ಬೆಂಗಳೂರು: ಮುಂಬರುವ ಆಸ್ಟ್ರೇಲಿಯಾ ಎದುರಿನ ಏಕದಿನ ಸರಣಿಗೆ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದಿಂದ ಕೆಳಗಿಳಿದಿದ್ದು, ಕೇವಲ ಆಟಗಾರನಾಗಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಇಂದು ರೋಹಿತ್ ಶರ್ಮಾ ಹೆಸರಿನಲ್ಲಿರುವ ಈ ಅಪರೂಪದ ರೆಕಾರ್ಡ್ ಬಗ್ಗೆ ತಿಳಿಯೋಣ
ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಮೂರು ಬಾರಿ ದ್ವಿಶತಕ ಸಿಡಿಸಿದ್ದಾರೆ. ಈ ರೆಕಾರ್ಡ್ ಬ್ರೇಕ್ ಮಾಡಲು ನೂರು ವರ್ಷವಾದರೂ ಸಾಧ್ಯವಾಗುವುದಿಲ್ಲ ಎಂದು ಕ್ರಿಕೆಟ್ ಪಂಡಿತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
26
2013ರಲ್ಲಿ ಆಸೀಸ್ ಎದುರು ಮೊದಲ ದ್ವಿಶತಕ
ರೋಹಿತ್ ಶರ್ಮಾ 2013ರಲ್ಲಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ದ ನಡೆದ ಪಂದ್ಯದಲ್ಲಿ ಸ್ಪೋಟಕ 209 ರನ್ ಬಾರಿಸಿದ್ದರು.
36
2014ರಲ್ಲಿ ಲಂಕಾ ಎದುರು ವೈಯುಕ್ತಿಕ ಗರಿಷ್ಠ ಸ್ಕೋರ್
ಇದಾಗಿ ಕೇವಲ ಒಂದು ವರ್ಷದ ಅಂತರದಲ್ಲಿ ಅಂದರೆ 2014ರಲ್ಲಿ ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಶ್ರೀಲಂಕಾ ವಿರುದ್ದದ ಪಂದ್ಯದಲ್ಲಿ ರೋಹಿತ್ ಶರ್ಮಾ 264 ರನ್ ಸಿಡಿಸಿದ್ದರು.
ಇನ್ನು 2017ರಲ್ಲಿ ರೋಹಿತ್ ಶರ್ಮಾ ಮೊಹಾಲಿಯಲ್ಲಿ ನಡೆದ ಶ್ರೀಲಂಕಾ ಎದುರಿನ ಏಕದಿನ ಪಂದ್ಯದಲ್ಲಿ 208 ರನ್ ಸಿಡಿಸಿದ್ದರು. ಈ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಮೂರು ಬಾರಿ ದ್ವಿಶತಕ ಸಿಡಿಸಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.
56
ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ವೈಯುಕ್ತಿಕ ಸ್ಕೋರ್
ಇನ್ನು ಏಕದಿನ ಕ್ರಿಕೆಟ್‌ನಲ್ಲಿ ಅತಿಹೆಚ್ಚು ವೈಯುಕ್ತಿಕ ಸ್ಕೋರ್ ದಾಖಲಿಸಿದ ಹೆಗ್ಗಳಿಕೆಯೂ ರೋಹಿತ್ ಶರ್ಮಾ ಹೆಸರಿನಲ್ಲಿ ಅಚ್ಚಳಿಯದೇ ಉಳಿದಿದೆ. ರೋಹಿತ್ ಶರ್ಮಾ ಶ್ರೀಲಂಕಾ ಎದುರು 264 ರನ್ ಸಿಡಿಸಿದ್ದು, ಈ ದಾಖಲೆ ಬ್ರೇಕ್ ಅಗೋದು ಸದ್ಯಕ್ಕಂತೂ ಅನುಮಾನ.
66
ನಿವೃತ್ತಿ ಹೊಸ್ತಿಲಲ್ಲಿ ರೋಹಿತ್ ಶರ್ಮಾ
ರೋಹಿತ್ ಶರ್ಮಾ ಕ್ರಿಕೆಟ್ ವೃತ್ತಿಜೀವನದ ಸಂಧ್ಯಾಕಾಲದಲ್ಲಿದ್ದು, ಆಸ್ಟ್ರೇಲಿಯಾ ಎದುರಿನ ಮೂರು ಪಂದ್ಯಗಳ ಸರಣಿಯೇ ಹಿಟ್‌ಮ್ಯಾನ್ ಪಾಲಿಗೆ ಕೊನೆಯ ಅಂತಾರಾಷ್ಟ್ರೀಯ ಸರಣಿ ಎನಿಸಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿಗಳಾಗಿವೆ.