2013ರಲ್ಲಿ ಐಪಿಎಲ್ ಚಾಂಪಿಯನ್:
2013ರ ಐಪಿಎಲ್ ಫೈನಲ್‌ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ 23 ರನ್ ಅಂತರದ ಜಯ ಸಾಧಿಸಿ ಚೊಚ್ಚಲ ಬಾರಿಗೆ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು.
2013ರಲ್ಲಿ ಚಾಂಪಿಯನ್ಸ್ ಲೀಗ್ ಟಿ20 ಟ್ರೋಫಿ ಚಾಂಪಿಯನ್:
2013ರ ಐಪಿಎಲ್ ಚಾಂಪಿಯನ್ ಆದ ಬೆನ್ನಲ್ಲೇ ನಡೆದ ಚಾಂಪಿಯನ್ಸ್ ಲೀಗ್ ಟಿ20 ಫೈನಲ್‌ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು, ರಾಜಸ್ಥಾನ ರಾಯಲ್ಸ್ ತಂಡವನ್ನು ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
(* ಸಾಂದರ್ಭಿಕ ಚಿತ್ರ)
2015ರ ಐಪಿಎಲ್ ಚಾಂಪಿಯನ್:
2015ರಲ್ಲಿ ನಡೆದ ಐಪಿಎಲ್ ಫೈನಲ್‌ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ 41 ರನ್ ಅಂತರದ ಗೆಲುವು ಸಾಧಿಸಿ, ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
2017ರ ಐಪಿಎಲ್ ಚಾಂಪಿಯನ್:
2017ರಲ್ಲಿ ನಡೆದ ಐಪಿಎಲ್ ಫೈನಲ್‌ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ವಿರುದ್ದ 1 ರನ್ ರೋಚಕ ಜಯ ಸಾಧಿಸಿ ಮೂರನೇ ಬಾರಿಗೆ ಐಪಿಎಲ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
2018ರಲ್ಲಿ ಏಷ್ಯಾಕಪ್ ಚಾಂಪಿಯನ್:
2018ರಲ್ಲಿ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ, ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೇಜರ್ ಟ್ರೋಫಿ ಜಯಿಸಿದ್ದರು. ಬಾಂಗ್ಲಾದೇಶ ಎದುರು ಭಾರತ 3 ವಿಕೆಟ್ ರೋಚಕ ಜಯ ಸಾಧಿಸಿತ್ತು.
2018ರ ನಿದಾಸ್ ಟ್ರೋಫಿ:
ಕ್ರಿಕೆಟ್ ಅಭಿಮಾನಿಗಳು ಎಂದೆಂದೂ ನೆನಪಿನಲ್ಲಿರುವಂತಹ ಟಿ20 ಸರಣಿ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಲಂಕಾದಲ್ಲಿ ನಡೆದ ನಿದಾಸ್ ಟ್ರೋಫಿ ಫೈನಲ್‌ನಲ್ಲಿ ಬಾಂಗ್ಲಾದೇಶ ಎದುರು ರೋಚಕ ಜಯ ಸಾಧಿಸಿತ್ತು. ದಿನೇಶ್ ಕಾರ್ತಿಕ್ ಕೊನೆಯ ಎಸೆತದಲ್ಲಿ ಸಿಕ್ಸರ್ ಚಚ್ಚಿ ತಂಡವನ್ನು ಗೆಲುವಿನ ದಡ ಸೇರಿಸಿದ್ದರು.
2019ರ ಐಪಿಎಲ್ ಚಾಂಪಿಯನ್:
2019ರಲ್ಲಿ ನಡೆದ ಐಪಿಎಲ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು, ಮತ್ತೊಮ್ಮೆ ಚೆನ್ನೈ ಸೂಪರ್ ಕಿಂಗ್ಸ್ ಎದುರು ಫೈನಲ್‌ನಲ್ಲಿ ಒಂದು ರನ್ ರೋಚಕ ಜಯ ಸಾಧಿಸಿ 4ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಮಾಲಿಂಗಾ ಕೊನೆಯ ಎಸೆತದಲ್ಲಿ ಶಾರ್ದೂಲ್ ಠಾಕೂರ್ ಅವರನ್ನು ಎಲ್‌ಬಿ ವಿಕೆಟ್ ಕಬಳಿಸಿ ರೋಚಕ ಗೆಲುವು ತಂದುಕೊಟ್ಟಿದ್ದರು.
2020ರ ಐಪಿಎಲ್ ಚಾಂಪಿಯನ್:
2020ರಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಫೈನಲ್‌ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ಎದುರು 5 ವಿಕೆಟ್ ಭರ್ಜರಿ ಜಯ ಸಾಧಿಸುವ ಮೂಲಕ ದಾಖಲೆಯ 5ನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಸೋಲು:
ರೋಹಿತ್ ಶರ್ಮಾ ಟೀಂ ಇಂಡಿಯಾ ಪೂರ್ಣ ಪ್ರಮಾಣದ ನಾಯಕರಾದ ಬಳಿಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಎದುರು ಸೋಲು ಅನುಭವಿಸಿದೆ. ಈ ಫೈನಲ್ ಸೋಲು ಹೊರತುಪಡಿಸಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ದ್ವಿಪಕ್ಷೀಯ ಸರಣಿ ಹೊರತುಪಡಿಸಿ ಬಹುಪಕ್ಷೀಯ ರಾಷ್ಟ್ರಗಳು ಪಾಲ್ಗೊಳ್ಳುವ ಸರಣಿಯ ಫೈನಲ್‌ನಲ್ಲಿ ಸೋಲು ಕಂಡಿಲ್ಲ.