ಇಂಗ್ಲೆಂಡ್ ಎದುರಿನ ಸೆಮಿಫೈನಲ್ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟ..! ದಿಟ್ಟ ನಿರ್ಧಾರ ಕೈಗೊಂಡ್ರಾ ರೋಹಿತ್?

First Published | Jun 27, 2024, 12:31 PM IST

ಗಯಾನ: 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಎರಡನೇ ಸಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟವಾಗಿದ್ದು, ನಾಯಕ ರೋಹಿತ್ ಶರ್ಮಾ ದಿಟ್ಟ ನಿರ್ಧಾರ ಕೈಗೊಂಡ್ರಾ ಎನ್ನುವ ಅನುಮಾನ ಶುರುವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

1. ರೋಹಿತ್ ಶರ್ಮಾ:

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕಳೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ಸ್ಪೋಟಕ ಬ್ಯಾಟಿಂಗ್ ನಡೆಸಿ ಮಿಂಚಿದ್ದರು. ಇಂದು ಮತ್ತೊಮ್ಮೆ ಹಿಟ್‌ಮ್ಯಾನ್ ಆರಂಭಿಕನಾಗಿ ಹಾಗೂ ನಾಯಕನಾಗಿ ಮಿಂಚಲು ರೆಡಿಯಾಗಿದ್ದಾರೆ.
 

2. ವಿರಾಟ್ ಕೊಹ್ಲಿ:

ಆರಂಭಿಕನಾಗಿ ಪದೇ ಪದೇ ವೈಫಲ್ಯ ಅನುಭವಿಸುತ್ತಿದ್ದರೂ ವಿರಾಟ್ ಕೊಹ್ಲಿಗೆ ಇದೀಗ ಮತ್ತೊಮ್ಮೆ ಓಪನ್ನರ್ ಆಗಿ ಅವಕಾಶ ಸಿಗುವ ಸಾಧ್ಯತೆಯಿದೆ. ಈ ಮೂಲಕ ನಾಯಕ ರೋಹಿತ್‌, ಮತ್ತೊಮ್ಮೆ ಕೊಹ್ಲಿ ಪರ ನಿಲ್ಲುವ ದಿಟ್ಟ ನಿರ್ಧಾರ ಕೈಗೊಂಡಂತಿದೆ.
 

Tap to resize

3. ರಿಷಭ್ ಪಂತ್:

ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಟೂರ್ನಿಯುದ್ದಕ್ಕೂ ಮೂರನೇ ಕ್ರಮಾಂಕದಲ್ಲಿ ಸ್ಥಿರ ಪ್ರದರ್ಶನ ತೋರುತ್ತಿದ್ದು, ಇದೀಗ ನಾಕೌಟ್ ಹಂತದಲ್ಲಿ ತಮ್ಮ ಬ್ಯಾಟಿಂಗ್ ಲಯ ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದ್ದಾರೆ.
 

4. ಸೂರ್ಯಕುಮಾರ್ ಯಾದವ್;

ಮಧ್ಯಮ ಕ್ರಮಾಂಕದಲ್ಲಿ ಸ್ಪೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿರುವ ಸೂರ್ಯಕುಮಾರ್ ಯಾದವ್ ಕೂಡಾ ಉತ್ತಮ ಲಯದಲ್ಲಿದ್ದು, ಬಲಾಢ್ಯ ಇಂಗ್ಲೆಂಡ್ ಬೌಲರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ.
 

5. ಶಿವಂ ದುಬೆ:

ಆಸ್ಟ್ರೇಲಿಯಾ ಎದುರು ದುಬೆ 22 ಎಸೆತಗಳಲ್ಲಿ 28 ರನ್ ಸಿಡಿಸಿದ್ದರು. ಹೀಗಾಗಿ ರೋಹಿತ್ ಶರ್ಮಾ ಹಾಗೂ ಟೀಂ ಮ್ಯಾನೇಜ್‌ಮೆಂಟ್ ಮತ್ತೊಮ್ಮೆ ದುಬೆಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ.
 

