ಭಾರತ ತಂಡದಲ್ಲಿ ಸಂಜು ಸ್ಯಾಮ್ಸನ್‌ ಕಂಬ್ಯಾಕ್‌, ತಿಲಕ್‌ ವರ್ಮಾಗೆ ಗೇಟ್‌ಪಾಸ್‌? ಜಿಂಬಾಬ್ವೆ ವಿರುದ್ಧ ಸಂಭಾವ್ಯ XI ಹೀಗಿದೆ

Published : Feb 23, 2026, 03:33 PM IST

ಟಿ20 ವಿಶ್ವಕಪ್ ಸೂಪರ್ 8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಹೀನಾಯ ಸೋಲು ಕಂಡಿದೆ. ಇದೀಗ ಭಾರತಕ್ಕೆ ಮುಂದಿನ ಎದುರಾಳಿ ಜಿಂಬಾಬ್ವೆ. ಹೀಗಾಗಿ, ಭಾರತ ತಂಡದಲ್ಲಿ ಬದಲಾವಣೆ ಆಗುತ್ತಾ ಎಂದು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಸಂಭಾವ್ಯ ಪ್ಲೇಯಿಂಗ್ XI ಇಲ್ಲಿದೆ.

PREV
111
ಅಭಿಷೇಕ್ ಶರ್ಮಾಗೆ ಮತ್ತೊಂದು ಚಾನ್ಸ್?
ಮೊದಲ ಮೂರು ಪಂದ್ಯಗಳಲ್ಲಿ ಸೊನ್ನೆ ಸುತ್ತಿದ್ದ ಅಭಿಷೇಕ್ ಶರ್ಮಾ, ದಕ್ಷಿಣ ಆಫ್ರಿಕಾ ವಿರುದ್ಧ 15 ರನ್ ಗಳಿಸಿದ್ದರು. ಆದರೆ, ತಮ್ಮ ಎಂದಿನ ಶೈಲಿಯಲ್ಲಿ ಆಡಲು ಸಾಧ್ಯವಾಗಲಿಲ್ಲ. ಆದರೂ, ಟೀಮ್ ಮ್ಯಾನೇಜ್‌ಮೆಂಟ್ ಅಭಿಷೇಕ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ.
211
ತಿಲಕ್ ವರ್ಮಾ ಬದಲು ಸಂಜುಗೆ ಚಾನ್ಸ್?
ವಿಶ್ವಕಪ್‌ನಲ್ಲಿ ಕಳಪೆ ಫಾರ್ಮ್‌ನಲ್ಲಿರುವ ತಿಲಕ್ ವರ್ಮಾ ಬದಲಿಗೆ ಸಂಜು ತಂಡಕ್ಕೆ ಬರಲಿದ್ದಾರೆ ಎನ್ನಲಾಗುತ್ತಿದೆ. ತಿಲಕ್ ದಕ್ಷಿಣ ಆಫ್ರಿಕಾ ವಿರುದ್ಧ ಕೇವಲ ಒಂದು ರನ್ ಗಳಿಸಿದ್ದರು. ಮೊದಲ ಮೂರು ಪಂದ್ಯಗಳಲ್ಲಿ ತಲಾ 25 ರನ್ ಗಳಿಸಿದ್ದರು. ಸಂಜು ನಮೀಬಿಯಾ ವಿರುದ್ಧ ಆಡಿದ ಒಂದು ಪಂದ್ಯದಲ್ಲಿ ಎಂಟು ಎಸೆತಗಳಲ್ಲಿ 22 ರನ್ ಗಳಿಸಿದ್ದರು.
311
ಇಶಾನ್ ಕಿಶನ್ ಮೂರನೇ ಕ್ರಮಾಂಕಕ್ಕೆ?
ಸಂಜು ಆರಂಭಿಕನಾಗಿ ಕಣಕ್ಕಿಳಿದರೆ, ಇಶಾನ್ ಕಿಶನ್ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಈ ಹಿಂದೆ ತಿಲಕ್ ಈ ಸ್ಥಾನದಲ್ಲಿ ಆಡುತ್ತಿದ್ದರು. ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಕಿಶನ್ ಮೂರನೇ ಕ್ರಮಾಂಕದಲ್ಲಿ ಆಡಿದ್ದರು.
411
ಸೂರ್ಯಕುಮಾರ್ ಯಾದವ್ ಅವರಿಂದಲೂ ನೀರಸ ಪ್ರದರ್ಶನ
ನಾಯಕ ಸೂರ್ಯಕುಮಾರ್ ನಾಲ್ಕನೇ ಕ್ರಮಾಂಕದಲ್ಲಿ ಮುಂದುವರಿಯಲಿದ್ದಾರೆ. ಮೊದಲ ಪಂದ್ಯದ ನಂತರ ಸೂರ್ಯ ಅವರಿಂದಲೂ ಹೇಳಿಕೊಳ್ಳುವಂತಹ ಪ್ರದರ್ಶನ ಬಂದಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧ ಅವರು 18 ರನ್‌ಗಳಿಗೆ ಔಟಾಗಿದ್ದರು.
511
ಮಧ್ಯಮ ಕ್ರಮಾಂಕದಲ್ಲಿ ಬಲ ತುಂಬಲಿರುವ ದುಬೆ
