IPL 2024: ಯಾವ ತಂಡಕ್ಕೆ ಯಾರು ಕ್ಯಾಪ್ಟನ್..? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

First Published | Mar 21, 2024, 6:19 PM IST

ಬೆಂಗಳೂರು: 2024ನೇ ಸಾಲಿನ ಐಪಿಎಲ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಹೀಗಿರುವಾಗಲೇ ಟೂರ್ನಿಗೆ ಒಂದು ದಿನ ಬಾಕಿ ಇರುವಾಗ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್‌ ನಾಯಕನಾಗಿ ಋತುರಾಜ್ ಗಾಯಕ್ವಾಡ್ ಪಟ್ಟಕಟ್ಟಲಾಗಿದೆ. ಟೂರ್ನಿ ಆರಂಭಕ್ಕೂ ಮುನ್ನ ಎಲ್ಲಾ 10 ತಂಡಗಳ ಕ್ಯಾಪ್ಟನ್‌ಗಳು ಯಾರ್ಯಾರು ಎನ್ನುವುದನ್ನು ನೋಡೋಣ ಬನ್ನಿ.
 

1. ಚೆನ್ನೈ ಸೂಪರ್ ಕಿಂಗ್ಸ್; ಋತರಾಜ್ ಗಾಯಕ್ವಾಡ್

5 ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಟೂರ್ನಿ ಆರಂಭಕ್ಕೆ ಒಂದು ದಿನ ಬಾಕಿ ಇರುವಾಗಲೇ ಋತುರಾಜ್ ಗಾಯಕ್ವಾಡ್‌ಗೆ ನಾಯಕ ಪಟ್ಟ ಕಟ್ಟಲಾಗಿದೆ.
 

2. ಡೆಲ್ಲಿ ಕ್ಯಾಪಿಟಲ್ಸ್: ರಿಷಭ್ ಪಂತ್

ಚೊಚ್ಚಲ ಐಪಿಎಲ್ ಟ್ರೋಫಿ ಕನವರಿಕೆಯಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಇದೀಗ ರಿಷಭ್ ಪಂತ್ ನಾಯಕನಾಗಿ ಮತ್ತೊಮ್ಮೆ ಮುನ್ನಡೆಸಲಿದ್ದಾರೆ. ಕಳೆದ ಆವೃತ್ತಿಯಲ್ಲಿ ಡೇವಿಡ್ ವಾರ್ನರ್ ಡೆಲ್ಲಿ ಕ್ಯಾಪಿಟಲ್ಸ್ ಕ್ಯಾಪ್ಟನ್ ಆಗಿದ್ದರು.
 

Latest Videos


3. ಗುಜರಾತ್ ಟೈಟಾನ್ಸ್: ಶುಭ್‌ಮನ್ ಗಿಲ್

ಕಳೆದ ಆವೃತ್ತಿಯ ರನ್ನರ್ ಅಪ್ ಗುಜರಾತ್ ಟೈಟಾನ್ಸ್ ತಂಡದ ನೂತನ ನಾಯಕರಾಗಿ ಶುಭ್‌ಮನ್ ಗಿಲ್ ನೇಮಕವಾಗಿದ್ದಾರೆ. ಕಳೆದ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ಕ್ಯಾಪ್ಟನ್ ಆಗಿದ್ದರು.
 

4. ಕೋಲ್ಕತಾ ನೈಟ್ ರೈಡರ್ಸ್: ಶ್ರೇಯಸ್ ಅಯ್ಯರ್

ಎರಡು ಬಾರಿಯ ಐಪಿಎಲ್ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಈ ಬಾರಿ ಶ್ರೇಯಸ್ ಅಯ್ಯರ್ ಕ್ಯಾಪ್ಟನ್ ಆಗಿ ಮುನ್ನಡೆಸಲಿದ್ದಾರೆ. ಕಳೆದ ಆವೃತ್ತಿಯಲ್ಲಿ ನಿತೀಶ್ ರಾಣಾ ಕ್ಯಾಪ್ಟನ್ ಆಗಿದ್ದರು. 
 

