ಇದೇ ತಂಡ ಈ ಸಲ ಐಪಿಎಲ್ ಕಪ್ ಗೆಲ್ಲುತ್ತೆ: ಭವಿಷ್ಯ ನುಡಿದ ಸುನಿಲ್ ಗವಾಸ್ಕರ್!

Published : May 31, 2025, 02:52 PM IST

ಬೆಂಗಳೂರು: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇನ್ನು ಕೇವಲ ಎರಡು ಪಂದ್ಯಗಳು ಬಾಕಿ ಉಳಿದಿವೆ. ಹೀಗಿರುವಾಗಲೇ ಭಾರತದ ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್, ಈ ಬಾರಿ ಐಪಿಎಲ್ ಟ್ರೋಫಿ ಗೆಲ್ಲುವ ನೆಚ್ಚಿನ ತಂಡದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಏನದು ನೀವೇ ನೋಡಿ.

PREV
17

2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ತಂಡವಾಗಿ ಪ್ಲೇ ಆಫ್ ಪ್ರವೇಶಿಸಿದ್ದು, ಚೊಚ್ಚಲ ಐಪಿಎಲ್‌ ಟ್ರೋಫಿಗೆ ಮುತ್ತಿಕ್ಕುವ ಕನಸು ಕಾಣುತ್ತಿದೆ.

27

ಇನ್ನೊಂದೆಡೆ ಎರಡನೇ ಸ್ಥಾನಿಯಾಗಿ ಫೈನಲ್‌ ಪ್ರವೇಶಿಸಲು ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ದೊಡ್ಡ ಪೈಪೋಟಿ ಏರ್ಪಡುವ ಸಾಧ್ಯತೆಯಿದೆ. ಕ್ವಾಲಿಫೈಯರ್ 1 ಪಂದ್ಯದಲ್ಲಿ ಆರ್‌ಸಿಬಿ ಎದುರು ಪಂಜಾಬ್ ಸೋಲು ಅನುಭವಿಸಿದೆ. ಇನ್ನೊಂದೆಡೆ ಗುಜರಾತ್ ಟೈಟಾನ್ಸ್ ಎದುರು ಮುಂಬೈ ಇಂಡಿಯನ್ಸ್ 20 ರನ್ ಅಂತರದ ಗೆಲುವು ಸಾಧಿಸಿ ಫೈನಲ್ ಕನಸು ಜೀವಂತವಾಗಿಸಿಕೊಂಡಿದೆ.

37

ಅದರಲ್ಲೂ ಆರ್‌ಸಿಬಿ-ಪಂಜಾಬ್ ಕಿಂಗ್ಸ್ ನಡುವಿನ ಕ್ವಾಲಿಫೈಯರ್ 1 ಪಂದ್ಯವು ಎರಡು ಬಲಿಷ್ಠ ತಂಡಗಳ ನಡುವಿನ ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಆರ್‌ಸಿಬಿ ಸಂಘಟಿತ ಬೌಲಿಂಗ್ ಎದುರು ತತ್ತರಿಸಿದ ಪಂಜಾಬ್ ಕೇವಲ 101 ರನ್‌ಗಳಿಗೆ ಸರ್ವಪತನ ಕಂಡಿತು. ಗುರಿ ಬೆನ್ನತ್ತಿದ ಆರ್‌ಸಿಬಿ 10 ಓವರ್ ಬಾಕಿ ಇರುವಂತೆಯೇ 8 ವಿಕೆಟ್‌ ಜಯ ಸಾಧಿಸಿತು.

47

ಇನ್ನು ಇದರ ಬೆನ್ನಲ್ಲೇ 18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಚಾಂಪಿಯನ್ ಆಗೋರು ಯಾರು ಎನ್ನುವ ಕುತೂಹಲ ಜೋರಾಗಿದೆ. ಇದೀಗ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್, ಆರ್‌ಸಿಬಿ ತಂಡದ ಪ್ರದರ್ಶನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

57

ಆರ್‌ಸಿಬಿ ತಂಡವು ಈ ಬಾರಿ ಕೇವಲ ಒಂದಿಬ್ಬರು ಬ್ಯಾಟಿಂಗ್ ಹಾಗೂ ಒಬ್ಬ ಬೌಲರ್ ಮೇಲೆ ಅವಲಂಬಿತವಾಗಿಲ್ಲ. ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿಯಲ್ಲಿ ತಂಡದ ಗೆಲುವಿಗಾಗಿ ಕೊಡುಗೆ ನೀಡುತ್ತಾ ಬಂದಿದ್ದಾರೆ ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ.

67

ಇದೇ ಕಾರಣಕ್ಕಾಗಿಯೇ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಫೈನಲ್ ಪ್ರವೇಶಿಸಲು ಸಾಧ್ಯವಾಗಿದೆ. ಬಹುತೇಕ ಜೂನ್ 03ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಾಂಪಿಯನ್ ಆಗಿ ಹೊರಹೊಮ್ಮಬಹುದು ಎಂದು ಸನ್ನಿ ಭವಿಷ್ಯ ನುಡಿದಿದ್ದಾರೆ.

77

ಆರ್‌ಸಿಬಿ ತಂಡವು ಇದುವರೆಗೂ ಮೂರು ಬಾರಿ ಐಪಿಎಲ್ ಫೈನಲ್ ಪ್ರವೇಶಿಸಿದೆಯಾದರೂ, ಪ್ರಶಸ್ತಿ ಸುತ್ತಿನಲ್ಲಿ ಮುಗ್ಗರಿಸುವ ಮೂಲಕ ರನ್ನರ್ ಅಪ್ ಸ್ಥಾನ ಪಡೆದುಕೊಂಡಿತ್ತು. ಆದರೆ ಇದೀಗ ನಾಲ್ಕನೇ ಬಾರಿ ಫೈನಲ್ ಪ್ರವೇಶಿಸಿರುವ ಆರ್‌ಸಿಬಿ ಚೊಚ್ಚಲ ಕಪ್ ತಮ್ಮದಾಗಿಸಿಕೊಳ್ಳುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

Read more Photos on
click me!

Recommended Stories