ಐಪಿಎಲ್ ಮೆಗಾ ಹರಾಜು: ಅನ್‌ಸೋಲ್ಡ್ ಭೀತಿಯಲ್ಲಿದ್ದಾರೆ ಈ 5 ವಿದೇಶಿ ಸ್ಟಾರ್ ಪ್ಲೇಯರ್ಸ್!

First Published | Nov 13, 2024, 2:44 PM IST

ಬೆಂಗಳೂರು: ಬಹುನಿರೀಕ್ಷಿತ 2025ರ ಐಪಿಎಲ್ ಮೆಗಾ ಹರಾಜಿಗೆ ಕ್ಷಣಗಣನೆ ಶುರುವಾಗಿದೆ. ಹೀಗಿರುವಾಗಲೇ ಸಾವಿರಾರು ಆಟಗಾರರು ಹರಾಜಿಗೆ ಹೆಸರು ನೋಂದಾಯಿಸಿದ್ದು, ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಆದರೆ ಈ 5 ಸ್ಟಾರ್ ವಿದೇಶಿ ಆಟಗಾರರು ಹರಾಜಾಗುವುದೇ ಅನುಮಾನ ಎನಿಸಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
 

ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಐಪಿಎಲ್ ಮೆಗಾ ಹರಾಜು ಇದೇ ನವೆಂಬರ್ 24 ಹಾಗೂ 25ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯಲಿದೆ.

ಈ ಐಪಿಎಲ್ ಮೆಗಾ ಹರಾಜಿಗೆ 1574 ಕ್ರಿಕೆಟಿಗರು ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ. ಈ ಪೈಕಿ 409 ವಿದೇಶಿ ಆಟಗಾರರು ಮೆಗಾ ಹರಾಜಿನಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಆದರೆ ಈ 5 ವಿದೇಶಿ ಸ್ಟಾರ್ ಆಟಗಾರರ ಅನ್‌ಸೋಲ್ಡ್ ಆಗುವ ಭೀತಿಗೆ ಸಿಲುಕಿದ್ದಾರೆ. ಯಾರವರು ನೋಡೋಣ ಬನ್ನಿ.

Latest Videos


1. ಸ್ಟೀವ್ ಸ್ಮಿತ್:

ಆಸ್ಟ್ರೇಲಿಯಾದ ಅನುಭವಿ ಸ್ಟಾರ್ ಬ್ಯಾಟರ್ ಆಗಿರುವ ಸ್ಟೀವ್ ಸ್ಮಿತ್, ಒಂದು ಕಾಲದಲ್ಲಿ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ತೋರುವ ಮೂಲಕ ಏಕಾಂಗಿಯಾಗಿ ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದರು. ಆದರೆ ಇದೀಗ ಟಿ20 ಚಾರ್ಮ್ ಕಳೆದುಕೊಂಡಿರುವ ಸ್ಮಿತ್ ಮೂಲ ಬೆಲೆ 2 ಕೋಟಿ ರುಪಾಯಿ ನಿಗದಿಯಾಗಿದ್ದು, ಈ ಬಾರಿಯ ಹರಾಜಿನಲ್ಲಿ ಅನ್‌ಸೋಲ್ಡ್ ಆಗುವ ಭೀತಿಯಲ್ಲಿದ್ದಾರೆ.
 

2. ಕೇನ್ ವಿಲಿಯಮ್ಸನ್:

ನ್ಯೂಜಿಲೆಂಡ್ ಕ್ರಿಕೆಟ್ ತಂಡದ ದಿಗ್ಗಜ ಬ್ಯಾಟರ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಾಜಿ ನಾಯಕರಾಗಿದ್ದ ಕೇನ್ ವಿಲಿಯಮ್ಸನ್ ಅವರು ಕಳೆದ ಆವೃತ್ತಿಯಲ್ಲಿ ಗುಜರಾತ್ ತಂಡವನ್ನು ಪ್ರತಿನಿಧಿಸಿದ್ದರು. ಆದರೆ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಕೇನ್ ಅವರನ್ನು ಐಪಿಎಲ್ ಫ್ರಾಂಚೈಸಿಗಳು ಖರೀದಿಸೋದು ಅನುಮಾನ ಎನಿಸಿದೆ. 

3. ಕೇಶವ್ ಮಹರಾಜ್:

ದಕ್ಷಿಣ ಆಫ್ರಿಕಾ ತಂಡದ ಬೌಲಿಂಗ್ ಆಲ್ರೌಂಡರ್ ಆಗಿರುವ ಕೇಶವ್ ಮಹರಾಜ್, ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಇಂಜುರಿ ರಿಪ್ಲೇಸ್‌ಮೆಂಟ್ ರೂಪದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಕೂಡಿಕೊಂಡಿದ್ದರು. ಐಪಿಎಲ್‌ನಲ್ಲಿ ಬೌಲಿಂಗ್‌ ಮೊನಚು ಕಳೆದುಕೊಂಡಿರುವ ಮಹರಾಜ್, ಈ ಬಾರಿಯ ಹರಾಜಿನಲ್ಲಿ ಅನ್‌ಸೋಲ್ಡ್ ಆದರೆ ಅಚ್ಚರಿಯೇನಿಲ್ಲ.

4. ಜೇಮ್ಸ್ ಆಂಡರ್‌ಸನ್:

ಇತ್ತೀಚೆಗಷ್ಟೇ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವ 42 ವರ್ಷದ ಅನುಭವಿ ವೇಗಿ ಜೇಮ್ಸ್ ಆಂಡರ್‌ಸನ್ ಅಚ್ಚರಿ ಎನ್ನುವಂತೆ ಐಪಿಎಲ್ ಆಟಗಾರರ ಹರಾಜಿನಲ್ಲಿ ಹೆಸರು ನೋಂದಾಯಿಸಿದ್ದಾರೆ. ಆದರೆ ಆಂಡರ್‌ಸನ್ ಅನ್‌ಸೋಲ್ಡ್ ಆಗುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತಿದೆ.

5. ಜೋ ರೂಟ್

2023ರಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಪ್ರತಿನಿಧಿಸಿದ್ದ ಇಂಗ್ಲೆಂಡ್ ಕ್ರಿಕೆಟಿಗ, 2024ರ ಐಪಿಎಲ್‌ನಿಂದ ಹಿಂದೆ ಸರಿದಿದ್ದರು. ಟೆಸ್ಟ್‌ ಕ್ರಿಕೆಟ್‌ನಲ್ಲಿ ದೊಡ್ಡ ಹೆಸರು ಮಾಡಿರುವ ರೂಟ್, ಟಿ20 ಟೂರ್ನಿಗೆ ಫಿಟ್ ಆಗುವ ಸಾಧ್ಯತೆ ಕಡಿಮೆ. ಹೀಗಾಗಿ ರೂಟ್ ಕೂಡಾ ಅನ್‌ಸೋಲ್ಡ್ ಆದರೆ ಅಚ್ಚರಿಯೇನಿಲ್ಲ.

click me!