5. ಲಖನೌ ಸೂಪರ್ ಜೈಂಟ್ಸ್: ಕೆ ಎಲ್ ರಾಹುಲ್

ಅದ್ಭುತ ನಾಯಕತ್ವದ ಗುಣಗಳನ್ನು ಹೊಂದಿರುವ ಕನ್ನಡಿಗ ಕೆ ಎಲ್ ರಾಹುಲ್ ಇದೀಗ ಮತ್ತೊಮ್ಮೆ ನಾಯಕನಾಗಿ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಲಖನೌಗೆ ಕಪ್ ಗೆಲ್ಲಿಸಿಕೊಡಬೇಕಾದ ಗುರಿ ರಾಹುಲ್ ಮೇಲಿದೆ.
 

6. ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಈ ಹಿಂದೆ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡವನ್ನು ಐದು ಬಾರಿ ಚಾಂಪಿಯನ್ ಪಟ್ಟಕ್ಕೇರಿಸಿದ್ದರು.
 

7. ಪಂಜಾಬ್ ಕಿಂಗ್ಸ್: ಶಿಖರ್ ಧವನ್

ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್ ಮತ್ತೊಮ್ಮೆ ನಾಯಕನಾಗಿ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಲು ಸಜ್ಜಾಗಿದ್ದಾರೆ. ಧವನ್‌ಗೆ ಚೊಚ್ಚಲ ಐಪಿಎಲ್ ಟ್ರೋಫಿ ಗೆಲ್ಲಲು ಪಂಜಾಬ್ ಕಿಂಗ್ಸ್ ಟಾರ್ಗೆಟ್ ಕೊಟ್ಟಿದೆ.
 

8. ರಾಜಸ್ಥಾನ ರಾಯಲ್ಸ್: ಸಂಜು ಸ್ಯಾಮ್ಸನ್

ಚೊಚ್ಚಲ ಆವೃತ್ತಿಯ ಐಪಿಎಲ್ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ತಂಡವನ್ನು ಮತ್ತೊಮ್ಮೆ ಸಂಜು ಸ್ಯಾಮ್ಸನ್ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಸಂಜು ಸ್ಯಾಮ್ಸನ್ ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. 
 

9. ಸನ್‌ರೈಸರ್ಸ್ ಹೈದರಾಬಾದ್: ಪ್ಯಾಟ್ ಕಮಿನ್ಸ್

ಆಸೀಸ್‌ಗೆ ಏಕದಿನ ವಿಶ್ವಕಪ್ ಗೆದ್ದುಕೊಟ್ಟ ನಾಯಕ ಪ್ಯಾಟ್ ಕಮಿನ್ಸ್, ಇದೀಗ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕರಾಗಿ ನೇಮಕವಾಗಿದ್ದಾರೆ. ಆರೆಂಜ್ ಆರ್ಮಿಯನ್ನು ಯಶಸ್ವಿಯಾಗಿ ಮುನ್ನಡೆಸುವ ಜವಾಬ್ದಾರಿ ಕಮಿನ್ಸ್ ಮುಂದಿದೆ.
 

10. ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್

ಆರ್‌ಸಿಬಿ ತಂಡದ ನಾಯಕರಾಗಿ ಫಾಫ್ ಡು ಪ್ಲೆಸಿಸ್ ಮತ್ತೊಮ್ಮೆ ಮುಂದುವರೆಯಲಿದ್ದಾರೆ. ಆರ್‌ಸಿಬಿ ಮಹಿಳಾ ತಂಡ ಈಗಾಗಲೇ WPL ಕಪ್ ಗೆದ್ದಿದ್ದು, ಆ ಟ್ರೋಫಿ ಡಬಲ್ ಮಾಡುವ ಹೊಣೆ ಫಾಫ್ ಮುಂದಿದೆ.
 

click me!