ಟಿ20 ಕ್ರಿಕೆಟ್‌ನಲ್ಲಿ 100, ಏಕದಿನ ಕ್ರಿಕೆಟ್‌ನಲ್ಲಿ 200 ರನ್ ಚಚ್ಚಿದ ನಾಲ್ವರು ಕ್ರಿಕೆಟಿಗರಿವರು..!

First Published Feb 2, 2023, 5:00 PM IST

ಬೆಂಗಳೂರು(ಫೆ.02): ಭಾರತ ಕ್ರಿಕೆಟ್ ತಂಡದ ಪ್ರತಿಭಾನ್ವಿತ ಆರಂಭಿಕ ಬ್ಯಾಟರ್ ಶುಭ್‌ಮನ್‌ ಗಿಲ್, ನ್ಯೂಜಿಲೆಂಡ್ ಎದುರಿನ ಮೂರನೇ ಹಾಗೂ ನಿರ್ಣಾಯಕ ಟಿ20 ಪಂದ್ಯದಲ್ಲಿ ಸಿಡಿಲಬ್ಬರದ ಶತಕ ಸಿಡಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಟೆಸ್ಟ್, ಏಕದಿನ ಹಾಗೂ ಟಿ20 ಪಂದ್ಯದಲ್ಲಿ ಶತಕ ಸಿಡಿಸಿದ ಕೆಲವೇ ಕೆಲವು ಭಾರತೀಯ ಬ್ಯಾಟರ್‌ಗಳಲ್ಲಿ ಗಿಲ್ ಕೂಡಾ ಒಬ್ಬರೆನಿಸಿಕೊಂಡಿದ್ದಾರೆ.
ಇನ್ನು ಸೀಮಿತ ಓವರ್‌ಗಳ ಕ್ರಿಕೆಟ್ ಇತಿಹಾಸದಲ್ಲಿ ಚುಟುಕು ಕ್ರಿಕೆಟ್‌ನಲ್ಲಿ ಶತಕ ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸಿದ 4ನೇ ಬ್ಯಾಟರ್ ಎನ್ನುವ ಹಿರಿಮೆಗೆ ಗಿಲ್ ಪಾತ್ರರಾಗಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಶತಕ ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸಿದ ನಾಲ್ವರು ಬ್ಯಾಟರ್‌ಗಳ ಕಂಪ್ಲೀಟ್‌ ಡೀಟೈಲ್ಸ್ ಇಲ್ಲಿದೆ ನೋಡಿ
 

Gill

1. ಶುಭ್‌ಮನ್ ಗಿಲ್‌: ಭಾರತ

ಆರಂಭಿಕ ಬ್ಯಾಟರ್ ಶುಭ್‌ಮನ್ ಗಿಲ್ ಇದೀಗ, ಅಂತಾರಾಷ್ಟ್ರೀಯ ಟಿ20 ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಶತಕ ಬಾರಿಸಿದ ಭಾರತದ ಬ್ಯಾಟರ್ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ. ಗಿಲ್, ನ್ಯೂಜಿಲೆಂಡ್ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ 208 ರನ್ ಸಿಡಿಸಿದ್ದರು. 

ಇದೀಗ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಕೊನೆಯ ಟಿ20 ಪಂದ್ಯದಲ್ಲಿ ಶುಭ್‌ಮನ್ ಗಿಲ್‌, ಕೇವಲ 63 ಎಸೆತಗಳಲ್ಲಿ ಅಜೇಯ 126 ರನ್ ಸಿಡಿಸಿ ಈ ಎಲೈಟ್ ಗ್ರೂಪ್ ಸೇರಿದ್ದಾರೆ.

2. ಕ್ರಿಸ್ ಗೇಲ್‌:

ಯೂನಿವರ್ಸೆಲ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್‌ ಕೂಡಾ, ಚುಟುಕು ಕ್ರಿಕೆಟ್‌ನಲ್ಲಿ ಶತಕ ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ.

