ಬೆಂಗಳೂರು: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಈಗಾಗಲೇ ಭಾರತ ತಂಡ ಪ್ರಕಟವಾಗಿದೆ. ಹಾಲಿ ಚಾಂಪಿಯನ್ ಆಗಿರುವ ಭಾರತ ಮತ್ತೊಮ್ಮೆ ಕಪ್ ಗೆಲ್ಲುವ ವಿಶ್ವಾಸದಲ್ಲಿದೆ. ಹೀಗಿರುವಾಗಲೇ ಈ ಆಟಗಾರ ತಂಡಕ್ಕೆ ದೊಡ್ಡ ಹೊರೆಯಾಗುವ ಸಾಧ್ಯತೆಯಿದೆ. ಈ ಕುರಿತಾದ ಅಪ್‌ಡೇಟ್ಸ್ ಇಲ್ಲಿದೆ ನೋಡಿ.
ಬಹುನಿರೀಕ್ಷಿತ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಮುಂಬರುವ ಫೆಬ್ರವರಿ 07ರಿಂದ ಆರಂಭವಾಗಲಿದ್ದು, ಹಾಲಿ ಚಾಂಪಿಯನ್ ಟೀಂ ಇಂಡಿಯಾ ತವರಿನಲ್ಲಿ ಕಪ್ ಗೆಲ್ಲುವ ವಿಶ್ವಾಸದಲ್ಲಿದೆ. ಈಗಾಗಲೇ ಮಹತ್ವದ ಟೂರ್ನಿಗೆ ಬಿಸಿಸಿಐ 15 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿದೆ.
27
ಸೂರ್ಯ ಕಳಪೆ ಫಾರ್ಮ್
ಹೀಗಿರುವಾಗಲೇ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರ ಫಾರ್ಮ್, ತಂಡದ ತಲೆನೋವು ಹೆಚ್ಚಿಸುವಂತೆ ಮಾಡಿದೆ. ಗೌತಮ್ ಗಂಭೀರ್, ಸೂರ್ಯಕುಮಾರ್ ಯಾದವ್ ಅವರನ್ನು ಬಲವಾಗಿ ಬೆಂಬಲಿಸಿದ್ದರಿಂದಾಗಿ ಅವರು ಟಿ20 ತಂಡದ ನಾಯಕರಾಗಿ ಮುಂದುವರೆದಿದ್ದಾರೆ ಎಂದು ವರದಿಯಾಗಿದೆ.
37
ಈ ವರ್ಷ ಕೇವಲ 218 ರನ್ ಗಳಿಸಿರುವ ಸೂರ್ಯ
2025ರಲ್ಲಿ ಸೂರ್ಯಕುಮಾರ್ ಯಾದವ್ ಭಾರತ ಪರ 19 ಟಿ20 ಪಂದ್ಯಗಳನ್ನಾಡಿ ಕೇವಲ 13.62ರ ಬ್ಯಾಟಿಂಗ್ ಸರಾಸರಿಯಲ್ಲಿ ಕೇವಲ 218 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಈ ವರ್ಷ ಸೂರ್ಯ ಒಂದೇ ಒಂದು ಅರ್ಧಶತಕ ಸಿಡಿಸಿಲ್ಲ. ಅವರ ವೈಯುಕ್ತಿಕ ಗರಿಷ್ಠ ಸ್ಕೋರ್ ಅಜೇಯ 47 ರನ್ ಮಾತ್ರ.
ಇದೆಲ್ಲಕ್ಕಿಂತ ಹೆಚ್ಚು ತಲೆನೋವು ಹೆಚ್ಚುವಂತೆ ಮಾಡಿದ್ದು ಸೂರ್ಯಕುಮಾರ್ ಯಾದವ್ ಅವರ ಬ್ಯಾಟಿಂಗ್ ಸ್ಟ್ರೈಕ್‌ರೇಟ್. ಸೂರ್ಯ ಕೇವಲ 123.16 ಸ್ಟ್ರೈಕ್‌ರೇಟ್‌ನಲ್ಲಿ ರನ್ ಗಳಿಸಿದ್ದಾರೆ. ಇದು ಟಿ20 ಕ್ರಿಕೆಟ್‌ನಲ್ಲಿ ಸಾಧಾರಣ ಸ್ಟ್ರೈಕ್‌ರೇಟ್ ಎನಿಸಿಕೊಂಡಿದೆ.
57
ಹೆಡ್ ಕೋಚ್ ಗಂಭೀರ್ ಬೆಂಬಲ
ಸೂರ್ಯಕುಮಾರ್ ಯಾದವ್ ಕಳಪೆ ಫಾರ್ಮ್‌ನ ಹೊರತಾಗಿಯೂ, ಟೀಂ ಇಂಡಿಯಾ ಹೆಡ್‌ಕೋಚ್ ಗೌತಮ್ ಗಂಭೀರ್ ಬಲವಾಗಿ ಬೆಂಬಲಿಸಿದ್ದರಿಂದ ಸೂರ್ಯ ವಿಶ್ವಕಪ್ ಟೂರ್ನಿಗೂ ನಾಯಕನಾಗಿ ಮುಂದುವರೆದಿದ್ದಾರೆ. ಇದು ಸೆಲೆಕ್ಟರ್ಸ್ ಹಾಗೂ ತಜ್ಞರ ತಲೆನೋವು ಹೆಚ್ಚುವಂತೆ ಮಾಡಿದೆ.
67
ಉಳಿದ ಆಟಗಾರರ ಮೇಲೆ ಪರಿಣಾಮ
ಯುವ ಆಟಗಾರರಾದ ಅಭಿಷೇಕ್ ಶರ್ಮಾ, ತಿಲಕ್ ವರ್ಮಾ ಹಾಗೂ ಸಂಜು ಸ್ಯಾಮ್ಸನ್ ಚೆನ್ನಾಗಿ ಪ್ರದರ್ಶನ ತೋರುತ್ತಿದ್ದು, ಇವರ ನಡುವೆ ಸೂರ್ಯ ಕಳಪೆ ಫಾರ್ಮ್ ಉಳಿದ ಆಟಗಾರರ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದ್ದು, ಸೂರ್ಯ ತಂಡಕ್ಕೆ ಹೊರೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
77
ಸೂರ್ಯಕುಮಾರ್ ಯಾದವ್ ವೀಕ್ ಲಿಂಕ್
ಸೂರ್ಯಕುಮಾರ್ ಯಾದವ್ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ನಿಟ್ಟಿನಲ್ಲಿ ವೀಕ್ ಲಿಂಕ್ ಆಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಇದು ತಂಡದ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.