ಬೆಂಗಳೂರು: ಭಾರತಕ್ಕೆ ಟಿ20 ವಿಶ್ವಕಪ್ ಗೆದ್ದುಕೊಟ್ಟ ನಾಯಕ ಸೂರ್ಯಕುಮಾರ್ ಯಾದವ್, ಟಿ20 ತಂಡದಿಂದ ಹೊರಬಿದ್ದಿದ್ದಾರೆ. ಇದರ ಜತೆಗೆ ಭಾರತ ಟಿ20 ತಂಡದ ನಾಯಕತ್ವವನ್ನೂ ಕಳೆದುಕೊಂಡಿದ್ದಾರೆ. ಇದೆಲ್ಲದರ ನಡುವೆ ಆಯ್ಕೆ ಸಮಿತಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಏನದು, ನೋಡೋಣ ಬನ್ನಿ.
ಭಾರತದ ಮಿಸ್ಟರ್ 360 ಖ್ಯಾತಿಯ ಸೂರ್ಯಕುಮಾರ್ ಯಾದವ್ ಇತ್ತೀಚೆಗಷ್ಟೇ ಭಾರತಕ್ಕೆ ತಮ್ಮ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದುಕೊಟ್ಟಿದ್ದರು. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡವು ಒಂದೇ ಒಂದು ಟಿ20 ಸರಣಿಯನ್ನೂ ಸೋತಿರಲಿಲ್ಲ. ಹೀಗಿದ್ದೂ, ಇದೀಗ ಐರ್ಲೆಂಡ್ ಹಾಗೂ ಇಂಗ್ಲೆಂಡ್ ಎದುರಿನ ಟಿ20 ಸರಣಿಗೆ ಸೂರ್ಯಕುಮಾರ್ ಯಾದವ್ ಅವರನ್ನು ತಂಡದಿಂದಲೇ ಕೈಬಿಡಲಾಗಿದೆ.
26
ಸೂರ್ಯ ಬದಲಿಗೆ ಶ್ರೇಯಸ್ ಅಯ್ಯರ್‌ಗೆ ನಾಯಕತ್ವ ಪಟ್ಟ
ಸೂರ್ಯಕುಮಾರ್ ಯಾದವ್ ಅವರ ವಯಸ್ಸು ಹಾಗೂ ಕಳಪೆ ಫಾರ್ಮ್ ಗಮನದಲ್ಲಿಟ್ಟುಕೊಂಡು, ಸೂರ್ಯಕುಮಾರ್ ಯಾದವ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಶ್ರೇಯಸ್ ಅಯ್ಯರ್‌ಗೆ ಭಾರತ ಟಿ20 ತಂಡದ ನಾಯಕತ್ವ ಪಟ್ಟ ಕಟ್ಟಲಾಗಿದೆ. ಇದರ ಬೆನ್ನಲ್ಲೇ ಸೂರ್ಯಕುಮಾರ್ ಯಾದವ್ ಅವರ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಬದುಕು ಮುಗಿದೇ ಹೋಯಿತೇನೋ ಎನ್ನುವಂತಹ ಚರ್ಚೆ ಜೋರಾಗಿತ್ತು.
36
ನಾಯಕತ್ವದಲ್ಲಿ ಅದ್ಭುತ ಟ್ರ್ಯಾಕ್ ರೆಕಾರ್ಡ್ ಹೊಂದಿರುವ ಸೂರ್ಯಕುಮಾರ್ ಯಾದವ್
29ನೇ ವಯಸ್ಸಿನವರೆಗೂ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಲು ಪರದಾಡಿದ್ದ ಸೂರ್ಯ, ಆಬಳಿಕ ಭಾರತದ ನಂ.1 ಟಿ20 ಬ್ಯಾಟರ್ ಆಗಿ ಹೊರಹೊಮ್ಮಿದರು. ಸೂರ್ಯ ನಾಯಕತ್ವದಲ್ಲಿ ಭಾರತ ತಂಡವು 52 ಟಿ20 ಪಂದ್ಯಗಳನ್ನಾಡಿ 52 ಪಂದ್ಯಗಳನ್ನು ಜಯಿಸಿದೆ. ಸೂರ್ಯ ನಾಯಕತ್ವದಲ್ಲಿ ಒಂದೇ ಒಂದು ಟಿ20 ಸರಣಿ ಸೋತಿಲ್ಲ ಎನ್ನುವುದು ವಿಶೇಷ.