ಗೇಲ್‌, 2015ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಜಿಂಬಾಬ್ವೆ ಎದುರು 215 ರನ್ ಚಚ್ಚಿದ್ದರು. ಇನ್ನು ಇದಕ್ಕೂ ಮೊದಲು ಗೇಲ್, 2007ರಲ್ಲಿ ನಡೆದ ಚೊಚ್ಚಲ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ದವೇ 117 ರನ್ ಚಚ್ಚಿದ್ದರು

3. ಮಾರ್ಟಿನ್ ಗಪ್ಟಿಲ್‌

ನ್ಯೂಜಿಲೆಂಡ್ ಅನುಭವಿ ಆರಂಭಿಕ ಬ್ಯಾಟರ್ ಮಾರ್ಟಿನ್ ಗಪ್ಟಿಲ್ ಕೂಡಾ ಟಿ20 ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಕ್ರಮವಾಗಿ ಶತಕ ಹಾಗೂ ದ್ವಿಶತಕ ಬಾರಿಸಿದ್ದಾರೆ. 2015ರ ಏಕದಿನ ವಿಶ್ವಕಪ್ ಕ್ವಾರ್ಟರ್ ಫೈನಲ್‌ನಲ್ಲಿ ಗಪ್ಟಿಲ್‌, ವೆಸ್ಟ್ ಇಂಡೀಸ್ ವಿರುದ್ದ 237 ರನ್ ಚಚ್ಚಿದ್ದರು.
 

ಇನ್ನು ಇದಕ್ಕೂ ಮೊದಲು ಗಪ್ಟಿಲ್, 2012ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಅಜೇಯ 101 ರನ್ ಬಾರಿಸಿದ್ದರು. ಇದಷ್ಟೇ ಅಲ್ಲದೇ ಆಸ್ಟ್ರೇಲಿಯಾ ವಿರುದ್ದವೂ ಟಿ20 ಕ್ರಿಕೆಟ್‌ನಲ್ಲಿ ಗಪ್ಟಿಲ್‌ ಶತಕ ಚಚ್ಚಿದ್ದರು.

4. ರೋಹಿತ್ ಶರ್ಮಾ

ಟಿ20 ಕ್ರಿಕೆಟ್‌ನಲ್ಲಿ ಶತಕ ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸಿದ ಏಷ್ಯಾದ ಮೊದಲ ಬ್ಯಾಟರ್ ಎನ್ನುವ ಹಿರಿಮೆ ರೋಹಿತ್ ಶರ್ಮಾ ಅವರದ್ದು. ಏಕದಿನ ಕ್ರಿಕೆಟ್‌ನಲ್ಲಿ 3 ದ್ವಿಶತಕ ಬಾರಿಸಿದ ಏಕೈಕ ಬ್ಯಾಟರ್ ಎನ್ನುವ ದಾಖಲೆಯೂ ರೋಹಿತ್ ಶರ್ಮಾ ಹೆಸರಿನಲ್ಲಿದೆ.
 

2013ರಲ್ಲಿ ರೋಹಿತ್ ಶರ್ಮಾ, ಆಸ್ಟ್ರೇಲಿಯಾ ಎದುರು 209 ರನ್ ಬಾರಿಸಿದ್ದರು. ಟಿ20 ಕ್ರಿಕೆಟ್‌ನಲ್ಲೂ ರೋಹಿತ್ ಶರ್ಮಾ 4 ಶತಕ ಸಿಡಿಸಿದ್ದಾರೆ. 2015ರಲ್ಲಿ ಮೊದಲ ಬಾರಿಗೆ ರೋಹಿತ್ ಟಿ20 ಕ್ರಿಕೆಟ್‌ನಲ್ಲಿ ದಕ್ಷಿಣ ಆಫ್ರಿಕಾ ಎದುರು ಶತಕ ಸಿಡಿಸಿದ್ದರು.

click me!