ಮೊದಲ ಓವರ್‌ನಲ್ಲೇ 4 ವಿಕೆಟ್‌..! ವಿಶ್ವಕಪ್‌ಗೂ ಮುನ್ನ ಭಾರತಕ್ಕೆ ಶಾಹೀನ್ ಅಫ್ರಿದಿ ಸೈಲೆಂಟ್ ವಾರ್ನಿಂಗ್‌..!

Published : Jul 01, 2023, 01:52 PM IST

ಲಂಡನ್‌(ಜು.01): ಪಾಕಿಸ್ತಾನದ ಎಡಗೈ ಮಾರಕ ವೇಗಿ ಶಾಹೀನ್ ಅಫ್ರಿದಿ ಗಾಯದಿಂದ ಸಂಪೂರ್ಣ ಚೇತರಿಸಿಕೊಂಡು ಮೈದಾನಕ್ಕಿಳಿದಿದ್ದು, ಇದೀಗ ಟಿ20 ಬ್ಲಾಸ್ಟ್ ಟೂರ್ನಿಯಲ್ಲಿ ಮಾರಕ ದಾಳಿ ನಡೆಸುವ ಮೂಲಕ ಮಿಂಚಿದ್ದಾರೆ. ಈ ಮೂಲಕ ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಗೂ ಮುನ್ನ ಭಾರತಕ್ಕೆ ಅಫ್ರಿದಿ ಸೈಲೆಂಟ್ ವಾರ್ನಿಂಗ್ ನೀಡಿದ್ದಾರೆ.  

PREV
19
ಮೊದಲ ಓವರ್‌ನಲ್ಲೇ 4 ವಿಕೆಟ್‌..! ವಿಶ್ವಕಪ್‌ಗೂ ಮುನ್ನ ಭಾರತಕ್ಕೆ ಶಾಹೀನ್ ಅಫ್ರಿದಿ ಸೈಲೆಂಟ್ ವಾರ್ನಿಂಗ್‌..!

ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಮೇಲೆ ಕಣ್ಣಿಟ್ಟಿರುವ ಪಾಕಿಸ್ತಾನದ ವೇಗಿ ಶಾಹೀನ್ ಶಾ ಅಫ್ರಿದಿ ಇದೀಗ ಕಮ್‌ಬ್ಯಾಕ್‌ ಪಂದ್ಯದಲ್ಲಿ ಮಾರಕ ದಾಳಿ ನಡೆಸಿ ಗಮನ ಸೆಳೆದಿದ್ದಾರೆ.

29

2023ರ ಟಿ20 ಬ್ಲಾಸ್ಟ್ ಟೂರ್ನಿಯಲ್ಲಿ ನಾಟಿಂಗ್‌ಹ್ಯಾಮ್‌ಶೈರ್ ಪರ ಕಣಕ್ಕಿಳಿದಿದ್ದ ಶಾಹೀನ್ ಅಫ್ರಿದಿ ವಾರ್ವಿಕ್‌ಶೈರ್ ಎದುರಿನ ಪಂದ್ಯದಲ್ಲಿ ಮೊದಲ ಓವರ್‌ನಲ್ಲೇ 4 ವಿಕೆಟ್ ಕಬಳಿಸಿ ಅಬ್ಬರಿಸಿದ್ದಾರೆ.

39

ಜೂನ್ 30ರಂದು ಟ್ರೆಂಟ್‌ ಬ್ರಿಡ್ಜ್‌ನಲ್ಲಿ ನಡೆದ ಪಂದ್ಯದಲ್ಲಿ 23 ವರ್ಷದ ಎಡಗೈ ವೇಗಿ ಅಫ್ರಿದಿ, ಮೊದಲ ಓವರ್‌ನಲ್ಲೇ ಅಲೆಕ್ಸ್ ಡೇವಿಡ್ಸ್(0), ಕ್ರಿಸ್ ಬೆನ್ಜಮಿನ್‌(0), ಡ್ಯಾನ್ ಮೌಸ್ಲಿ(1) ಹಾಗೂ ಎಡ್ ಬೆರ್ನಾರ್ಡ್‌(0) ಅವರನ್ನು ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾದರು.

49

ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಮೊದಲ ಓವರ್‌ನಲ್ಲೇ 4 ವಿಕೆಟ್‌ ಕಬಳಿಸಿದ ವೇಗಿ ಎನ್ನುವ ವಿಶ್ವದಾಖಲೆಗೆ ಪಾಕ್ ಮೂಲದ ಶಾಹೀನ್ ಅಫ್ರಿದಿ ಭಾಜನರಾಗಿದ್ದಾರೆ. 

59

ಶಾಹೀನ್ ಅಫ್ರಿದಿ ಮೊದಲ ಓವರ್‌ನಲ್ಲೇ 4 ವಿಕೆಟ್ ಕಬಳಿಸಿದರೂ ಸಹಾ ನಾಟಿಂಗ್‌ಹ್ಯಾಮ್‌ಶೈರ್ ತಂಡವು 169 ರನ್‌ಗಳನ್ನು ರಕ್ಷಿಸಿಕೊಳ್ಳಲು ವಿಫಲವಾಯಿತು. ಈ ಮೂಲಕ ನಾಟಿಂಗ್‌ಹ್ಯಾಮ್‌ಶೈರ್ ತಂಡವು ಕ್ವಾರ್ಟರ್‌ ಫೈನಲ್‌ಗೇರುವ ಅವಕಾಶವನ್ನು ಕೂದಲೆಳೆ ಅಂತರದಲ್ಲಿ ಕೈಚೆಲ್ಲಿತು.

69

ಫಿಟ್ನೆಸ್‌ ಸಮಸ್ಯೆಯಿಂದ ಕಳೆದ ಕೆಲ ತಿಂಗಳು ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದ ಶಾಹೀನ್ ಅಫ್ರಿದಿ, ಇದೀಗ ಲಂಕಾ ಪ್ರವಾಸಕ್ಕೆ ಪಾಕ್‌ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

79

ಇನ್ನು ಮುಂಬರುವ ಏಷ್ಯಾಕಪ್ ಹಾಗೂ ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಅಬ್ಬರಿಸಲು ಪಾಕ್‌ ಎಡಗೈ ವೇಗಿ ಅಫ್ರಿದಿ ತುದಿಗಾಲಿನಲ್ಲಿ ನಿಂತಿದ್ದಾರೆ.

89

ಅಕ್ಟೋಬರ್ 15ರಂದು ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿದ್ದು, ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.

99

ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು 7 ಬಾರಿ ಮುಖಾಮುಖಿಯಾಗಿದ್ದು, ಏಳು ಪಂದ್ಯಗಳಲ್ಲೂ ಭಾರತ ಗೆಲುವು ಸಾಧಿಸಿದ್ದು, ಬದ್ದ ಎದುರಾಳಿ ಪಾಕಿಸ್ತಾನ ಎದುರು ಎಂಟನೇ ಗೆಲುವು ದಾಖಲಿಸುವ ವಿಶ್ವಾಸದಲ್ಲಿದೆ ರೋಹಿತ್ ಶರ್ಮಾ ಪಡೆ.

Read more Photos on
click me!

Recommended Stories