ಫೇಲ್ ಆದ್ರೂ ವಿಶ್ವದಾಖಲೆ ಬರೆದ ಶಫಾಲಿ ವರ್ಮಾ! ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಕ್ರಿಕೆಟರ್

Published : Jun 15, 2026, 01:46 PM IST

ಬರ್ಮಿಂಗ್‌ಹ್ಯಾಮ್: ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡವು ಬದ್ದ ಎದುರಾಳಿ ಪಾಕಿಸ್ತಾನ ಎದುರು ಶುಭಾರಂಭ ಮಾಡಿದೆ. ಇನ್ನು ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರೂ, ಭಾರತದ ಶಫಾಲಿ ವರ್ಮಾ ವಿಶ್ವದಾಖಲೆ ನಿರ್ಮಿಸಿ ಗಮನ ಸೆಳೆದಿದ್ದಾರೆ. 

PREV
16
ಪಾಕಿಸ್ತಾನ ಎದುರು ಭಾರತಕ್ಕೆ 64 ರನ್‌ಗಳ ಜಯಭೇರಿ

ಇಲ್ಲಿನ ಎಜ್‌ಬಾಸ್ಟನ್ ಮೈದಾನದಲ್ಲಿ ಭಾನುವಾರ ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ತಂಡವು 64 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಭಾರತ ವನಿತೆಯರ ಪಡೆ ಭರ್ಜರಿಯಾಗಿಯೇ ಶುಭಾರಂಭ ಮಾಡಿದೆ.

26
ಪಾಕ್ ಎದುರು ಮೊದಲು ಬ್ಯಾಟ್ ಮಾಡಿ ಬೃಹತ್ ಮೊತ್ತ ಕಲೆಹಾಕಿದ ಭಾರತ

ಟಾಸ್ ಗೆದ್ದ ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್, ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಸ್ಮೃತಿ ಮಂಧನಾ ಬಾರಿಸಿದ ಆಕರ್ಷಕ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 170 ರನ್‌ಗಳ ಸವಾಲಿನ ಮೊತ್ತ ಕಲೆಹಾಕಿತು.

36
ಮೊದಲ ಎಸೆತದಲ್ಲೇ ಸಿಕ್ಸರ್, ಅದೇ ಓವರ್‌ನಲ್ಲಿ ಔಟ್

ಇನ್ನು ಭಾರತ ಪರ ಆರಂಭಿಕರಾಗಿ ಕಣಕ್ಕಿಳಿದ ಶಫಾಲಿ ವರ್ಮಾ ಮೊದಲ ಎಸೆತದಲ್ಲೇ ಸಿಕ್ಸರ್ ಸಿಡಿಸಿದರಾದರೂ, ಅದೇ ಓವರ್‌ನಲ್ಲಿ ಮತ್ತೊಮ್ಮೆ ದೊಡ್ಡ ಹೊಡೆತಕ್ಕೆ ಯತ್ನಿಸಿ ವಿಕೆಟ್‌ ಕೀಪರ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಇನ್ನು ಇದೇ ವೇಳೆ ಶಫಾಲಿ ವರ್ಮಾ ಅಪರೂಪದ ವಿಶ್ವದಾಖಲೆ ತಮ್ಮದಾಗಿಸಿಕೊಂಡರು.

46
ಶಫಾಲಿ ವರ್ಮಾ ದಾಖಲೆ

ಹೌದು, ಟಾಸ್ ಗೆದ್ದು ಬ್ಯಾಟಿಂಗ್ ಮಾಡಲಿಳಿದ ಭಾರತ ತಂಡದ ಪರ ಶಫಾಲಿ ವರ್ಮಾ ಸ್ಟ್ರೈಕ್ ತೆಗೆದುಕೊಂಡರು. ಪಾಕಿಸ್ತಾನ ಪರ ಮೊದಲ ಓವರ್ ಬೌಲಿಂಗ್ ಮಾಡಲಿಳಿದ ಸಾದಿಯಾ ಇಕ್ಬಾಲ್ ಎಸೆದ ಮೊದಲ ಓವರ್‌ನ ಮೊದಲ ಎಸೆತದಲ್ಲೇ ಶಫಾಲಿ ಸಿಕ್ಸರ್ ಸಿಡಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ.

56
ಅಪರೂಪದ ವಿಶ್ವದಾಖಲೆ ಬರೆದ ಶಫಾಲಿ ವರ್ಮಾ

ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇತಿಹಾಸದಲ್ಲಿ ಮೊದಲ ಓವರ್‌ನ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿದ ಮೊದಲ ಬ್ಯಾಟರ್ ಎನ್ನುವ ಅಪರೂಪದ ವಿಶ್ವದಾಖಲೆ ಇದೀಗ ಶಫಾಲಿ ವರ್ಮಾ ಪಾಲಾಗಿದೆ. ಇದಾದ ಬಳಿಕ ಮೂರು ಚುಕ್ಕೆ ಎಸೆತಗಳನ್ನು ಎದುರಿಸಿದ ಶಫಾಲಿ, ಮೊದಲ ಓವರ್‌ನ ಐದನೇ ಎಸೆತದಲ್ಲಿ ಕ್ಯಾಚಿತ್ತು ಶಫಾಲಿ ಪೆವಿಲಿಯನ್ ಸೇರಿದರು.

66
ಪಾಕ್ ಬಗ್ಗುಬಡಿದ ಭಾರತ

ಇನ್ನು ಪಂದ್ಯದ ಬಗ್ಗೆ ಹೇಳುವುದಾದರೇ, ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 170 ರನ್ ಕಲೆಹಾಕಿತು. ಇನ್ನು ಸವಾಲಿನ ಗುರಿ ಬೆನ್ನತ್ತಿದ ಪಾಕಿಸ್ತಾನ 17 ಓವರ್‌ಗಳಲ್ಲಿ ಕೇವಲ 106 ರನ್‌ಗಳಿಗೆ ಸರ್ವಪತನ ಕಂಡಿತು. ದೀಪ್ತಿ ಶರ್ಮಾ ಕೇವಲ 10 ರನ್ ನೀಡಿ 5 ವಿಕೆಟ್ ಕಬಳಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories