ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಲಾರ್ಡ್ಸ್ ಟೆಸ್ಟ್ ಪಂದ್ಯ ಎರಡನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ನಾಯಕ ಶುಭ್‌ಮನ್ ಗಿಲ್, ಟೆಸ್ಟ್ ಕ್ರಿಕೆಟ್‌ನಲ್ಲಿ 23 ವರ್ಷಗಳ ಹಳೆಯ ರೆಕಾರ್ಡ್ ಬ್ರೇಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರ. ಏನದು ದಾಖಲೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಲಾರ್ಡ್ಸ್ ಟೆಸ್ಟ್ ಪಂದ್ಯವು ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದ್ದು, ಇದೀಗ ಕೊನೆಯ ದಿನದಾಟದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
27
ಇಂಗ್ಲೆಂಡ್ ನೀಡಿದ್ದ 193 ರನ್‌ಗಳ ಗುರಿ ಬೆನ್ನತ್ತಿದ ಟೀಂ ಇಂಡಿಯಾ, ನಾಲ್ಕನೇ ದಿನದಾಟದಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 58 ರನ್ ಗಳಿಸಿದೆ. ಜೈಸ್ವಾಲ್, ಗಿಲ್ ಹಾಗೂ ಕರುಣ್ ನಾಯರ್ ಅಲ್ಪ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು.
37
ಲಾರ್ಡ್ಸ್ ಟೆಸ್ಟ್ ಪಂದ್ಯವನ್ನು ಗೆಲ್ಲಲು ಭಾರತ ತಂಡಕ್ಕೆ ಕೊನೆಯ ದಿನದಾಟದಲ್ಲಿ ಕೇವಲ 135 ರನ್‌ಗಳ ಅಗತ್ಯವಿದೆ. ಇನ್ನೊಂದೆಡೆ ಆತಿಥೇಯ ಇಂಗ್ಲೆಂಡ್‌ಗೆ ಮೂರನೇ ಟೆಸ್ಟ್ ಗೆಲ್ಲಲು 6 ವಿಕೆಟ್‌ಗಳ ಅಗತ್ಯವಿದೆ.
ಇನ್ನು ಇದೆಲ್ಲದರ ನಡುವೆ 23 ವರ್ಷಗಳಿಂದ ಕ್ರಿಕೆಟ್ ದಂತಕಥೆ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿದ್ದ ದಾಖಲೆ ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಟೀಂ ಇಂಡಿಯಾ ಟೆಸ್ಟ್ ನಾಯಕ ಶುಭ್‌ಮನ್ ಗಿಲ್ ಯಶಸ್ವಿಯಾಗಿದ್ದಾರೆ.
57
ಹೌದು, ಇದೀಗ ಶುಭ್‌ಮನ್ ಗಿಲ್, ಇಂಗ್ಲೆಂಡ್ ನೆಲದಲ್ಲಿ ಟೆಸ್ಟ್ ಸರಣಿಯೊಂದರಲ್ಲಿ ಗರಿಷ್ಠ ರನ್ ಬಾರಿಸಿದ ಭಾರತೀಯ ಬ್ಯಾಟರ್ ಎನ್ನುವ ಹಿರಿಮೆಗೆ ಶುಭ್‌ಮನ್ ಗಿಲ್ ಪಾತ್ರರಾಗಿದ್ದಾರೆ.
67
ಶುಭ್‌ಮನ್ ಗಿಲ್ ಇದೀಗ 2025ರ ಟೆಸ್ಟ್ ಸರಣಿಯ ಮೂರು ಪಂದ್ಯಗಳ ಆರು ಇನ್ನಿಂಗ್ಸ್‌ಗಳಿಂದ 607 ರನ್ ಸಿಡಿಸಿದ್ದಾರೆ. ಈ ಮೂಲಕ 2002ರಲ್ಲಿ ರಾಹುಲ್ ದ್ರಾವಿಡ್, ಇಂಗ್ಲೆಂಡ್‌ನಲ್ಲಿ 602 ರನ್ ಗಳಿಸಿದ್ದ ದಾಖಲೆ ಬ್ರೇಕ್ ಮಾಡುವಲ್ಲಿ ಶುಭ್‌ಮನ್ ಗಿಲ್ ಯಶಸ್ವಿಯಾಗಿದ್ದಾರೆ.
77
ರಾಹುಲ್ ದ್ರಾವಿಡ್ 2002ರಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದಾಗ 4 ಪಂದ್ಯಗಳ ಆರು ಇನ್ನಿಂಗ್ಸ್‌ಗಳಿಂದ 602 ರನ್ ಸಿಡಿಸಿದ್ದರು. ಈ ದಾಖಲೆ ಕಳೆದ ಎರಡು ದಶಕಗಳಿಂದಲೂ ರಾಹುಲ್ ದ್ರಾವಿಡ್ ಹೆಸರಿನಲ್ಲಿ ಅಚ್ಚಳಿಯದೇ ಉಳಿದಿತ್ತು.