ವಿಶ್ವಕಪ್ ಟ್ರೋಫಿ ಗೆಲ್ಲಲು ಭಾರತ ರೆಡಿ; ದಕ್ಷಿಣ ಆಫ್ರಿಕಾ ಎದುರಿನ ಫೈನಲ್ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟ..!

First Published | Jun 29, 2024, 1:00 PM IST

ಬಾರ್ಬಡೊಸ್: ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಆ ದಿನ ಬಂದೇ ಬಿಟ್ಟಿದೆ. 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟವಾಗಿದ್ದು, ಬಹುತೇಕ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.
 

1. ರೋಹಿತ್ ಶರ್ಮಾ:

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಕಳೆದೆರಡು ಪಂದ್ಯಗಳಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ್ದು, ಇದೀಗ ಮಹತ್ವದ ಫೈನಲ್ ಪಂದ್ಯದಲ್ಲೂ ಹರಿಣಗಳ ಪಡೆ ಮೇಲೆ ಸವಾರಿ ಮಾಡಲು ಸಜ್ಜಾಗಿದ್ದಾರೆ.
 

2. ವಿರಾಟ್ ಕೊಹ್ಲಿ:

ಟೂರ್ನಿಯುದ್ದಕ್ಕೂ ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಾ ಬಂದಿದ್ದರೂ, ಬಿಗ್ ಮ್ಯಾಚ್ ಪ್ಲೇಯರ್ ಆಗಿರುವ ವಿರಾಟ್ ಕೊಹ್ಲಿ, ಮತ್ತೊಮ್ಮೆ ಆರಂಭಿಕನಾಗಿ ಕಣಕ್ಕಿಳಿದರೆ ಅಚ್ಚರಿಯೇನಿಲ್ಲ.
 

Tap to resize

3. ರಿಷಭ್ ಪಂತ್:

ವಿಕೆಟ್ ಕೀಪರ್ ಬ್ಯಾಟರ್ ಆಗಿರುವ ರಿಷಭ್ ಪಂತ್ ಕಳೆದ ಪಂದ್ಯದಲ್ಲಿ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದರು. ಆದರೆ ಪಂತ್ ಯಾವುದೇ ಕ್ಷಣದಲ್ಲಿ ಬೇಕಿದ್ದರೂ ಸ್ಪೋಟಕ ಇನಿಂಗ್ಸ್ ಆಡಬಲ್ಲರು ಎನ್ನುವುದು ಗುಟ್ಟಾಗಿಯೇನು ಉಳಿದಿಲ್ಲ.
 

4. ಸೂರ್ಯಕುಮಾರ್ ಯಾದವ್:

ಭಾರತದ ತಾರಾ ಬ್ಯಾಟರ್ ಸೂರ್ಯಕುಮಾರ್ ಯಾದವ್ ಕೂಡಾ ಸದ್ಯ ಭರ್ಜರಿ ಲಯದಲ್ಲಿದ್ದಾರೆ. ಕಳೆದ ಪಂದ್ಯದಲ್ಲಿ ಕೇವಲ 3 ರನ್ ಅಂತರದಲ್ಲಿ ಅರ್ಧಶತಕದಿಂದ ವಂಚಿತರಾಗಿದ್ದ ಸೂರ್ಯ, ಅಪಾಯಕಾರಿ ಬ್ಯಾಟರ್.

5. ಹಾರ್ದಿಕ್ ಪಾಂಡ್ಯ:

ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಆಗಿರುವ ಹಾರ್ದಿಕ್ ಪಾಂಡ್ಯ, ತಮ್ಮ ಅದ್ಭುತ ಲಯದ ಮೂಲಕವೇ ಎದುರಾಳಿ ಪಡೆಯನ್ನು ಕಂಗೆಡಿಸಿದ್ದಾರೆ. ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಪಾಂಡ್ಯ ತಂಡಕ್ಕೆ ಬಲ ತಂದುಕೊಟ್ಟಿದ್ದಾರೆ.
 

6. ಸಂಜು ಸ್ಯಾಮ್ಸನ್:

ಮಧ್ಯಮ ಕ್ರಮಾಂಕದಲ್ಲಿ ಶಿವಂ ದುಬೆ ಮೇಲಿರಿಸಿದ ನಿರೀಕ್ಷೆ ಪದೇ ಪದೇ ಹುಸಿಯಾಗುತ್ತಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ದುಬೆ ಬದಲಿಗೆ ಕೇರಳ ಮೂಲದ ಕ್ರಿಕೆಟಿಗ ಸಂಜು ಸ್ಯಾಮ್ಸನ್‌ಗೆ ಅವಕಾಶ ಸಿಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ.
 

7. ರವೀಂದ್ರ ಜಡೇಜಾ:

ಟೀಂ ಇಂಡಿಯಾದ ಉಪಯುಕ್ತ ಆಲ್ರೌಂಡರ್ ರವೀಂದ್ರ ಜಡೇಜಾ ಕೂಡಾ ಬಿಗ್‌ ಮ್ಯಾಚ್ ಪ್ಲೇಯರ್. ಮಹತ್ವದ ಪಂದ್ಯದಲ್ಲಿ ಒತ್ತಡ ಮೆಟ್ಟಿನಿಂತು ಆಡುವ ಕಲೆ ಜಡೇಜಾಗೆ ಕರಗತವಾಗಿದೆ.
 

8. ಅಕ್ಷರ್ ಪಟೇಲ್:

ಟೀಂ ಇಂಡಿಯಾದ ಸ್ಪಿನ್ ಆಲ್ರೌಂಡರ್ ಅಕ್ಷರ್ ಪಟೇಲ್, ಸೆಮಿಫೈನಲ್ ಪಂದ್ಯದಲ್ಲಿ ಪ್ರಮುಖ 3 ವಿಕೆಟ್ ಕಬಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಜಯಿಸಿದ್ದರು. ಫೈನಲ್‌ನಲ್ಲೂ ಅಕ್ಷರ್ ಪಟೇಲ್ ಮಿಂಚುವ ವಿಶ್ವಾಸದಲ್ಲಿದ್ದಾರೆ.
 

9. ಕುಲ್ದೀಪ್ ಯಾದವ್:

ಟೀಂ ಇಂಡಿಯಾದ ಪ್ರಮುಖ ಸ್ಪಿನ್ ಅಸ್ತ್ರವಾಗಿ ಗುರುತಿಸಿಕೊಂಡಿರುವ ಲೆಗ್‌ಸ್ಪಿನ್ನರ್ ಕುಲ್ದೀಪ್ ಯಾದವ್ ಕಳೆದ ಪಂದ್ಯದಲ್ಲಿ 3 ವಿಕೆಟ್ ಕಬಳಿಸಿದ್ದರು. ಇಂದು ಕುಲ್ದೀಪ್ ಸ್ಪಿನ್ ಮೋಡಿ ಮಾಡಲು ರೆಡಿಯಾಗಿದ್ದಾರೆ.
 

10. ಆರ್ಶದೀಪ್ ಸಿಂಗ್:

ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಎನಿಸಿಕೊಂಡಿರುವ ಎಡಗೈ ವೇಗಿ ಆರ್ಶದೀಪ್ ಸಿಂಗ್, ಇಂದು ಮತ್ತೊಮ್ಮೆ ಮಾರಕ ದಾಳಿ ನಡೆಸಲು ಸಜ್ಜಾಗಿದ್ದಾರೆ.
 

11. ಜಸ್ಪ್ರೀತ್ ಬುಮ್ರಾ:

ಟೀಂ ಇಂಡಿಯಾದ ಪ್ರಮುಖ ವೇಗದ ದಾಳಿಗಾರ ಜಸ್ಪ್ರೀತ್ ಬುಮ್ರಾ, ವಿಕೆಟ್ ಕಬಳಿಸುವುದರ ಜತೆಗೆ ಎದುರಾಳಿ ರನ್ ವೇಗಕ್ಕೂ ಕಡಿವಾಣ ಹಾಕುತ್ತಾ ಬಂದಿದ್ದಾರೆ. ಟೀಂ ಇಂಡಿಯಾ ಕಪ್‌ಗೆ ಮುತ್ತಿಕ್ಕಬೇಕಿದ್ದರೇ ಬುಮ್ರಾ ಮತ್ತೊಮ್ಮೆ ಅಸಾಧಾರಣ ಬೌಲಿಂಗ್ ಪ್ರದರ್ಶನ ತೋರಬೇಕಿದೆ.
 

Latest Videos

click me!