ಕ್ರಿಕೆಟ್ ಪಂದ್ಯಗಳಲ್ಲಿ ಮತ್ತೆ ಮತ್ತೆ ಪ್ರತಿಭಟನೆ
1999 ರಲ್ಲಿ ದೆಹಲಿಯಲ್ಲಿ ನಡೆದ ಭಾರತ-ಪಾಕಿಸ್ತಾನ ಪಂದ್ಯವನ್ನು ತಡೆಯುವ ಉದ್ದೇಶದಿಂದ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದ ಪಿಚ್ ಅನ್ನು ಶಿವಸೇನಾ ಕಾರ್ಯಕರ್ತರು ಅಗೆದು ಹಾಕಿದ್ದರು. ಹೀಗಿದ್ದೂ ಪಂದ್ಯ ನಡೆದು ಎರಡನೇ ಇನ್ನಿಂಗ್ಸ್‌ನಲ್ಲಿ ಅನಿಲ್ ಕುಂಬ್ಳೆ 10 ವಿಕೆಟ್ ಪಡೆದರು. 2016 ರ ಟಿ20 ವಿಶ್ವಕಪ್‌ನ ಸಮಯದಲ್ಲಿಯೂ ಹಲವು ನಗರಗಳಲ್ಲಿ ಪಾಕಿಸ್ತಾನದ ಪಂದ್ಯಗಳನ್ನು ತಡೆಯುವುದಾಗಿ ಹಿಂದೂತ್ವ ಸಂಘಟನೆಗಳು ಬೆದರಿಕೆ ಹಾಕಿದ್ದವು.
ಇದರಿಂದಾಗಿ ಪಾಕಿಸ್ತಾನದ ಪಂದ್ಯಗಳು ಕೋಲ್ಕತ್ತಾದಲ್ಲಿ ನಡೆದವು. ಈಗ ಬಾಂಗ್ಲಾದೇಶ ಕ್ರಿಕೆಟ್ ತಂಡದ ವಿರುದ್ಧವೂ ಪ್ರತಿಭಟನೆ ನಡೆಯುತ್ತಿದೆ. ಚೆನ್ನೈನಲ್ಲಿ ಭಾರತ-ಬಾಂಗ್ಲಾ ಸರಣಿಯ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದ್ದಾಗ, ಚೆಪಾಕ್ ಕ್ರೀಡಾಂಗಣದ ಹೊರಗೆ ಪ್ರತಿಭಟನೆ ನಡೆಯಿತು. ಈಗ ಗ್ವಾಲಿಯರ್‌ನಲ್ಲಿಯೂ ಪ್ರತಿಭಟನೆ ನಡೆಯುವ ಸಾಧ್ಯತೆಯಿದೆ.
14 ವರ್ಷಗಳ ನಂತರ ಗ್ವಾಲಿಯರ್‌ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ:
2010 ರಲ್ಲಿ ಗ್ವಾಲಿಯರ್‌ನಲ್ಲಿ ಕೊನೆಯದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆದಿತ್ತು. ಅಂದಿನಿಂದ ಈ ನಗರದಲ್ಲಿ ಯಾವುದೇ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆದಿಲ್ಲ. 14 ವರ್ಷಗಳ ನಂತರ ಗ್ವಾಲಿಯರ್‌ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆಯಲಿದೆ. ಆದರೆ ಮಾಧವರಾವ್ ಸಿಂಧಿಯಾ ಕ್ರೀಡಾಂಗಣದಲ್ಲಿ ಭಾರತ-ಬಾಂಗ್ಲಾ ಪಂದ್ಯ ಸುಗಮವಾಗಿ ನಡೆಯುತ್ತದೆಯೇ ಎಂಬುದು ಪ್ರಶ್ನಾರ್ಥಕವಾಗಿದೆ