ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಬೌಲರ್‌ಗಳು ಅದ್ಭುತವಾಗಿ ಬೌಲಿಂಗ್ ಮಾಡಿದರು. ಇದರಿಂದ ಭಾರತ ಕಡಿಮೆ ಮೊತ್ತ ಗಳಿಸಿತು. ಸೇಂಟ್ ಜಾರ್ಜ್ ಪಾರ್ಕ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಭಾರತವನ್ನು ಮೊದಲು ಬ್ಯಾಟಿಂಗ್‌ಗೆ ಇಳಿಸಿತು. ಮೊದಲ ಪಂದ್ಯದಲ್ಲೂ ಭಾರತ ಮೊದಲು ಬ್ಯಾಟಿಂಗ್ ಮಾಡಿತ್ತು. ಈ ಪಂದ್ಯದಲ್ಲಿ ಯಾವುದೇ ಬದಲಾವಣೆಗಳಿಲ್ಲದೆ ಭಾರತ ತಂಡ ಕಣಕ್ಕಿಳಿಯಿತು. ಡರ್ಬನ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಸೂರ್ಯಕುಮಾರ್ ನೇತೃತ್ವದ ಭಾರತ ಗೆದ್ದು 1-0 ಮುನ್ನಡೆ ಸಾಧಿಸಿತ್ತು. ಮೊದಲ ಪಂದ್ಯದಲ್ಲಿ ಭಾರತ 61 ರನ್‌ಗಳಿಂದ ಆತಿಥೇಯ ತಂಡವನ್ನು ಸೋಲಿಸಿತ್ತು. ಮೊದಲ ಪಂದ್ಯದಲ್ಲಿ ಡಬಲ್ ಸೆಂಚುರಿ ಸ್ಕೋರ್ ಮಾಡಿದ್ದ ಭಾರತ ಎರಡನೇ ಪಂದ್ಯದಲ್ಲಿ ಕುಸಿತ ಕಂಡಿತು. 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು ಕೇವಲ 124 ರನ್ ಗಳಿಸಿತು.
ಶತಕ ವೀರ ಸಂಜು ಸ್ಯಾಮ್ಸನ್ ಸೊನ್ನೆಗೆ ಔಟ್!
ಸತತ ಎರಡು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಶತಕ ಬಾರಿಸಿದ್ದ ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಹಲವು ದಾಖಲೆಗಳನ್ನು ಬರೆದಿದ್ದರು. ಭಾರತ vs ದಕ್ಷಿಣ ಆಫ್ರಿಕಾ ಎರಡನೇ ಪಂದ್ಯದಲ್ಲೂ ಅವರ ಮೇಲೆ ಭಾರಿ ನಿರೀಕ್ಷೆಗಳಿದ್ದವು. ಆದರೆ, ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಪಂದ್ಯದಲ್ಲಿ ಅವರು ಖಾತೆ ತೆರೆಯಲಾಗಲಿಲ್ಲ. ಮೂರನೇ ಬಾಲ್‌ಗೆ ಮಾರ್ಕೊ ಯಾನ್ಸನ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಡರ್ಬನ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಶತಕ ಬಾರಿಸಿ ಭಾರತದ ಗೆಲುವಿನ ರೂವಾರಿಯಾಗಿದ್ದ ಸ್ಯಾಮ್ಸನ್ ದೊಡ್ಡ ಹೊಡೆತಕ್ಕೆ ಪ್ರಯತ್ನಿಸಿ ವಿಕೆಟ್ ಕಳೆದುಕೊಂಡರು.
