ಲಂಕಾ ಎದುರಿನ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ?
First Published | Jul 20, 2021, 11:57 AM ISTಕೊಲಂಬೊ: ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡನೇ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾ ಈಗಾಗಲೇ ಮೊದಲ ಪಂದ್ಯವನ್ನು ಅನಾಯಾಸವಾಗಿ ಗೆದ್ದು, ಎರಡನೇ ಪಂದ್ಯವನ್ನೂ ಗೆಲ್ಲುವ ಮೂಲಕ ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದೆ. ಹೀಗಿದ್ದೂ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಒಂದು ವೇಳೆ ಸಂಜು ಸ್ಯಾಮ್ಸನ್ ಸಂಪೂರ್ಣ ಫಿಟ್ ಆಗಿದ್ದೇ ಆದಲ್ಲಿ ಕರ್ನಾಟಕದ ಈ ಆಟಗಾರನಿಗೆ ವಿಶ್ರಾಂತಿ ಸಿಗುವ ಸಾಧ್ಯತೆಯಿದೆ. ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸಂಭಾವ್ಯ ತಂಡ ಹೀಗಿದೆ ನೋಡಿ