ಪಾಕಿಸ್ತಾನ ಎದುರಿನ ಹೈವೋಲ್ಟೇಜ್ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟ; ಒಂದು ಮೇಜರ್ ಚೇಂಜ್?

First Published | Jun 9, 2024, 11:27 AM IST

ನ್ಯೂಯಾರ್ಕ್‌: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಕಾದಾಡಲು ವೇದಿಕೆ ಸಜ್ಜಾಗಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಟೀಂ ಇಂಡಿಯಾ ಒಂದು ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

1.  ವಿರಾಟ್ ಕೊಹ್ಲಿ:

ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ, ಐರ್ಲೆಂಡ್ ಎದುರು ಅಲ್ಪ ಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದರು. ಆದರೆ ಪಾಕ್ ಎದುರು ಉತ್ತಮ ಟ್ರ್ಯಾಕ್ ರೆಕಾರ್ಡ್ ಹೊಂದಿರುವ ಕೊಹ್ಲಿ, ಮತ್ತೆ ಅಬ್ಬರಿಸಲು ರೆಡಿಯಾಗಿದ್ದಾರೆ.

2. ರೋಹಿತ್ ಶರ್ಮಾ:

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕಳೆದ ಪಂದ್ಯದಲ್ಲಿ ಅಜೇಯ ಅರ್ಧಶತಕ ಸಿಡಿಸಿ ಮಿಂಚಿದ್ದರು. ಇದೀಗ ಮತ್ತೊಮ್ಮೆ ಅದೇ ಲಯ ಮುಂದುವರೆಸಿಕೊಂಡು ಹೋಗುವ ವಿಶ್ವಾಸದಲ್ಲಿದ್ದಾರೆ ಹಿಟ್‌ಮ್ಯಾನ್

Tap to resize

3. ರಿಷಭ್ ಪಂತ್:

ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಕಳೆದ ಪಂದ್ಯದಲ್ಲಿ ಅಜೇಯ ಬ್ಯಾಟಿಂಗ್ ನಡೆಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ದರು. ಪಂತ್ ಪ್ರದರ್ಶನದ ಮೇಲೆ ಎಲ್ಲರ ನಿಗಾ ಇದೆ.

4. ಸೂರ್ಯಕುಮಾರ್ ಯಾದವ್:

ಅಪಾಯಕಾರಿ ಬ್ಯಾಟರ್ ಸೂರ್ಯಕುಮಾರ್ ಯಾದವ್, ಕಳೆದ ಪಂದ್ಯದಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿ ಅಲ್ಪ ಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದರು. ಸೂರ್ಯ ಇಂದು ಜವಾಬ್ದಾರಿಯುತ ಆಟವಾಡಬೇಕಿದೆ.

5. ಹಾರ್ದಿಕ್ ಪಾಂಡ್ಯ:

ಕಳೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪ್ರಮುಖ 3 ವಿಕೆಟ್ ಕಬಳಿಸಿ ಮಿಂಚಿದ್ದರು. ಬ್ಯಾಟಿಂಗ್‌ನಲ್ಲೂ ಸ್ಪೋಟಕ ಇನಿಂಗ್ಸ್ ಆಡುವ ವಿಶ್ವಾಸದಲ್ಲಿದ್ದಾರೆ ಪಾಂಡ್ಯ.

6. ಶಿವಂ ದುಬೆ:

ನೀಳಕಾಯದ ಹಾರ್ಡ್‌ ಹಿಟ್ಟರ್ ಶಿವಂ ದುಬೆ, ಐಪಿಎಲ್ ಟೂರ್ನಿಯಲ್ಲಿ ಮ್ಯಾಚ್ ಫಿನಿಶರ್ ಆಗಿ ಗಮನ ಸೆಳೆದಿದ್ದರು. ಇದೀಗ ಪಾಕ್ ಎದುರು ಸಿಕ್ಕ ಅವಕಾಶ ಸದುಪಯೋಗ ಪಡಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ.

7. ರವೀಂದ್ರ ಜಡೇಜಾ:

ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಜಡೇಜಾ ಕಳೆದ ಪಂದ್ಯದಲ್ಲಿ ಕೇವಲ ಒಂದು ಓವರ್‌ ಅಷ್ಟೇ ಬೌಲಿಂಗ್ ಮಾಡಿದ್ದರು. ಇಂದು ಜಡ್ಡು ತಮ್ಮ ಆಲ್ರೌಂಡ್ ಕೌಶಲ್ಯ ಅನಾವರಣ ಮಾಡಲು ರೆಡಿಯಾಗಿದ್ದಾರೆ.

8. ಕುಲ್ದೀಪ್ ಯಾದವ್:

ಮಹತ್ವದ ಪಂದ್ಯಕ್ಕೆ ಇಂದು ಅಕ್ಷರ್ ಪಟೇಲ್ ಬದಲಿಗೆ ಮಣಿಕಟ್ಟು ಸ್ಪಿನ್ನರ್ ಕುಲ್ದೀಪ್ ಯಾದವ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ. ಲೆಗ್‌ಸ್ಪಿನ್ನರ್ ಕುಲ್ದೀಪ್ ಯಾದವ್, ಪಾಕ್ ಬ್ಯಾಟರ್‌ಗಳನ್ನು ಕಾಡಲು ರೆಡಿಯಾಗಿದ್ದಾರೆ.

9. ಮೊಹಮ್ಮದ್ ಸಿರಾಜ್:

ವೇಗಿ ಸಿರಾಜ್ ಕಳೆದ ಪಂದ್ಯದಲ್ಲಿ 3 ಓವರ್ ಬೌಲಿಂಗ್ ಮಾಡಿ ಕೇವಲ 13 ರನ್ ನೀಡಿ ಒಂದು ವಿಕೆಟ್ ಕಬಳಿಸಿದ್ದರು. ಸಿರಾಜ್, ಇದೀಗ ಪಾಕ್ ಎದುರು ಮಿಂಚಿನ ದಾಳಿ ನಡೆಸಲು ಸಜ್ಜಾಗಿದ್ದಾರೆ.

10. ಜಸ್ಪ್ರೀತ್ ಬುಮ್ರಾ:

ಟೀಂ ಇಂಡಿಯಾ ಮಾರಕ ವೇಗಿ ಬುಮ್ರಾ ಎಷ್ಟು ಅಪಾಯಕಾರಿ ಬೌಲರ್ ಎನ್ನುವುದು ಜಗತ್ತಿಗೆ ಗೊತ್ತು. ಕಳೆದ ಪಂದ್ಯದಲ್ಲಿ ಬುಮ್ರಾ 3 ಓವರ್ ಬೌಲಿಂಗ್ ಮಾಡಿ ಒಂದು ಮೇಡನ್ ಓವರ್ ಸಹಿತ ಕೇವಲ 6 ರನ್ ನೀಡಿ 2 ವಿಕೆಟ್ ಪಡೆದಿದ್ದರು.

11. ಆರ್ಶದೀಪ್ ಸಿಂಗ್

ಎಡಗೈ ವೇಗಿ ಆರ್ಶದೀಪ್ ಸಿಂಗ್ ಕಳೆದ ಪಂದ್ಯದಲ್ಲಿ ಕೊಂಚ ದುಬಾರಿಯಾದರೂ 2 ವಿಕೆಟ್ ಉರುಳಿಸಿದ್ದರು. ಪಾಕ್ ಎದುರು ಆರ್ಶದೀಪ್ ಸಿಂಗ್‌ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆ ದಟ್ಟವಾಗಿದೆ.

Latest Videos

click me!