ಐಸಿಸಿ ತಿಂಗಳ ಕ್ರಿಕೆಟಿಗ ಪ್ರಶಸ್ತಿ ಗೆದ್ದ ಶುಭ್‌ಮನ್ ಗಿಲ್‌..! ಸಚಿನ್ ಪುತ್ರಿಯ ಪೋಸ್ಟ್‌ ಮತ್ತೆ ವೈರಲ್

First Published | Oct 13, 2023, 4:31 PM IST

ದುಬೈ: ಟೀಂ ಇಂಡಿಯಾ ಪ್ರತಿಭಾನ್ವಿತ ಆರಂಭಿಕ ಬ್ಯಾಟರ್ ಶುಭ್‌ಮನ್ ಗಿಲ್ ಐಸಿಸಿ ತಿಂಗಳ ಕ್ರಿಕೆಟಿಗ ಪ್ರಶಸ್ತಿ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟೀಂ ಇಂಡಿಯಾ ಮತ್ತೋರ್ವ ವೇಗಿ ಮೊಹಮ್ಮದ್ ಸಿರಾಜ್ ಅವರನ್ನು ಹಿಂದಿಕ್ಕಿ ಈ ವರ್ಷದಲ್ಲೇ ಎರಡನೇ ಬಾರಿಗೆ ಪ್ರಶಸ್ತಿ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರ ಬೆನ್ನಲ್ಲೇ ಕ್ರಿಕೆಟ್ ದಂತಕಥೆ ಸಚಿನ್ ತೆಂಡುಲ್ಕರ್ ಪುತ್ರಿ ಕುಣಿದು ಕುಪ್ಪಳಿಸಿದ್ದು,ಸೋಷಿಯಲ್ ಮೀಡಿಯಾದಲ್ಲಿ ಒಂದು ಪೋಸ್ಟ್ ಶೇರ್ ಮಾಡಿದ್ದಾರೆ. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
 

ಟೀಂ ಇಂಡಿಯಾ ಆರಂಭಿಕ ಬ್ಯಾಟರ್ ಶುಭ್‌ಮನ್ ಗಿಲ್‌, ಸಹ ಆಟಗಾರ ಮೊಹಮ್ಮದ್ ಸಿರಾಜ್, ಹಾಗೂ ಇಂಗ್ಲೆಂಡ್ ಓಪನ್ನರ್ ಡೇವಿಡ್ ಮಲಾನ್ ಅವರನ್ನು ಹಿಂದಿಕ್ಕಿ ಐಸಿಸಿ ತಿಂಗಳ ಕ್ರಿಕೆಟಿಗ ಪ್ರಶಸ್ತಿ ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಇದು 2023ರಲ್ಲೇ ಶುಭ್‌ಮನ್ ಗಿಲ್ ಪಾಲಾದ ಎರಡನೇ ಐಸಿಸಿ ತಿಂಗಳ ಕ್ರಿಕೆಟಿಗ ಪ್ರಶಸ್ತಿಯಾಗಿದೆ. ಇತ್ತೀಚೆಗಷ್ಟೇ ಮುಕ್ತಾಯವಾದ ಏಷ್ಯಾಕಪ್ ಹಾಗೂ ಆಸ್ಟ್ರೇಲಿಯಾ ಎದುರಿನ ಸರಣಿಯಲ್ಲಿ ಶುಭ್‌ಮನ್ ಗಿಲ್ ಅದ್ಭುತ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದರು.
 

Tap to resize

ಇದೀಗ ಶುಭ್‌ಮನ್ ಗಿಲ್, ಸೆಪ್ಟೆಂಬರ್ ತಿಂಗಳ ಐಸಿಸಿ ಕ್ರಿಕೆಟಿಗ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಇದೀಗ ಶುಭ್‌ಮನ್ ಗಿಲ್, ಎರಡು ಬಾರಿ ಐಸಿಸಿ ತಿಂಗಳ ಪ್ರಶಸ್ತಿ ಜಯಿಸಿದ ಭಾರತದ ಮೊದಲ ಕ್ರಿಕೆಟಿಗ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ.

ಈ ಮೊದಲು ಶುಭ್‌ಮನ್ ಗಿಲ್ 2023ರ ಜನವರಿಯಲ್ಲಿ ಐಸಿಸಿ ತಿಂಗಳ ಪ್ರಶಸ್ತಿ ಜಯಿಸಿದ್ದರು. ಆ ಸಂದರ್ಭದಲ್ಲಿ ಶುಭ್‌ಮನ್ ಗಿಲ್ ಏಕದಿನ ಕ್ರಿಕೆಟ್‌ನಲ್ಲಿ ಚೊಚ್ಚಲ ದ್ವಿಶತಕ ಸಿಡಿಸಿ ಅಬ್ಬರಿಸಿದ್ದರು.
 

ಸೆಪ್ಟೆಂಬರ್ ತಿಂಗಳಿನಲ್ಲಿ ಶುಭ್‌ಮನ್ ಗಿಲ್‌ 80ರ ಬ್ಯಾಟಿಂಗ್ ಸರಾಸರಿಯಲ್ಲಿ 480 ರನ್ ಸಿಡಿಸಿ ಮಿಂಚಿದ್ದರು. ಏಷ್ಯಾಕಪ್ ಟೂರ್ನಿಯಲ್ಲಿ ಹಾಗೂ ಆಸ್ಟ್ರೇಲಿಯಾ ಎದುರಿನ ತವರಿನ ಸರಣಿಯಲ್ಲಿ ಗಿಲ್ ರನ್ ಮಳೆಯನ್ನೇ ಹರಿಸಿದ್ದರು.
 

2023ರಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಶುಭ್‌ಮನ್ ಗಿಲ್ 5 ಶತಕ ಸಹಿತ 1230 ರನ್ ಬಾರಿಸುವ ಮೂಲಕ ಗರಿಷ್ಠ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಸದ್ಯ ಡೆಂಗ್ಯೂ ಜ್ವರದಿಂದ ಚೇತರಿಸಿಕೊಳ್ಳುತ್ತಿರುವ ಗಿಲ್, ಏಕದಿನ ವಿಶ್ವಕಪ್ ಟೂರ್ನಿಯ ಮೊದಲೆರಡು ಪಂದ್ಯಗಳಿದ ಆಡವ ಹನ್ನೊಂದರ ಬಳಗದಿಂದ ಹೊರಬಿದ್ದಿದ್ದಾರೆ.
 

ಇನ್ನು ಶುಭ್‌ಮನ್ ಗಿಲ್ ಅವರಿಗೆ ಈ ಪ್ರಶಸ್ತಿ ಸಿಗುತ್ತಿದ್ದಂತೆಯೇ ಟ್ವೀಟ್ ಮಾಡಿದ ಸಾರಾ ತೆಂಡುಲ್ಕರ್, "ಐಸಿಸಿ ತಿಂಗಳ ಪ್ರಶಸ್ತಿ ಜಯಿಸಿದ್ದಕ್ಕೆ ಅಭಿನಂದನೆಗಳು. ವಿಶ್ವ ಕ್ರಿಕೆಟ್‌ನ ರಾಜ ಶುಭ್‌ಮನ್ ಗಿಲ್ ಎಂದು ಅವರ ಫೋಟೋವನ್ನು ಶೇರ್ ಮಾಡಿದ್ದಾರೆ. ಇದರ ಜತೆಗೆ ಭಾರತದ ಧ್ವಜ ಹಾಗೂ ನೀಲಿ ಬಣ್ಣದ ಹಾರ್ಟ್ ಎಮೋಜಿಯನ್ನು ಪೋಸ್ಟ್ ಮಾಡಿ ಗಮನ ಸೆಳೆದಿದ್ದಾರೆ.

Latest Videos

click me!