ಹೀಗಿರುವಾಗಲೇ ಸೂರ್ಯಕುಮಾರ್ ಯಾದವ್, ತಮ್ಮನ್ನು ಭಾರತ ತಂಡದಿಂದ ಕೈಬಿಟ್ಟ ಬಿಸಿಸಿಐ ಆಯ್ಕೆ ಸಮಿತಿಗೆ ತಮ್ಮ ಬ್ಯಾಟ್ ಮೂಲಕವೇ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಮುಂಬೈ ಟಿ20 ಲೀಗ್‌ನಲ್ಲಿ ಟ್ರಿಂಪಸ್ ನೈಟ್ಸ್ ಎಂಎನ್‌ಇ ತಂಡದ ಪರ ಕಣಕ್ಕಿಳಿದಿರುವ ಸೂರ್ಯ, ಭಾರತ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಸ್ಪೋಟಕ ಬ್ಯಾಟಿಂಗ್ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ.
56
ಆಯ್ಕೆ ಸಮಿತಿಗೆ ಎಚ್ಚರಿಕೆ ರವಾನಿಸಿದ ಸೂರ್ಯಕುಮಾರ್ ಯಾದವ್
ಜೂನ್ 06ರಂದು ಶ್ರೇಯಸ್ ಅಯ್ಯರ್ ನಾಯಕತ್ವದ ಮುಂಬೈ ಫಾಲ್ಕನ್ಸ್ ಎದುರು ಕಣಕ್ಕಿಳಿದ ಸೂರ್ಯಕುಮಾರ್ ಯಾದವ್, ಕೇವಲ 24 ಎಸೆತಗಳಲ್ಲಿ 200ರ ಸ್ಟ್ರೈಕ್‌ರೇಟ್‌ನಲ್ಲಿ ನಾಲ್ಕು ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 48 ರನ್ ಸಿಡಿಸಿ ಅಬ್ಬರಿಸಿದ್ದಾರೆ. ಈ ಮೂಲಕ ತನ್ನಲ್ಲಿ ಇನ್ನೂ ಕ್ರಿಕೆಟ್ ಆಟ ಉಳಿದಿದೆ, ತಾವು ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡಬಲ್ಲೇ ಎನ್ನುವ ಎಚ್ಚರಿಕೆಯನ್ನು ಸೂರ್ಯ ರವಾನಿಸಿದ್ದಾರೆ.
66
ಮೈಚಳಿ ಬಿಟ್ಟು ಬ್ಯಾಟ್ ಬೀಸಿದ ಸೂರ್ಯಕುಮಾರ್ ಯಾದವ್
ಟ್ರಿಂಪಸ್ ನೈಟ್ಸ್ ಎಂಎನ್‌ಇ ತಂಡದ ನಾಯಕ ಸೂರ್ಯಕುಮಾರ್ ಯಾದವ್, ಅಯ್ಯರ್ ಪಡೆ ಎದುರು ಮೈಚಳಿ ಬಿಟ್ಟು ಬ್ಯಾಟ್ ಬೀಸಿದರು. ಸೂರ್ಯಕುಮಾರ್ ಯಾದವ್ ತಮ್ಮ ಸ್ಟನ್ನಿಂಗ್ ಸ್ಕೂಪ್ ಶಾಟ್ ಜತೆಗೆ ತನ್ನೆಲ್ಲಾ ಟ್ರೇಡ್‌ಮಾರ್ಕ್ ಶಾಟ್ ಆಡುವ ಮೂಲಕ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.