IPL 2024 ರೋಹಿತ್ ಶರ್ಮಾ ಅಭಿಮಾನಿಗಳಿಗೆ ಗುಡ್‌ ನ್ಯೂಸ್..?

First Published | Apr 4, 2024, 2:16 PM IST

ಮುಂಬೈ: 17ನೇ ಆವೃತ್ತಿಯ ಐಪಿಎಲ್ ಟೂರ್ನಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮಾಡಿದ ಪ್ರಯೋಗ ಇದೀಗ ಕೈ ಸುಡುವಂತೆ ಮಾಡುತ್ತಿದೆ. ಹೀಗಿರುವಾಗಲೇ ಹಿಟ್‌ಮ್ಯಾನ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಗುವ ಸಾಧ್ಯತೆಯಿದೆ.ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

2024ರ ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಅಚ್ಚರಿಯ ರೀತಿಯಲ್ಲಿ ತಮ್ಮ ಯಶಸ್ವಿ ನಾಯಕ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿ ಹಾರ್ದಿಕ್ ಪಾಂಡ್ಯ ಅವರನ್ನು ಗುಜರಾತ್ ಟೈಟಾನ್ಸ್‌ನಿಂದ ಕರೆತಂದು ನಾಯಕ ಪಟ್ಟ ಕಟ್ಟಿತ್ತು.

ಇದು ಸ್ವತಃ ರೋಹಿತ್ ಶರ್ಮಾ ಅವರ ಅಸಮಾಧಾನಕ್ಕೂ ಕಾರಣವಾಗಿತ್ತು. ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಫ್ರಾಂಚೈಸಿ ಮೇಲೆ ತಮ್ಮ ಆಕ್ರೋಶವನ್ನು ಹೊರಹಾಕಿದ್ದರು.

Tap to resize

ಇದು ಸಾಲದೆಂಬಂತೆ 17ನೇ ಆವೃತ್ತಿ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ಹ್ಯಾಟ್ರಿಕ್‌ ಸೋಲಿನಿಂದ ಕಂಗೆಟ್ಟಿದೆ. ಈ ನಡುವೆ ಹಾರ್ದಿಕ್‌ ಪಾಂಡ್ಯ ಅವರಿಂದ ತಂಡದ ನಾಯಕತ್ವ ಹಿಂಪಡೆದು ಮತ್ತೆ ರೋಹಿತ್‌ ಶರ್ಮಾಗೆ ಹೊಣೆ ನೀಡುವ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಚರ್ಚೆಗಳು ಶುರುವಾಗಿವೆ. 

ಹಾರ್ದಿಕ್‌ ಪಂದ್ಯದ ವೇಳೆ ತೆಗೆದುಕೊಳ್ಳುವ ನಿರ್ಧಾರಗಳಲ್ಲಿ ತಪ್ಪು ಸಂಭವಿಸುತ್ತಿದ್ದು, ಹೀಗಾಗಿ ತಂಡಕ್ಕೆ 5 ಟ್ರೋಫಿ ಗೆಲ್ಲಿಸಿಕೊಟ್ಟಿರುವ ರೋಹಿತ್‌ ಅವರನ್ನೇ ಫ್ರಾಂಚೈಸಿಯು ಮತ್ತೆ ನಾಯಕನಾಗಿ ನೇಮಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. 

ಈ ಬಗ್ಗೆ ಮನೋಜ್‌ ತಿವಾರಿ ಸೇರಿದಂತೆ ಹಲವು ಮಾಜಿ ಕ್ರಿಕೆಟಿಗರೂ ಅಭಿಪ್ರಾಯ ವ್ಯಕ್ತಪಡಿಸಿದ್ದು, ಫ್ರಾಂಚೈಸಿಯು ಕಠಿಣ ನಿರ್ಧಾರ ತೆಗೆದುಕೊಳ್ಳಲೂಬಹುದು ಎಂದು ಅಂದಾಜಿಸಿದ್ದಾರೆ.
 

ಮುಂಬೈ ಇಂಡಿಯನ್ಸ್ ತಂಡವು ಏಪ್ರಿಲ್ 7ರಂದು ತನ್ನ ಪಾಲಿನ ಮುಂದಿನ ಪಂದ್ಯವನ್ನಾಡಲಿದೆ. ಈ ಪಂದ್ಯದ ವೇಳೆಗೆ ಹಾರ್ದಿಕ್ ಪಾಂಡ್ಯ ಅವರನ್ನು ಕೆಳಗಿಳಿಸಿ ರೋಹಿತ್ ಶರ್ಮಾಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ನಾಯಕ ಪಟ್ಟ ಕಟ್ಟುವ ಸಾಧ್ಯತೆಯಿದೆ ಎಂದು ತಿವಾರಿ ಹೇಳಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡವು ತವರಿನಲ್ಲಿ ಮುಂದಿನ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ಎದುರು ಆಡಲಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಬದಲಾಗುತ್ತಾರಾ ಕಾದು ನೋಡಬೇಕಿದೆ.

Latest Videos

click me!