6. ಹಾರ್ದಿಕ್ ಪಾಂಡ್ಯ:

ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡದ ಆಪತ್ಬಾಂಧವ ಎನಿಸಿಕೊಂಡಿದ್ದು, ಸ್ಥಿರ ಪ್ರದರ್ಶನ ತೋರುತ್ತಾ ಬಂದಿದ್ದಾರೆ.
 

7. ರವೀಂದ್ರ ಜಡೇಜಾ:

ಟೀಂ ಇಂಡಿಯಾ ಮತ್ತೋರ್ವ ಆಲ್ರೌಂಡರ್ ರವೀಂದ್ರ ಜಡೇಜಾ ಕಳೆದ ಪಂದ್ಯದಲ್ಲಿ ಬೌಲಿಂಗ್‌ನಲ್ಲಿ ಕೊಂಚ ದುಬಾರಿಯಾಗಿದ್ದರು. ಹೀಗಿದ್ದೂ ಇಂಗ್ಲೆಂಡ್ ಎದುರು ಉತ್ತಮ ಟ್ರ್ಯಾಕ್ ರೆಕಾರ್ಡ್ ಇರುವುದರಿಂದ ಜಡ್ಡುಗೆ ಮತ್ತೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.
 

8. ಅಕ್ಷರ್ ಪಟೇಲ್:

ಭಾರತ ಕ್ರಿಕೆಟ್ ತಂಡದ ಮತ್ತೋರ್ವ ಎಡಗೈ ಬೌಲಿಂಗ್ ಆಲ್ರೌಂಡರ್ ಅಕ್ಷರ್ ಪಟೇಲ್, ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದು, ಮತ್ತೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತ.
 

9. ಕುಲ್ದೀಪ್ ಯಾದವ್:

ಟೀಂ ಇಂಡಿಯಾ ಮಣಿಕಟ್ಟು ಸ್ಪಿನ್ನರ್ ಕುಲ್ದೀಪ್ ಯಾದವ್, ಶಿಸ್ತುಬದ್ದ ದಾಳಿಯ ಜತೆಗೆ ವಿಕೆಟ್ ಕಬಳಿಸಿ ತಂಡಕ್ಕೆ ಆಸರೆಯಾಗುತ್ತಿದ್ದು, ಇದೀಗ ಇಂಗ್ಲೆಂಡ್ ಬ್ಯಾಟರ್‌ಗಳನ್ನು ತನ್ನ ಸ್ಪಿನ್ ಬಲೆಗೆ ಕೆಡಗಲು ರೆಡಿಯಾಗಿದ್ದಾರೆ.
 

10. ಆರ್ಶದೀಪ್ ಸಿಂಗ್:

ಟೀಂ ಇಂಡಿಯಾ ಎಡಗೈ ವೇಗಿ ಆರ್ಶದೀಪ್ ಸಿಂಗ್, ಟೂರ್ನಿಯಲ್ಲಿ ಭಾರತ ಪರ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್‌ ಆಗಿ ಹೊರಹೊಮ್ಮಿದ್ದಾರೆ. ಆರ್ಶದೀಪ್ ಮತ್ತೊಮ್ಮೆ ಮ್ಯಾಜಿಕ್ ಮಾಡಲು ರೆಡಿಯಾಗಿದ್ದಾರೆ.
 

11. ಜಸ್ಪ್ರೀತ್ ಬುಮ್ರಾ:

ಟೀಂ ಇಂಡಿಯಾದ ವೇಗದ ಬೌಲಿಂಗ್ ಅಸ್ತ್ರ ಜಸ್ಪ್ರೀತ್ ಬುಮ್ರಾ ಎದುರು ಬ್ಯಾಟ್ ಬೀಸಲು ಎದುರಾಳಿ ಪಡೆಯ ಬ್ಯಾಟರ್‌ಗಳು ತಡಬಡಾಯಿಸುತ್ತಿದ್ದಾರೆ. ಟೀಂ ಇಂಡಿಯಾ ಫೈನಲ್‌ಗೇರಬೇಕಿದ್ದರೇ ಬುಮ್ರಾ, ಮತ್ತೆ ಮಾರಕ ದಾಳಿ ನಡೆಸಬೇಕಿದೆ.
 

Latest Videos

click me!