ವಡೋದರ: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು 2026ರಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನಾಡುತ್ತಿವೆ. ಹೀಗಿರುವಾಗಲೇ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ, 148 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಯಾರೂ ಮಾಡದ ಅಪರೂಪದಲ್ಲೇ ಅಪರೂಪದ ದಾಖಲೆ ಬರೆಯಲು ರೆಡಿಯಾಗಿದ್ದಾರೆ.
ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಇಂದಿನಿಂದ ಆರಂಭವಾಗಿದೆ. ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ, ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಿದ್ದಾರೆ.
26
ಭಾರತ-ನ್ಯೂಜಿಲೆಂಡ್ ಏಕದಿನ ಸರಣಿ
ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಪಂದ್ಯದ ಬಳಿಕ ಜನವರಿ 14ರಂದು ಎರಡನೇ ಹಾಗೂ ಜನವರಿ 18ರಂದು ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯವು ನಡೆಯಲಿದೆ.
36
ಯಾರೂ ಮಾಡದ ದಾಖಲೆ ಬರೆಯಲು ರೆಡಿಯಾದ ರೋಹಿತ್ ಶರ್ಮಾ
ಇದೀಗ ಮುಂಬೈ ಮೂಲದ ರೋಹಿತ್ ಶರ್ಮಾ, 148 ವರ್ಷಗಳ ಸುದೀರ್ಘ ಇತಿಹಾಸವಿರುವ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವದಾಖಲೆ ನಿರ್ಮಿಸಲು ರೆಡಿಯಾಗಿದ್ದಾರೆ.
ಹೌದು, ರೋಹಿತ್ ಶರ್ಮಾ ಇನ್ನೆರಡು ಸಿಕ್ಸರ್ ಸಿಡಿಸಿದರೇ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 650 ಸಿಕ್ಸರ್ ಸಿಡಿಸಿದ ಜಗತ್ತಿನ ಮೊದಲ ಕ್ರಿಕೆಟಿಗ ಎನ್ನುವ ವಿಶ್ವದಾಖಲೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.
56
ಈಗಲೂ ವಿಶ್ವದಾಖಲೆ ರೋಹಿತ್ ಹೆಸರಿನಲ್ಲಿಯೇ ಇದೆ
ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿಯೇ(648 ಸಿಕ್ಸರ್) ಭದ್ರವಾಗಿದೆ. ಇನ್ನು ಯೂನಿವರ್ಸಲ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ 553 ಸಿಕ್ಸರ್ ಸಿಡಿಸುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ.
66
ಇಂದೇ ವಿಶ್ವದಾಖಲೆ ನಿರ್ಮಿಸ್ತಾರಾ ಹಿಟ್‌ಮ್ಯಾನ್?
ಪಾಕಿಸ್ತಾನದ ಶಾಹಿದ್ ಅಫ್ರಿದಿ 476 ಸಿಕ್ಸರ್ ಸಿಡಿಸುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ. ಇಂದೇ ರೋಹಿತ್ ಶರ್ಮಾ 650 ಸಿಕ್ಸರ್ ಗಡಿ ದಾಟಿ ವಿಶ್ವದಾಖಲೆ ನಿರ್ಮಿಸುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.