ICC ODI Rankings ಪ್ರಕಟ ಶುಭ್‌ಮನ್ ಗಿಲ್ ನಂ.1; ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಎಷ್ಟನೇ ಸ್ಥಾನ?

Published : Jul 29, 2026, 05:16 PM IST

ದುಬೈ: ಐಸಿಸಿ ನೂತನ ಏಕದಿನ ರ್‍ಯಾಂಕಿಂಗ್‌ ಪ್ರಕಟಗೊಂಡಿದೆ. ಟೀಂ ಇಂಡಿಯಾ ನಾಯಕ ಶುಭ್‌ಮನ್ ಗಿಲ್ ಮತ್ತೆ ನಂ.1 ಸ್ಥಾನಕ್ಕೇರಿದ್ದಾರೆ. ಇನ್ನು ದಿಗ್ಗಜ ಕ್ರಿಕೆಟಿಗರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಎಷ್ಟನೇ ಸ್ಥಾನದಲ್ಲಿದ್ದಾರೆ ಎನ್ನುವ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

PREV
16
ಶುಭ್‌ಮನ್ ಗಿಲ್ ಮತ್ತೆ ನಂ.1

ಟೀಂ ಇಂಡಿಯಾ ನಾಯಕ ಶುಭ್‌ಮನ್ ಗಿಲ್ ಇದೀಗ ಮತ್ತೆ ಐಸಿಸಿ ಏಕದಿನ ಬ್ಯಾಟರ್‌ಗಳ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದ್ದಾರೆ. ಇಂಗ್ಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿದ ಬೆನ್ನಲ್ಲೇ ಗಿಲ್‌ ಮತ್ತೆ ನಂ.1 ಸ್ಥಾನಕ್ಕೆರಿದ್ದಾರೆ.

26
ಡೇರಲ್ ಮಿಚೆಲ್‌ ಹಿಂದಿಕ್ಕಿದ ಗಿಲ್‌

ಹೌದು, ಶುಭ್‌ಮನ್ ಗಿಲ್ ಇಂಗ್ಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಕ್ರಮವಾಗಿ 80, 31 ಹಾಗೂ 77 ರನ್ ಚಚ್ಚಿದ್ದರು. ಈ ಮೂಲಕ ನ್ಯೂಜಿಲೆಂಡ್‌ನ ಡೇರಲ್ ಮಿಚೆಲ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಗಿಲ್ 801 ರೇಟಿಂಗ್ ಅಂಕಗಳನ್ನು ಹೊಂದಿದ್ದರೇ, ಡೇರಲ್ ಮಿಚೆಲ್ 794 ಅಂಕಗಳನ್ನು ಹೊಂದಿದ್ದಾರೆ.

36
ರೋ-ಕೊ ಜೋಡಿಗೆ ಎಷ್ಟನೇ ಸ್ಥಾನ?

ಇನ್ನು ಇವೆಲ್ಲದರ ನಡುವೆ ಟೆಸ್ಟ್ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿ ಕೇವಲ ಏಕದಿನ ಮಾದರಿಯಲ್ಲಿ ಮಾತ್ರ ಭಾರತ ತಂಡವನ್ನು ಪ್ರತಿನಿಧಿಸುತ್ತಾ ಬಂದಿರುವ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಯಾವ ಸ್ಥಾನದಲ್ಲಿದ್ದಾರೆ ಎನ್ನುವ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಇದೆ. ರೋ-ಕೊ ಅಭಿಮಾನಿಗಳಿಗೂ ಇದೀಗ ಗುಡ್ ನ್ಯೂಸ್ ಸಿಕ್ಕಿದೆ.

46
ಮೂರನೇ ಸ್ಥಾನ ಉಳಿಸಿಕೊಂಡ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ, ಇಂಗ್ಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಎರಡು ಅರ್ಧಶತಕ ಸಿಡಿಸಿ ಮಿಂಚಿದ್ದರು. ಸದ್ಯ 767 ರೇಟಿಂಗ್ ಅಂಕಗಳನ್ನು ಹೊಂದಿರುವ ವಿರಾಟ್ ಕೊಹ್ಲಿ, ಸದ್ಯ ಏಕದಿನ ಬ್ಯಾಟರ್‌ಗಳ ರ್‍ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನದಲ್ಲಿ ಭದ್ರವಾಗಿದ್ದಾರೆ.

56
ಏಕದಿನ ರ್‍ಯಾಂಕಿಂಗ್‌ನಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ ಹಿಟ್‌ಮ್ಯಾನ್

ಇನ್ನೊಂದೆಡೆ, ಇಂಗ್ಲೆಂಡ್ ಎದುರಿನ ಮೊದಲೆರಡು ಏಕದಿನ ಪಂದ್ಯಗಳಲ್ಲಿ ಮಂಕಾಗಿದ್ದ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ, ಲಾರ್ಡ್ಸ್‌ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸಿ ಮಿಂಚಿದ್ದರು. ಸದ್ಯ ರೋಹಿತ್ ಶರ್ಮಾ 758 ರೇಟಿಂಗ್ ಅಂಕ ಹೊಂದಿದ್ದು, ಏಕದಿನ ಬ್ಯಾಟರ್‌ಗಳ ರ್‍ಯಾಂಕಿಂಗ್‌ನಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

66
2027ರ ಏಕದಿನ ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ರೋ-ಕೊ ಜೋಡಿ

ಒಟ್ಟಿನಲ್ಲಿ 2027ರ ಏಕದಿನ ವಿಶ್ವಕಪ್ ಟೂರ್ನಿಯ ಮೇಲೆ ಕಣ್ಣಿಟ್ಟಿರುವ ರೋ-ಕೊ ಜೋಡಿ ಏಕದಿನ ಬ್ಯಾಟರ್‌ಗಳ ರ್‍ಯಾಂಕಿಂಗ್‌ನಲ್ಲಿ ಟಾಪ್-5 ಪಟ್ಟಿಯೊಳಗೆ ಸ್ಥಾನ ಪಡೆದಿರುವುದು, ಏಕದಿನ ವಿಶ್ವಕಪ್ ಕನಸಿಗೆ ಮತ್ತಷ್ಟು ಬಲ ತಂದುಕೊಟ್ಟಿದೆ. ಮುಂಬರುವ ದಿನಗಳಲ್ಲಿ ರೋ-ಕೊ ಜೋಡಿ ಯಾವ ರೀತಿ ಪ್ರದರ್ಶನ ಮುಂದುವರೆಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories