ಬೆಂಗಳೂರು: 10ನೇ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಇಂದು ಅಧಿಕೃತ ಚಾಲನೆ ಸಿಕ್ಕಿದೆ. ಹೀಗಿರುವಾಗಲೇ ಟೀಂ ಇಂಡಿಯಾಗೆ ಬಿಗ್ ಶಾಕ್ ಎದುರಾಗಿದ್ದು, ಸ್ಟಾರ್ ವೇಗಿ ಹರ್ಷಿತ್ ರಾಣಾ ಹೊರಬಿದ್ದಿದ್ದಾರೆ. ಇದರ ಬೆನ್ನಲ್ಲೇ ಸಿರಾಜ್ ತಂಡ ಕೂಡಿಕೊಂಡಿದ್ದಾರೆ. ಈ ಕುರಿತಾದ ಅಪ್‌ಡೇಟ್ಸ್ ಇಲ್ಲಿದೆ.
ಫೆಬ್ರವರಿ 04ರಂದು ದಕ್ಷಿಣ ಆಫ್ರಿಕಾ ಎದುರಿನ ಅಭ್ಯಾಸ ಪಂದ್ಯದ ವೇಳೆಯಲ್ಲಿ ಹರ್ಷಿತ್ ರಾಣಾ ಮೊಣಕಾಲು ಗಾಯಕ್ಕೊಳಗಾಗಿದ್ದರು. ಹೀಗಾಗಿ ಹರಿಣಗಳೆದುರು ಕೇವಲ ಒಂದು ಓವರ್ ಬೌಲಿಂಗ್ ಮಾಡಿ 16 ರನ್ ಚಚ್ಚಿಸಿಕೊಂಡು ಮೈದಾನ ತೊರೆದಿದ್ದರು. ಇದೀಗ ರಾಣಾ ಗಾಯದ ಪರಿಸ್ಥಿತಿ ಅವಲೋಕಿಸಿದ ಬಿಸಿಸಿಐ ವೈದ್ಯಕೀಯ ಸಿಬ್ಬಂದಿ ಅವರಿಗೆ ರೆಸ್ಟ್ ಮಾಡಲು ಸಲಹೆ ನೀಡಿದೆ. ಹೀಗಾಗಿ ಟಿ20 ವಿಶ್ವಕಪ್ ಟೂರ್ನಿಯಿಂದ ರಾಣಾ ಹೊರಬಿದ್ದಿದ್ದಾರೆ.
36
ಡಿಎಸ್‌ಪಿ ಸಿರಾಜ್‌ಗೆ ಬುಲಾವ್
ಇದೀಗ ಹರ್ಷಿತ್ ರಾಣಾ, ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಬೆನ್ನಲ್ಲೇ ಭಾರತ ಪರ 45 ಟೆಸ್ಟ್, 50 ಏಕದಿನ ಹಾಗೂ 16 ಟಿ20 ಪಂದ್ಯಗಳನ್ನಾಡಿರುವ ಅನುಭವಿ ವೇಗಿ ಡಿಎಸ್‌ಪಿ ಖ್ಯಾತಿಯ ಮೊಹಮ್ಮದ್ ಸಿರಾಜ್, ಭಾರತ ಟಿ20 ವಿಶ್ವಕಪ್ ತಂಡ ಕೂಡಿಕೊಂಡಿದ್ದಾರೆ. ಸಿರಾಜ್ 2024ರ ಭಾರತ ಟಿ20 ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದರು.
ಇನ್ನು ಟೀಂ ಇಂಡಿಯಾ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಕೂಡಾ ಇಂದಿನ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಯಿದೆ. ಸದ್ಯ ಸುಂದರ್ ಪಕ್ಕೆಲುಬಿನ ಸ್ನಾಯು ಸೆಳೆತಕ್ಕೆ ಒಳಗಾಗಿದ್ದು, ಯುಎಸ್‌ಎ ಎದುರಿನ ಇಂದಿನ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆ ದಟ್ಟವಾಗಿದೆ.
56
ಇಂದಿನ ಪಂದ್ಯಕ್ಕೆ ಜಸ್ಪ್ರೀತ್ ಬುಮ್ರಾ ಗೈರು?
ಇನ್ನು ಟೀಂ ಇಂಡಿಯಾ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಕೂಡಾ ಇಂದಿನ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆ ದಟ್ಟವಾಗಿದೆ. ಬುಮ್ರಾ ಕೂಡಾ ಜ್ವರದಿಂದ ಬಳಲುತ್ತಿದ್ದು, ಇಂದಿನ ಪಂದ್ಯದಲ್ಲಿ ಬುಮ್ರಾ ಬದಲಿಗೆ ಸಿರಾಜ್ ಆಡುವ ಹನ್ನೊಂದರ ಬಳಗ ಕೂಡಿಕೊಳ್ಳುವ ನಿರೀಕ್ಷೆಯಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.