ದಕ್ಷಿಣ ಭಾರತದ ಈ ಭಾಷೆಯ ಸಿನಿಮಾದಲ್ಲಿ ನಟಿಸಲು ರೆಡಿಯಾದ ಸುರೇಶ್ ರೈನಾ!

Published : Jul 08, 2025, 03:08 PM IST

ಬೆಂಗಳೂರು: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಸ್ಟೈಲೀಷ್ ಆಲ್ರೌಂಡರ್ ಸುರೇಶ್ ರೈನಾ, ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ ಬಳಿಕ ಇದೀಗ ಹೊಸ ಇನ್ನಿಂಗ್ಸ್ ಆರಂಭಿಸಲು ಮುಂದಾಗಿದ್ದಾರೆ. ರೈನಾ ಇದೀಗ ಸಿನಿಮಾದಲ್ಲಿ ತಮ್ಮ ಅದೃಷ್ಟ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. 

PREV
17

ಕ್ರಿಕೆಟ್ ಮೈದಾನದಲ್ಲಿ ಬೌಂಡರಿ ಹಾಗೂ ಸಿಕ್ಸರ್‌ಗಳ ಮೂಲಕವೇ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸಿದ್ದ ವಿಶ್ವಕಪ್ ಹೀರೋ ಸುರೇಶ್ ರೈನಾ, ಇದೀಗ ಸಿನಿಮಾ ರಂಗದಲ್ಲಿ ಮಿಂಚಲು ರೆಡಿಯಾಗಿದ್ದಾರೆ.

27

ಇದೀಗ ಸುರೇಶ್ ರೈನಾ, ದಕ್ಷಿಣ ಭಾರತದ ಟಾಲಿವುಡ್‌(ತಮಿಳು ಚಿತ್ರರಂಗ) ಮೂಲಕ ಬೆಳ್ಳಿ ತೆರೆಗೆ ಪಾದಾರ್ಪಣೆ ಮಾಡಲು ಸುರೇಶ್ ರೈನಾ ರೆಡಿಯಾಗಿದ್ದಾರೆ.

37

ಡ್ರೀಮ್ ನೈಟ್ ಸ್ಟೋರೀಸ್ ಬ್ಯಾನರ್‌ನ ಪ್ರೊಡೆಕ್ಷನ್ ಸಂಸ್ಥೆಯಿಂದ ನಿರ್ಮಾಣವಾಗುವ ಸಿನಿಮಾದಲ್ಲಿ ಸುರೇಶ್ ರೈನಾ ನಟಿಸಲಿದ್ದಾರೆ. ಈ ವಿಚಾರವನ್ನು ಸ್ವತಃ ಪ್ರೊಡಕ್ಷನ್ ಹೌಸ್ ತನ್ನ ಅಧಿಕೃತ 'ಎಕ್ಸ್‌' ಖಾತೆಯಲ್ಲಿ ಘೋಷಿಸಿದೆ.

47

ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಂಬಿಗಸ್ಥ ಕ್ರಿಕೆಟಿಗನಾಗಿ ಗುರುತಿಸಿಕೊಂಡಿದ್ದ ಸುರೇಶ್ ರೈನಾ ಅವರನ್ನು ತಮಿಳುನಾಡಿದ ಅಭಿಮಾನಿಗಳನ್ನು ಚಿನ್ನ ತಾಲಾ ಎಂದೇ ಪ್ರೀತಿಯಿಂದ ಕರೆಯುತ್ತಾ ಬಂದಿದ್ದಾರೆ.

57

ಈ ಸಿನಿಮಾವನ್ನು ಲೋಗಾನ್ ಎನ್ನುವವರು ನಿರ್ದೇಶನ ಮಾಡುತ್ತಿದ್ದು, ಡಿ ಶರವಣ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಇದಕ್ಕೆ ಸಂಗೀತ ನಾರಾಯಣನ್ ಅವರ ನಿರ್ದೇಶನವಿದೆ.

67

ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿರುವ ಸುರೇಶ್ ರೈನಾ, ಮೂರು ಮಾದರಿಯಲ್ಲೂ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಭಾರತದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

77

ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿರುವ ಸುರೇಶ್ ರೈನಾ, ಮೂರು ಮಾದರಿಯಲ್ಲೂ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಭಾರತದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories