T20 World Cup 2024: ಐರ್ಲೆಂಡ್ ಎದುರಿನ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟ..!

First Published | Jun 5, 2024, 1:33 PM IST

ನ್ಯೂಯಾರ್ಕ್‌: 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಇಂದು ತನ್ನ ಅಭಿಯಾನ ಆರಂಭಿಸಲಿದ್ದು, ಐರ್ಲೆಂಡ್ ಸವಾಲು ಸ್ವೀಕರಿಸಲು ಸಜ್ಜಾಗಿದೆ. ನಾವಿಂದು ಐರ್ಲೆಂಡ್ ಎದುರಿನ ಮೊದಲ ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ ಹೇಗಿರಲಿದೆ ಎನ್ನುವುದನ್ನು ನೋಡೋಣ ಬನ್ನಿ.

1. ವಿರಾಟ್ ಕೊಹ್ಲಿ:

ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ, ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ತೋರಿ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದರು. ಇದೀಗ ಐಪಿಎಲ್‌ ಲಯವನ್ನು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮುಂದುವರೆಸಿಕೊಂಡು ಹೋಗುವ ವಿಶ್ವಾಸದಲ್ಲಿದ್ದಾರೆ.

2. ರೋಹಿತ್ ಶರ್ಮಾ:

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ನಾಯಕನಾಗಿ ಐಸಿಸಿ ಟ್ರೋಫಿ ಗೆಲ್ಲಲು ಇದೇ ಕೊನೆಯ ಅವಕಾಶ. ಹೀಗಾಗಿ ಹಿಟ್‌ಮ್ಯಾನ್ ನಾಯಕನಾಗಿ ಹಾಗೂ ಆರಂಭಿಕನಾಗಿ ಜವಾಬ್ದಾರಿಯುತ ಪ್ರದರ್ಶನ ತೋರಬೇಕಿದೆ.

Latest Videos


3. ರಿಷಭ್ ಪಂತ್:

ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶ ಎದುರು ಆಕರ್ಷಕ ಅರ್ಧಶತಕ ಸಿಡಿಸಿದ್ದ ರಿಷಭ್ ಪಂತ್ ಬರೋಬ್ಬರಿ ಒಂದೂವರೆ ವರ್ಷದ ಬಳಿಕ ಟೀಂ ಇಂಡಿಯಾ ಪರ ಮೊದಲ ಪಂದ್ಯವನ್ನಾಡಲು ಸಜ್ಜಾಗಿದ್ದಾರೆ. ಪಂತ್ ಬ್ಯಾಟಿಂಗ್ ಜತೆಗೆ ವಿಕೆಟ್ ಕೀಪರ್ ಆಗಿಯೂ ಮಿಂಚಬೇಕಿದೆ.

4. ಸೂರ್ಯಕುಮಾರ್ ಯಾದವ್:

ನಂ.1 ಟಿ20 ಬ್ಯಾಟರ್ ಸೂರ್ಯಕುಮಾರ್ ಯಾದವ್ ಮೇಲೆ ತಂಡ ಸಾಕಷ್ಟು ನಿರೀಕ್ಷೆಯಿಟ್ಟಿದೆ. ಪಾಕಿಸ್ತಾನ ಎದುರಿನ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಐರ್ಲೆಂಡ್ ಎದುರು ದೊಡ್ಡ ಮೊತ್ತ ಸಿಡಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಲು ಸೂರ್ಯ ಸಜ್ಜಾಗಿದ್ದಾರೆ.

5. ಶಿವಂ ದುಬೆ:

17ನೇ ಆವೃತ್ತಿಯ ಐಪಿಎಲ್‌ನಲ್ಲಿ ಹಾರ್ಡ್ ಹಿಟ್ಟಿಂಗ್ ಮೂಲಕ ಅಬ್ಬರಿಸಿದ್ದ ಶಿವಂ ದುಬೆ, ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗೇಮ್ ಚೇಂಜರ್ ಆಗಬಲ್ಲರು. ದುಬೆ ಮೇಲೂ ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್ ಸಾಕಷ್ಟು ನಿರೀಕ್ಷೆಯಿಟ್ಟಿದೆ.

