ಡುರ್ಹಾಮ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಇದರ ಹೊರತಾಗಿಯೂ ಫಿಫ್ಟಿ ಬಾರಿಸಿದ ನಾಯಕ ಶ್ರೇಯಸ್ ಅಯ್ಯರ್ ಅಪರೂಪದಲ್ಲೇ ಅಪರೂಪದ ದಾಖಲೆ ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಭಾರತ ಟಿ20 ತಂಡದ ನಾಯಕ ಶ್ರೇಯಸ್ ಅಯ್ಯರ್, ಬುಧವಾರ ನಡೆದ ಇಂಗ್ಲೆಂಡ್ ಎದುರಿನ ಮೊದಲ ಟಿ20 ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ಅಪರೂಪದಲ್ಲೇ ಅಪರೂಪದ ದಾಖಲೆ ಬರೆದಿದ್ದಾರೆ. ಇಂಗ್ಲೆಂಡ್ ನೆಲದಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅರ್ಧಶತಕ ಸಿಡಿಸಿದ ಮೊದಲ ಭಾರತದ ಕ್ಯಾಪ್ಟನ್ ಎನ್ನುವ ದಾಖಲೆ ಇದೀಗ ಶ್ರೇಯಸ್ ಅಯ್ಯರ್ ಪಾಲಾಗಿದೆ.
26
ಇಂಗ್ಲೆಂಡ್ ನೆಲದಲ್ಲಿ ಅಪರೂಪದ ದಾಖಲೆ ಬರೆದ ಶ್ರೇಯಸ್ ಅಯ್ಯರ್
ಶ್ರೇಯಸ್ ಅಯ್ಯರ್, 15ನೇ ಓವರ್‌ನಲ್ಲಿ ಲಿಯಾಮ್ ಡಾಸನ್ ಬೌಲಿಂಗ್‌ನಲ್ಲಿ ಒಂಟಿ ರನ್ ಕಲೆಹಾಕುವ ಮೂಲಕ ಅರ್ಧಶತಕ ಪೂರೈಸಿದರು. ಅಂದಹಾಗೆ ಇದು ಶ್ರೇಯಸ್ ಅಯ್ಯರ್ ನಾಯಕನಾಗಿ ಬಾರಿಸಿದ ಮೊದಲನೇ ಹಾಗೂ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 9ನೇ ಅರ್ಧಶತಕ ಎನಿಸಿಕೊಂಡಿತು.
36
ಇಂಗ್ಲೆಂಡ್ ನೆಲದಲ್ಲಿ ಅತಿಹೆಚ್ಚು ರನ್ ಬಾರಿಸಿದ ಭಾರತದ ಮೊದಲ ಕ್ಯಾಪ್ಟನ್
ಇನ್ನು ಶ್ರೇಯಸ್ ಅಯ್ಯರ್, ನಾಯಕನಾಗಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಇಂಗ್ಲೆಂಡ್‌ನಲ್ಲಿ ಅತಿಹೆಚ್ಚು ರನ್ ಬಾರಿಸಿದ ಭಾರತೀಯ ಕ್ಯಾಪ್ಟನ್ ಎನ್ನುವ ದಾಖಲೆಗೂ ಶ್ರೇಯಸ್ ಅಯ್ಯರ್ ಪಾತ್ರರಾಗಿದ್ದಾರೆ. ಶ್ರೇಯಸ್ ಅಯ್ಯರ್ 47 ಎಸೆತಗಳನ್ನು ಎದುರಿಸಿ 68 ರನ್ ಸಿಡಿಸಿದರು. ಈ ಮೂಲಕ ವಿರಾಟ್ ಕೊಹ್ಲಿ ದಾಖಲೆಯನ್ನು ಹಿಂದಿಕ್ಕಿದರು.
ಈ ಹಿಂದೆ 2018ರಲ್ಲಿ ನಾಯಕರಾಗಿದ್ದ ವಿರಾಟ್ ಕೊಹ್ಲಿ ಕಾರ್ಡಿಫ್‌ನಲ್ಲಿ ನಡೆದ ಇಂಗ್ಲೆಂಡ್ ಎದುರಿನ ಟಿ20 ಪಂದ್ಯದಲ್ಲಿ 47 ರನ್ ಬಾರಿಸಿದ್ದೇ ಈವರೆಗೆ ಭಾರತೀಯ ಕ್ಯಾಪ್ಟನ್ ಇಂಗ್ಲೆಂಡ್ ನೆಲದಲ್ಲಿ ಟಿ20 ಪಂದ್ಯವೊಂದರಲ್ಲಿ ಗಳಿಸಿದ ಗರಿಷ್ಠ ಸ್ಕೋರ್ ಎನಿಸಿಕೊಂಡಿತ್ತು. ಆ ದಾಖಲೆಯನ್ನು ಇದೀಗ ಶ್ರೇಯಸ್ ಅಯ್ಯರ್ ಬ್ರೇಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
56
ಸ್ಟೀವ್ ಸ್ಮಿತ್ ಹೆಸರಿನಲ್ಲಿದೆ ಅಪರೂಪದ ದಾಖಲೆ
ಇನ್ನು ಇಂಗ್ಲೆಂಡ್ ಎದುರು ಅವರದ್ದೇ ಮೈದಾನದಲ್ಲಿ ಗರಿಷ್ಠ ರನ್ ಬಾರಿಸಿದ ಕ್ಯಾಪ್ಟನ್ ಎನ್ನುವ ದಾಖಲೆ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಹೆಸರಿನಲ್ಲಿದೆ. 2015ರಲ್ಲಿ ಆಸೀಸ್ ಕ್ಯಾಪ್ಟನ್ ಆಗಿದ್ದ ಸ್ಟೀವ್ ಸ್ಮಿತ್, ಕಾರ್ಡಿಫ್‌ನಲ್ಲೇ ನಡೆದ ಪಂದ್ಯದಲ್ಲಿ 90 ರನ್ ಸಿಡಿಸಿದ್ದರು. ಒಂದು ದಶಕ ಕಳೆದರು ಈ ದಾಖಲೆ ಸ್ಮಿತ್ ಹೆಸರಿನಲ್ಲಿ ಅಚ್ಚಳಿಯದೇ ಉಳಿದಿದೆ.
66
ಮೊದಲ ಟಿ20 ಮ್ಯಾಚ್ ಮಳೆಯಿಂದ ರದ್ದು
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ, ಅಭಿಷೇಕ್ ಶರ್ಮಾ(59) ಹಾಗೂ ಶ್ರೇಯಸ್ ಅಯ್ಯರ್(68) ಆಕರ್ಷಕ ಅರ್ಧಶತಕ ಹಾಗೂ ಶಿವಂ ದುಬೆ ಸ್ಪೋಟಕ 42 ರನ್‌ಗಳ ನೆರವಿನಿಂದ ಭಾರತ ತಂಡವು ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 189 ರನ್ ಕಲೆಹಾಕಿತು. ಆದರೆ ಆ ಬಳಿಕ ನಿರಂತರವಾಗಿ ಮಳೆ ಸುರಿದಿದ್ದರಿಂದ ಇಂಗ್ಲೆಂಡ್ ಬ್ಯಾಟಿಂಗ್ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಮ್ಯಾಚ್ ರೆಫ್ರಿ ಪಂದ್ಯವನ್ನು ಮಳೆಯಿಂದಾಗಿ ರದ್ದಾಗಿದೆ ಎಂದು ಅಧಿಕೃತವಾಗಿ ಘೋಷಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.