೆ ಈಗಾಗಲೇ ಎಲ್ಲಾ ತಂಡಗಳು ತಮ್ಮ ತಯಾರಿ ಆರಂಭಿಸಿವೆ. ಹೀಗಿರುವಾಗಲೇ ಟೀಂ ಇಂಡಿಯಾ ಮುಂದೆ ಒಂದು ದೊಡ್ಡ ಸವಾಲು ಎದುರಾಗಿದ್ದು, 2024ರಲ್ಲಿ ಭಾರತ ಕ್ರಿಕೆಟ್ ತಂಡವನ್ನು ನಾಯಕನಾಗಿ ಮುನ್ನಡೆಸುವುದು ಯಾರು ಎನ್ನುವ ಚರ್ಚೆ ಜೋರಾಗಿದೆ.

Tap to resize

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, 2022ರ ಟಿ20 ವಿಶ್ವಕಪ್ ಸೆಮಿಫೈನಲ್ ಬಳಿಕ ಕಳೆದೊಂದು ವರ್ಷದಲ್ಲಿ ಭಾರತ ಟಿ20 ತಂಡದಿಂದ ದೂರವೇ ಉಳಿದಿದ್ದಾರೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ಭಾರತ ತಂಡವನ್ನು ಮುನ್ನಡೆಸುತ್ತಿದ್ದರು.

ಆದರೆ ಹಾರ್ದಿಕ್ ಪಾಂಡ್ಯ ಆಗಾಗ ಇಂಜುರಿಗೊಳಗಾಗಿ ತಂಡದಿಂದ ಹೊರಬೀಳುತ್ತಿರುವ ಹಿನ್ನೆಲೆಯಲ್ಲಿ 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮತ್ತೊಮ್ಮೆ ರೋಹಿತ್ ಶರ್ಮಾ ಅವರೇ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ 2022ರ ಟಿ20 ವಿಶ್ವಕಪ್ ಟೂರ್ನಿಯ ಬಳಿಕ ಒಂದೇ ಒಂದು ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನಾಡಿಲ್ಲ. ಆದರೆ ಈ ಇಬ್ಬರು ಆಟಗಾರರು 2024ರ ಟಿ20 ವಿಶ್ವಕಪ್ ಆಡುವುದು ಬಹುತೇಕ ಖಚಿತ ಎನಿಸಿದೆ.

Rohit Sharma

ರೋಹಿತ್ ಶರ್ಮಾ 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬೀಳದೇ ಇದ್ದರೂ, ಹಲವು ಮಾಧ್ಯಮಗಳ ವರದಿ ಪ್ರಕಾರ ರೋಹಿತ್ ಟಿ20 ಮಾದರಿಗೆ ಕಮ್‌ಬ್ಯಾಕ್ ಮಾಡಿ ತಂಡವನ್ನು ಮುನ್ನಡೆಸಲಿದ್ದಾರೆ ಎನ್ನಲಾಗುತ್ತಿದೆ.
 

ಈಗಾಗಲೇ ಮುಂಬೈ ಇಂಡಿಯನ್ಸ್ ನಾಯಕತ್ವದಿಂದ ರೋಹಿತ್ ಶರ್ಮಾ ಕೆಳಗಿಳಿದಿರುವುದು ಅವರ ಅಭಿಮಾನಿಗಳಿಗೆ ನಿರಾಸೆಯನ್ನುಂಟು ಮಾಡಿತ್ತು. ಆದರೆ ಈಗ ರೋಹಿತ್ ಮತ್ತೊಮ್ಮೆ ಭಾರತ ಟಿ20 ಮುನ್ನಡೆಸಲಿದ್ದಾರೆ ಎನ್ನುವ ಸುದ್ದಿ ಅವರ ಅಭಿಮಾನಿಗಳಿಗೆ ಸಾಕಷ್ಟು ಥ್ರಿಲ್‌ ಉಂಟು ಮಾಡಿದೆ.

Latest Videos

click me!