ಮೂರನೇ ಬಾಲ್‌ಗೆ ಬೌಲ್ಡ್ ಆದ ಸಂಜು ಸ್ಯಾಮ್ಸನ್
ಅಭಿಷೇಕ್ ಶರ್ಮ ಜೊತೆ ಆರಂಭಿಕರಾಗಿ ಬಂದ ಸಂಜು ಸ್ಯಾಮ್ಸನ್ ಅವರಿಂದ ಮತ್ತೊಂದು ದೊಡ್ಡ ಇನ್ನಿಂಗ್ಸ್ ನಿರೀಕ್ಷಿಸಲಾಗಿತ್ತು. ಆದರೆ ಖಾತೆ ತೆರೆಯದೆ ಔಟ್ ಆದರು. ಮಾರ್ಕೊ ಜಾನ್ಸನ್ ಎಸೆದ ಓವರ್‌ನ ಮೂರನೇ ಎಸೆತಕ್ಕೆ ಸ್ಯಾಮ್ಸನ್ ದೊಡ್ಡ ಹೊಡೆತಕ್ಕೆ ಪ್ರಯತ್ನಿಸಿದರು. ಆದರೆ ಕ್ಲೀನ್ ಬೌಲ್ಡ್ ಆಗುವ ಮೂಲಕ ನಿರಾಸೆ ಅನುಭವಿಸಿದರು. ಅವರು ಔಟ್ ಆದ ತಕ್ಷಣ, ಕಾಮೆಂಟ್ರಿ ನೀಡುತ್ತಿದ್ದ ಶಾನ್ ಪೊಲಾಕ್, 'ಹೀರೋ ಟು ಝೀರೋ' ಎಂದು ಹೇಳಿದ್ದು ವೈರಲ್ ಆಗಿದೆ. ಸ್ಯಾಮ್ಸನ್ ಬೌಲ್ಡ್ ಆದ ವಿಡಿಯೋ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಹಿಂದಿನ ಪಂದ್ಯದಲ್ಲಿ ಶತಕ ಬಾರಿಸಿದ್ದ ಸಂಜು ಸ್ಯಾಮ್ಸನ್
ದಕ್ಷಿಣ ಆಫ್ರಿಕಾ ಎದುರಿನ ಮೊದಲ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ಶತಕ ಸಿಡಿಸಿದ್ದರು. ಕೇವಲ 50 ಎಸೆತಗಳಲ್ಲಿ 107 ರನ್ ಗಳಿಸಿದ್ದರು. ತಮ್ಮ ಇನ್ನಿಂಗ್ಸ್‌ನಲ್ಲಿ 10 ಸಿಕ್ಸರ್ ಮತ್ತು 7 ಬೌಂಡರಿಗಳನ್ನು ಬಾರಿಸಿದ್ದರು. ಆ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಬೌಲರ್‌ಗಳು ಸ್ಯಾಮ್ಸನ್ ಮುಂದೆ ನಿಸ್ಸಹಾಯಕರಾಗಿದ್ದರು. ಆದರೆ ಎರಡನೇ ಪಂದ್ಯದಲ್ಲೂ ಅವರ ಇನ್ನಿಂಗ್ಸ್ ಅದ್ಭುತವಾಗಿರುತ್ತದೆ ಎಂದು ನಿರೀಕ್ಷಿಸಿದ್ದ ಅಭಿಮಾನಿಗಳಿಗೆ ನಿರಾಸೆ ಎದುರಾಯಿತು.
ದಕ್ಷಿಣ ಆಫ್ರಿಕಾ ಬೌಲರ್‌ಗಳ ಮಾರಕ ದಾಳಿ ಹಾಗೂ ಟ್ರಿಸ್ಟಿನ್ ಸ್ಟಬ್ಸ್ ಅವರ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡವು ಎರಡನೇ ಟಿ20 ಪಂದ್ಯದಲ್ಲಿ 3 ವಿಕೆಟ್ ರೋಚಕ ಜಯ ಸಾಧಿಸುವ ಮೂಲಕ 4 ಪಂದ್ಯಗಳ ಟಿ20 ಸರಣಿಯಲ್ಲಿ 1-1ರ ಸಮಬಲ ಸಾಧಿಸಿದೆ.
Sanju Samson
ಅಂದಹಾಗೆ ಇಂದು(ನವೆಂಬರ್ 11) ಸಂಜು ಸ್ಯಾಮ್ಸನ್ ಬರ್ತ್ ಡೇ. ತಮ್ಮ ಹುಟ್ಟುಹಬ್ಬಕ್ಕೂ ಮುನ್ನವೇ ಸಂಜು ಸ್ಯಾಮ್ಸನ್ ಶೂನ್ಯ ಸುತ್ತಿದ್ದು, ಅವರ ಅಭಿಮಾನಿಗಳಿಗೆ ನಿರಾಸೆಯಾಗುವಂತೆ ಮಾಡಿದೆ.