Arjun Tendulkar LSG Debut 19ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ತಮ್ಮ ಮಗ ಅರ್ಜುನ್ ತೆಂಡೂಲ್ಕರ್ ಲಖನೌ ಸೂಪರ್ ಜೈಂಟ್ಸ್ ಪರ ಪಾದಾರ್ಪಣೆ ಮಾಡಿ ಉತ್ತಮ ಪ್ರದರ್ಶನ ನೀಡಿದ್ದರ ಬಗ್ಗೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಭಾವುಕ ಸಂದೇಶ ರವಾನಿಸಿದ್ದಾರೆ.
ಲಖನೌ ಪರ ಮೊದಲ ಐಪಿಎಲ್ ಮ್ಯಾಚ್ ಆಡಿದ ಅರ್ಜುನ್ ತೆಂಡೂಲ್ಕರ್
2026ರ ಐಪಿಎಲ್ ಟೂರ್ನಿಯುದ್ದಕ್ಕೂ ಲಖನೌ ಸೂಪರ್ ಜೈಂಟ್ಸ್ ಪರ ಬೆಂಚ್ ಕಾಯಿಸಿದ್ದ ಪ್ರತಿಭಾನ್ವಿತ ಆಲ್ರೌಂಡರ್ ಅರ್ಜುನ್ ತೆಂಡೂಲ್ಕರ್‌ಗೆ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಎದುರು ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಕ್ಕಿತ್ತು. ತಮಗೆ ಸಿಕ್ಕ ಅವಕಾಶದಲ್ಲಿ ಗರ್ಮನಾರ್ಹ ಪ್ರದರ್ಶನ ತೋರುವಲ್ಲಿ ಅರ್ಜುನ್ ತೆಂಡೂಲ್ಕರ್ ಯಶಸ್ವಿಯಾಗಿದ್ದಾರೆ.
26
ಸೋಷಿಯಲ್ ಮೀಡಿಯಾದಲ್ಲಿ ಸಚಿನ್ ಭಾವುಕ ಸಂದೇಶ
ಇನ್ನು ಲಖನೌ ಸೂಪರ್ ಜೈಂಟ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ಮುಕ್ತಾಯದ ಬಳಿಕ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್, ತಮ್ಮ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ತಮ್ಮ ಮಗನ ತಾಳ್ಮೆ ಹಾಗೂ ಬದ್ದತೆಯನ್ನು ಕೊಂಡಾಡಿದ್ದಾರೆ.
36
ಅರ್ಜುನ್ ಕ್ರಿಕೆಟ್ ಮೇಲಿನ ಬದ್ದತೆಗೆ ಸಂತಸ ವ್ಯಕ್ತಪಡಿಸಿದ ಸಚಿನ್
ವೆಲ್‌ಡನ್ ಅರ್ಜುನ್, ಈ ಸೀಸನ್‌ನಲ್ಲಿ ನೀನು ನಿನ್ನ ಸಾಮರ್ಥ್ಯದ ಮೇಲೆ ನಂಬಿಕೆಯಿಟ್ಟಿದ್ದು, ಕೊನೆಯ ತನಕ ತಾಳ್ಮೆಯಿಂದಿದ್ದು, ಕಠಿಣ ಪರಿಶ್ರಮಪಟ್ಟಿದ್ದು. ಪಾಸಿಟಿವ್ ಆಗಿ ಇದ್ದ ರೀತಿ, ಕೊನೆಯ ಪಂದ್ಯದವರೆಗೂ ಅವಕಾಶಕ್ಕಾಗಿ ಕಾದ ರೀತಿ ನಿಜಕ್ಕೂ ನಿನ್ನೆ ಮೇಲೆ ಹೆಮ್ಮೆ ಎನಿಸುತ್ತಿದೆ.
ಕ್ರಿಕೆಟ್ ನಿನ್ನಲ್ಲಿ ಎಷ್ಟು ಕೌಶಲ್ಯವಿದೆಯೋ ಅಷ್ಟೇ ತಾಳ್ಮೆಯನ್ನು ಪರೀಕ್ಷಿಸುತ್ತದೆ. ನೀನು ಅವರೆಡನ್ನೂ ಇಂದು ತುಂಬಾ ಚೆನ್ನಾಗಿ ನಿಭಾಯಿಸಿದ್ದೀಯ. ನಿನ್ನ ಕಾಲು ಮೈದಾನದಲ್ಲಿಯೇ ಇರಲಿ. ಹಾಗೆಯೇ ಕ್ರಿಕೆಟ್ ಮೇಲಿನ ಪ್ರೀತಿ ಹೀಗೆಯೇ ಮುಂದುವರೆಯಲಿ. ಎಂದಿನಂತೆ ಪ್ರೀತಿಸುತ್ತೇನೆ ಎಂದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಬರೆದುಕೊಂಡಿದ್ದಾರೆ.
56
ಮುಂಬೈ ಇಂಡಿಯನ್ಸ್‌ನಿಂದ ಲಖನೌ ತೆಕ್ಕೆಗೆ ಜಾರಿದ್ದ ಅರ್ಜುನ್
19ನೇ ಆವೃತ್ತಿಯ ಐಪಿಎಲ್ ಟೂರ್ನಿಗೂ ಮುನ್ನ ಅರ್ಜುನ್ ತೆಂಡೂಲ್ಕರ್ ಕೇವಲ 30 ಲಕ್ಷ ರುಪಾಯಿಗೆ ಮುಂಬೈ ಇಂಡಿಯನ್ಸ್‌ನಿಂದ ಲಖನೌ ಸೂಪರ್ ಜೈಂಟ್ಸ್ ತೆಕ್ಕೆಗೆ ಜಾರಿದ್ದರು. ಇನ್ನು 19ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭವಾಗಿ 56 ದಿನಗಳು ಹಾಗೂ 67 ಪಂದ್ಯಗಳ ಬಳಿಕ ಕೊನೆಗೂ ಲಖನೌ ಪಾಲಿನ ಕೊನೆಯ ಪಂದ್ಯದಲ್ಲಿ ಅರ್ಜುನ್ ತೆಂಡೂಲ್ಕರ್‌ಗೆ ಐಪಿಎಲ್ ಪಂದ್ಯವನ್ನಾಡಲು ಅವಕಾಶ ಸಿಕ್ಕಿತ್ತು.
66
ಗಮನಾರ್ಹ ಪ್ರದರ್ಶನ ತೋರಿದ ಅರ್ಜುನ್ ತೆಂಡೂಲ್ಕರ್
ಸಿಕ್ಕ ಅವಕಾಶವನ್ನು ಬಳಸಿಕೊಂಡ ಅರ್ಜುನ್ ತೆಂಡೂಲ್ಕರ್ ಬ್ಯಾಟಿಂಗ್‌ನಲ್ಲಿ ಐದು ಎಸೆತಗಳಲ್ಲಿ 5 ರನ್ ಗಳಿಸಿದರು. ಇನ್ನು ಬೌಲಿಂಗ್‌ನಲ್ಲಿ 4 ಓವರ್ ಬೌಲಿಂಗ್ ಮಾಡಿ 9ರ ಎಕನಮಿಯಲ್ಲಿ 36 ರನ್ ನೀಡಿ ಅಪಾಯಕಾರಿ ಬ್ಯಾಟರ್ ಪ್ರಭ್‌ಸಿಮ್ರನ್ ಸಿಂಗ್ ಅವರನ್ನು ಔಟ್ ಮಾಡುವಲ್ಲಿ ಯಶಸ್ವಿಯಾಗಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.