6. ಹಾರ್ದಿಕ್ ಪಾಂಡ್ಯ:

ಐಪಿಎಲ್‌ನಲ್ಲಿ ವೈಪಲ್ಯ ಅನುಭವಿಸಿದ್ದ ಹಾರ್ದಿಕ್ ಪಾಂಡ್ಯ, ಇದೀಗ ಅಭ್ಯಾಸ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿ ಗಮನ ಸೆಳೆದಿದ್ದರು. ಪಾಂಡ್ಯ ಲಯ ಕಂಡುಕೊಳ್ಳಲು ಈ ಪಂದ್ಯ ಉತ್ತಮ ಅವಕಾಶ ಎನಿಸಿದೆ.

7. ರವೀಂದ್ರ ಜಡೇಜಾ:

ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಜಡ್ಡು ಐಪಿಎಲ್‌ನಲ್ಲಿ ಮಿಂಚಿರಲಿಲ್ಲ, ಇದೀಗ ನ್ಯಾಷನಲ್ ಟೀಂನಲ್ಲಿ ಅಬ್ಬರಿಸಲು ರೆಡಿಯಾಗಿದ್ದಾರೆ.

8. ಕುಲ್ದೀಪ್ ಯಾದವ್:

ಟೀಂ ಇಂಡಿಯಾ ಅನುಭವಿ ಲೆಗ್‌ಸ್ಪಿನ್ನರ್ ಕುಲ್ದೀಪ್ ಯಾದವ್, ಮತ್ತೊಮ್ಮೆ ಸ್ಪಿನ್ ಜಾದೂ ಮಾಡಲು ಸಜ್ಜಾಗಿದ್ದಾರೆ. ಕುಲ್ದೀಪ್ ಕೈಚಳಕ ನಡೆದರೆ ಐರ್ಲೆಂಡ್ ಬ್ಯಾಟರ್‌ಗಳು ಪರದಾಡೋದು ಪಕ್ಕಾ.

9. ಮೊಹಮ್ಮದ್ ಸಿರಾಜ್:

ಟೀಂ ಇಂಡಿಯಾ ಅನುಭವಿ ವೇಗಿ ಮೊಹಮ್ಮದ್ ಸಿರಾಜ್ ಮಾರಕ ದಾಳಿ ನಡೆಸುವ ಸಾಮರ್ಥ್ಯವಿರುವ ವೇಗಿ. ಸಿರಾಜ್ ಇದೀಗ ಹೊಸ ಚೆಂಡಿನಲ್ಲಿ ಮಾರಕ ದಾಳಿ ನಡೆಸಲು ಸಜ್ಜಾಗಿದ್ದಾರೆ.

10. ಜಸ್ಪ್ರೀತ್ ಬುಮ್ರಾ:

ಟೀಂ ಇಂಡಿಯಾ ಡೆತ್ ಓವರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ, ಸದ್ಯ ರೆಡ್ ಹಾಟ್ ಫಾರ್ಮ್‌ನಲ್ಲಿದ್ದು, ಐರ್ಲೆಂಡ್ ಬ್ಯಾಟರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ.

11. ಯುಜುವೇಂದ್ರ ಚಹಲ್:

ಟೀಂ ಇಂಡಿಯಾದ ಮತ್ತೋರ್ವ ಅನುಭವಿ ಲೆಗ್‌ಸ್ಪಿನ್ನರ್ ಚಹಲ್, ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ತೋರಿ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡಿದ್ದಾರೆ. ಚಹಲ್ ಕೂಡಾ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ಖಚಿತ ಎನಿಸಿದೆ.

click me!