ಭರ್ಜರಿ ಫಾರ್ಮ್ ಮುಂದುವರಿಸುತ್ತಿರುವ ಶಿವಂ ದುಬೆ ಮಧ್ಯಮ ಕ್ರಮಾಂಕಕ್ಕೆ ಬಲ ತುಂಬಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲೂ ದುಬೆ ಅವರೇ ಟಾಪ್ ಸ್ಕೋರರ್ ಆಗಿದ್ದರು.
611
ಹಾರ್ದಿಕ್ ಪಾಂಡ್ಯ ಸ್ಥಾನ ಕನ್ಫರ್ಮ್!
ಹಾರ್ದಿಕ್ ಪಾಂಡ್ಯ ಸ್ಥಾನದಲ್ಲೂ ಯಾವುದೇ ಬದಲಾವಣೆ ಇರುವುದಿಲ್ಲ. ವೇಗದ ಬೌಲಿಂಗ್ ಆಲ್‌ರೌಂಡರ್ ಆಗಿರುವ ಹಾರ್ದಿಕ್, ನಾಲ್ಕು ಓವರ್ ಬೌಲಿಂಗ್ ಜೊತೆಗೆ ಬ್ಯಾಟಿಂಗ್‌ನಲ್ಲೂ ಮಿಂಚುತ್ತಿದ್ದಾರೆ.
711
ರಿಂಕು ಸಿಂಗ್‌ಗೆ ಮತ್ತೊಂದು ಚಾನ್ಸ್?
ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ರಿಂಕು ಸಿಂಗ್‌ಗೆ ಹೆಚ್ಚು ಅವಕಾಶಗಳು ಸಿಕ್ಕಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವಿನ ಸನಿಹಕ್ಕೆ ಕೊಂಡೊಯ್ಯುವ ಆತುರದಲ್ಲಿ ರಿಂಕು ರನ್ ಗಳಿಸದೆ ಔಟಾಗಿದ್ದರು. ಅವರು ಎದುರಿಸಿದ್ದು ಕೇವಲ ಎರಡು ಎಸೆತಗಳನ್ನು ಮಾತ್ರ.
811
ವಾಷಿಂಗ್ಟನ್ ಸುಂದರ್ ಬದಲಿಗೆ ಅಕ್ಷರ್ ಪಟೇಲ್ ಎಂಟ್ರಿ?
ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ವಾಷಿಂಗ್ಟನ್ ಸುಂದರ್‌ಗೆ ಕೊಕ್ ನೀಡಿ, ಅಕ್ಷರ್ ಪಟೇಲ್ ತಂಡಕ್ಕೆ ಮರಳುವ ಸಾಧ್ಯತೆಯಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಸುಂದರ್ ಎರಡು ಓವರ್‌ಗಳಲ್ಲಿ 17 ರನ್ ನೀಡಿದ್ದರು. ಬ್ಯಾಟಿಂಗ್‌ನಲ್ಲೂ ಮಿಂಚಲು ವಿಫಲರಾಗಿದ್ದರು.
911
ಅರ್ಶದೀಪ್ ಸಿಂಗ್ ವೇಗದ ಬೌಲಿಂಗ್ ನೇತೃತ್ವ
ತಂಡವು ಈ ಎಡಗೈ ವೇಗಿಯನ್ನು ಉಳಿಸಿಕೊಳ್ಳಲಿದೆ. ಜಸ್ಪ್ರೀತ್ ಬುಮ್ರಾಗೆ ಉತ್ತಮ ಬೆಂಬಲ ನೀಡಲು ಅವರಿಂದ ಸಾಧ್ಯವಾಗುತ್ತಿದೆ. ದಕ್ಷಿಣ ಆಫ್ರಿಕಾ ವಿರುದ್ಧ ನಾಲ್ಕು ಓವರ್‌ಗಳಲ್ಲಿ ಕೇವಲ 28 ರನ್ ನೀಡಿ ಎರಡು ವಿಕೆಟ್ ಪಡೆದಿದ್ದರು.
1011
ವರುಣ್ ಚಕ್ರವರ್ತಿ ಸ್ಥಾನವೂ ಅಭಾದಿತ
ದಕ್ಷಿಣ ಆಫ್ರಿಕಾ ವಿರುದ್ಧ ದುಬಾರಿಯಾಗಿದ್ದರೂ, ಭಾರತ ತಂಡ ವರುಣ್ ಅವರನ್ನು ಕೈಬಿಡುವ ಸಾಧ್ಯತೆ ಕಡಿಮೆ. ವರುಣ್ ನಾಲ್ಕು ಓವರ್‌ಗಳಲ್ಲಿ 47 ರನ್ ನೀಡಿದ್ದರು. ಚೆನ್ನೈನ ಸ್ಪಿನ್ ಸ್ನೇಹಿ ಪಿಚ್‌ನಲ್ಲಿ ವರುಣ್ ಆಡುವ ಸಾಧ್ಯತೆ ದಟ್ಟವಾಗಿದೆ.
1111
ಬುಮ್ರಾ ಮೇಲೆ ಎಲ್ಲರ ಕಣ್ಣು
ದಕ್ಷಿಣ ಆಫ್ರಿಕಾ ವಿರುದ್ಧ ಬುಮ್ರಾ ನಾಲ್ಕು ಓವರ್‌ಗಳಲ್ಲಿ ಕೇವಲ 15 ರನ್ ನೀಡಿ ಮೂರು ವಿಕೆಟ್ ಪಡೆದಿದ್ದರು. ಬೌಲಿಂಗ್ ವಿಭಾಗವನ್ನು ಬುಮ್ರಾ ಮುನ್ನಡೆಸಲಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories