ದುಬೈ: ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಗೆ ಅಧಿಕೃತ ಚಾಲನೆ ಸಿಕ್ಕಿದೆ. ಮೊದಲಿಗೆ ಅರ್ಹತಾ ಸುತ್ತಿನ ಪಂದ್ಯಗಳು (Qualifier Matches) ಅರಂಭವಾಗಿದ್ದು, ಅಕ್ಟೋಬರ್ 23ರಿಂದ ಸೂಪರ್ 12 ಹಂತದ ಪಂದ್ಯಗಳು ಆರಂಭವಾಗಲಿವೆ. ಹೀಗಿರುವಾಗಲೇ ಕಪ್ ಗೆಲ್ಲಬಲ್ಲ ನೆಚ್ಚಿನ ತಂಡಗಳಲ್ಲಿ ಒಂದು ಎನಿಸಿರುವ ನ್ಯೂಜಿಲೆಂಡ್ ಕ್ರಿಕೆಟ್ ತಂಡದ (New Zealand Cricket Team) ಪಾಳಯದಲ್ಲಿ ಆತಂಕ ಮನೆ ಮಾಡಿದೆ. ಯಾಕೆ? ಏನಾಯ್ತು? ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ
ಮೊಣಕೈ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಅಕ್ಟೋಬರ್ 23ರಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್‌ನ ಸೂಪರ್-12 ಹಂತದ ಆರಂಭಿಕ ಕೆಲ ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆ ಇದೆ.
27
ಈ ಬಗ್ಗೆ ಮಾತನಾಡಿದ ಕೇನ್ ವಿಲಿಯಮ್ಸನ್, ‘ಗಾಯ ಸಣ್ಣದು. ಆದರೆ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದೇನೆ. ಅದಾಗ್ಯೂ ವಿಶ್ವ ಚಾಂಪಿಯನ್‌ಶಿಪ್ ಫೈನಲ್ ಬಳಿಕ ನಾನು ಕಳೆದ 2 ತಿಂಗಳಲ್ಲಿ ಸಾಕಷ್ಟು ಸುಧಾರಿಸಿದ್ದೇನೆ. ಶೇ.100ರಷ್ಟು ಗುಣಮುಖವಾಗಲು ಕೆಲ ಸಮಯ ಹಿಡಿಯಲಿದೆ’ ಎಂದಿದ್ದಾರೆ.
37
ಭಾರತ ವಿರುದ್ದ ಸೌಥಾಂಪ್ಟನ್‌ನಲ್ಲಿ ನಡೆದ ಚೊಚ್ಚಲ ಆವೃತ್ತಿಯ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ ಬಳಿಕ ಕೇನ್ ವಿಲಿಯಮ್ಸನ್ ಕ್ರಿಕೆಟ್‌ನಿಂದ ಬಿಡುವು ಪಡೆದುಕೊಂಡಿದ್ದರು.
47
ಪರಿಣಾಮ ಜುಲೈ ಹಾಗೂ ಆಗಸ್ಟ್ ತಿಂಗಳಿನಲ್ಲಿ ಇಂಗ್ಲೆಂಡ್‌ನಲ್ಲೇ ನಡೆದ ಚೊಚ್ಚಲ ಆವೃತ್ತಿಯ 'ದಿ ಹಂಡ್ರೆಡ್' ಕ್ರಿಕೆಟ್ ಲೀಗ್‌ನಿಂದ ಕೇನ್ ವಿಲಿಯಮ್ಸನ್ ಹಿಂದೆ ಸರಿದಿದ್ದರು. ಇದಾದ ಬಳಿಕ ಯುಎಇನಲ್ಲಿ ನಡೆದ ಐಪಿಎಲ್ ಟೂರ್ನಿಯ ಮೂಲಕ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಿದ್ದರು.
57
ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಯುಎಇ ಹಾಗೂ ಓಮನ್‌ನಲ್ಲಿ ಅಕ್ಟೋಬರ್ 17ರಿಂದ ಆರಂಭವಾಗಿದೆ. ಮೊದಲಿಗೆ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿದ್ದು, ಇಲ್ಲಿ 2 ಗುಂಪಿನಲ್ಲೂ ಅಗ್ರಸ್ಥಾನ ಪಡೆಯುವ 4 ತಂಡಗಳು ಸೂಪರ್ 12 ಹಂತಕ್ಕೆ ಪ್ರವೇಶ ಪಡೆಯಲಿವೆ.
67
ಸೂಪರ್ 12 ಹಂತದ ಪಂದ್ಯಗಳು ಅಕ್ಟೋಬರ್ 23ರಿಂದ ಆರಂಭವಾಗಲಿವೆ. ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 26ರಂದು ಪಾಕಿಸ್ತಾನ ವಿರುದ್ಧ ಆಡಲಿದೆ.
77
ನ್ಯೂಜಿಲೆಂಡ್ ಕ್ರಿಕೆಟ್ ತಂಡವು ಇದುವರೆಗೂ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕಪ್ ಜಯಿಸಿಲ್ಲ. ಹೀಗಾಗಿ ಕಪ್ ಗೆಲ್ಲಬಲ್ಲ ನೆಚ್ಚಿನ ತಂಡಗಳಲ್ಲಿ ಒಂದು ಎಂದು ಗುರುತಿಸಿಕೊಂಡಿರುವ ನ್ಯೂಜಿಲೆಂಡ್ ತಂಡವು ಹೊಸ ಹುರುಪಿನೊಂದಿಗೆ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಂಡಿದೆ.